ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಶಾಶ್ವತ ಕಾರ್ಯಕ್ರಮ
Team Udayavani, Feb 18, 2017, 12:52 PM IST
ತಿ.ನರಸೀಪುರ: ಶಾಶ್ವತ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶಗಳ ಜನರಿಗೆ ಸಮರ್ಪಕವಾಗಿ ಮೂಲ ಸೌಕರ್ಯವನ್ನು ಕಲ್ಪಿಸಲಾಗುವುದೆಂದು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ಲೋಕೋಪಯೋಗಿ ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ 7 ಕೋಟಿ ರೂ. ಅನುದಾನದಲ್ಲಿ ಮಾದೇಗೌಡನಹುಂಡಿ ಹುನಗನಹಳ್ಳಿ ಮುಖ್ಯ ರಸ್ತೆಗೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರಾಗಿ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿನ ಹಳ್ಳಿಗಳನ್ನು ಕಾಂಗ್ರೆಸ್ ಸರ್ಕಾರದ ಅವಧಿ ಪೂರ್ಣಗೊಳ್ಳುವುದರೊಳಗೆ ಸಂಪೂರ್ಣವಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು.
ಹುನಗನಹಳ್ಳಿಯಿಂದ ಪಟ್ಟೇಹುಂಡಿ ಮಾರ್ಗವಾಗಿ ರಂಗಸಮುದ್ರ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ 7 ಕೋಟಿ ರೂ. ಅನುದಾನವನ್ನು ನೀಡಲಾಗಿದೆ. ಕೆರೆಗಳ ಆಧುನೀಕರಣ ಹಾಗೂ ವಿಶೇಷ ಘಟಕ ಯೋಜನೆಯಡಿ ಸಿಸಿ ರಸ್ತೆ ಅಭಿವೃದ್ಧಿಗೆ ಕೋಟಿಗಟ್ಟಲೆ ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಲಾಗಿದೆ.
ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಕ್ಷೇತ್ರ ಪ್ರವಾಸವನ್ನು ಹಮ್ಮಿಕೊಂಡು ಅಭಿವೃದ್ಧಿ ಕಾಮಗಾರಿಗಳೊಂದಿಗೆ ಸಾಮಾನ್ಯ ಜನರು ಸಮಸ್ಯೆಗಳನ್ನು ಪರಿಹರಿಸಲು ಆದ್ಯತೆಯನ್ನು ನೀಡುತ್ತಿದ್ದೇನೆ ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಕೆಎಂಎಫ್ ನಿರ್ದೇಶಕ ಹಾಗೂ ಜಿ.ಪಂ ಮಾಜಿ ಅಧ್ಯಕ್ಷ ಕೆ.ಸಿ.ಬಲರಾಂ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆಯನ್ನು ನೀಡುತ್ತಿದ್ದಾರೆ. ಅವರ ಸೂಚನೆಯಂತೆ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕ್ಷೇತ್ರದಲ್ಲಿ ಸಂಚಾರವನ್ನು ಕೈಗೊಂಡು ಪಕ್ಷದ ಸಂಘಟನೆಯೊಂದಿಗೆ ವರುಣಾ ವಿಧಾನಸಭಾ ಕ್ಷೇತ್ರದ ಜನರಿಗೆ ಹತ್ತಿರವಾಗುತ್ತಿದ್ದಾರೆ ಎಂದು ತಿಳಿಸಿದರು.
ಗಗೇìಶ್ವರಿ ಜಿ.ಪಂ ಕ್ಷೇತ್ರದ ಸದಸ್ಯೆ ಜಯಮ್ಮ ಶಿವಸ್ವಾಮಿ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ವಾಸುದೇವ್, ಸಿಎಂ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ಜಿಪಂ ಮಾಜಿ ಸದಸ್ಯ ಕೆ.ಮಹದೇವ, ತಾಪಂ ಸದಸ್ಯೆ ಪಲ್ಲವಿ ಮಂಜುನಾಥ್, ಎಪಿಎಂಸಿ ನಿರ್ದೇಶಕ ಎನ್.ಅನಿಲ್‌ಕುಮಾರ್, ಪಿಕಾರ್ಡ್ ಬ್ಯಾಂಕ್ ನಿರ್ದೇಶಕರಾದ ಕೆಂಪಯ್ಯನಹುಂಡಿ ಮಹದೇವಣ್ಣ,
ನಾರಾಯಣ, ಕುರುಬರ ಸಂಘದ ಅಧ್ಯಕ್ಷ ಟಿ.ಎಸ್.ಪ್ರಶಾಂತ್‌ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಮುದ್ದೇಗೌಡ, ಚಾಮರಾಜನಗರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಎನ್.ಸೋಮು, ಮಾಧ್ಯಮ ವಕ್ತಾರ ಸಂತೃಪ್ತಿಕುಮಾರ್, ಕಾರ್ಮಿಕ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಜಿ.ಎನ್.ಗೋಪಾಲ್‌ರಾಜ್, ಗ್ರಾಪಂ ಮಾಜಿ ಅಧ್ಯಕ್ಷರಾದ ಕುಪ್ಯ ಭಾಗ್ಯಮ್ಮ, ಜೆ.ಶಿವರಾಮ, ಮನ್ನೇಹುಂಡಿ ಮಹೇಶ್, ಗೋಪಿ, ಮಾಜಿ ಉಪಾಧ್ಯಕ್ಷ ಆರ್.ಮಹದೇವ,
ಲೋಕೋಪಯೋಗಿ ಎಇಇ ರಾಜಕುಮಾರ್, ತಾಪಂ ಕಾರ್ಯನಿರ್ವಹಕ ಅಧಿಕಾರಿ ಬಿ.ಎಸ್.ರಾಜು, ಜಿಪಂ ಸಹಾಯಕ ಎಂಜಿನಿಯರ್‌ಗಳಾದ ಬೋರಯ್ಯ, ರವಿಕುಮಾರ್, ಸೆಸ್ಕಾಂ ಎಇಇ ಎ.ಎಂ.ಶಂಕರ್, ಎಇ ಮಹೇಶ್, ಪಿಎಸ್‌ಐ ಎನ್.ಆನಂದ್, ಮುಖಂಡರಾದ ಎಂ.ವೆಂಕಟೇಶ್(ವೆಂಕಿ), ಅರುಣ್‌ಗೌಡ, ಬಟ್ಟಾಳಿಗೆಹುಂಡಿ ಶಿವಣ್ಣ, ಹುನಗನಹಳ್ಳಿ ರಾಜು, ತಿರುಮಕೂಡಲು ಚೇತನ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.