ಮೇ ಅಂತ್ಯಕ್ಕೆ ನೀಲಾವರ-ಕೂರಾಡಿ ಸೇತುವೆ ಪೂರ್ಣ: ಸಚಿವ ಪ್ರಮೋದ್
Team Udayavani, Feb 19, 2017, 8:59 AM IST
ಬ್ರಹ್ಮಾವರ: ಬಹುದಿನಗಳ ಕನಸಾದ ನೀಲಾವರ-ಕೂರಾಡಿ ಸಂಪರ್ಕ ಸೇತುವೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಮೇ ಅಂತ್ಯದೊಳಗೆ ಪೂರ್ಣ ಗೊಳ್ಳುವ ನಿರೀಕ್ಷೆ ಇದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಶನಿವಾರ ಕುಂಜಾಲಿನಲ್ಲಿ ನೀಲಾವರ ಗ್ರಾಮ ಮಟ್ಟದ ಜನ ಸಂಪರ್ಕ ಸಭೆ ಉದ್ಘಾಟಿಸಿದರು. ಸಚಿವನಾಗಿ ಆಯ್ಕೆಯಾದ ಮೇಲೆ ರಾಜ್ಯದೆಲ್ಲೆಡೆ ಸಂಚರಿಸಬೇಕಾದ ಕಾರ್ಯ ಒತ್ತಡವಿದ್ದರೂ ಕ್ಷೇತ್ರದ ಜನರ ಅಹ ವಾಲುಗಳಿಗೆ ಸ್ಪಂದಿಸಬೇಕೆಂಬ ಉದ್ದೇಶ
ದಿಂದ ರಾಜ್ಯದಲ್ಲೇ ಮೊತ್ತಮೊದಲ ಬಾರಿಗೆ ಗ್ರಾಮ ಮಟ್ಟದಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಳ್ಳ ಲಾಗುತ್ತಿದೆ. ಎಲ್ಲ ಇಲಾಖಾ ಅಧಿಕಾರಿ ಗಳನ್ನು ಒಳಗೊಂಡ ಇಡೀ ಸರಕಾರವೇ ಗ್ರಾಮಕ್ಕೆ ಆಗಮಿಸು ವುದರಿಂದ ಜನರು ಇದರ ಸದುಪಗಪಡಿಸಿಕೊಳ್ಳಬೇಕು ಎಂದರು.
ಗ್ರಾಮಗಳಿಗೆ ಮಹತ್ವ
ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಿ ಕೋಟ್ಯಂತರ ರೂ. ಅನುದಾನದಿಂದ ಅಭಿವೃದ್ಧಿ ಕಾರ್ಯ ಕೈಗೊಂಡಿದೆ. ಬಿಪಿಎಲ್ ಕಾರ್ಡ್ ಪಡೆಯಲು ಸೂಕ್ತ ಅನುಕೂಲ ಕಲ್ಪಿಸಿದೆ. ಬಸವ ವಸತಿ ಅನುದಾನ ಹೆಚ್ಚಿಸಿದೆ, ವಿವಿಧ ಭಾಗ್ಯಗಳನ್ನು ಕರುಣಿಸಿದೆ ಎಂದು ಪ್ರಮೋದ್ ಅವರು ಹೇಳಿದರು.
ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ಅಕ್ರಮ ಸಕ್ರಮ- ಸಮಿತಿ ಅಧ್ಯಕ್ಷ ಮೈರ್ಮಾಡಿ ಅಶೋಕ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಸದಸ್ಯರಾದ ಗೋಪಿ ಕೆ. ನಾಯ್ಕ, ಸುಧೀರ್ ಕುಮಾರ್ ಶೆಟ್ಟಿ, ಪಂಚಾಯತ್ ಅಧ್ಯಕ್ಷೆ ಆಶಾ ಕೋಟ್ಯಾನ್, ಉಪಾಧ್ಯಕ್ಷ ರಮೇಶ್ ಪೂಜಾರಿ, ಸದಸ್ಯರು, ತಹಶೀಲ್ದಾರ್ ಪ್ರದೀಪ್ ಕುಡೇìಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ, ಕಂದಾಯ ಅಧಿಕಾರಿ ಲಕ್ಷ್ಮೀನಾರಾಯಣ ಭಟ್, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು. ಕೆಡಿಪಿ ಸದಸ್ಯ ಉಮೇಶ್ ಎ. ನಾಯ್ಕ ಸ್ವಾಗತಿಸಿ, ನಾಗಯ್ಯ ಮಠಪತಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.