ಪಾಳು ಭೂಮಿ ಸದ್ಬಳಕೆಯ ಪ್ರಸ್ತಾವನೆ ಇಟ್ಟ ಕೇಂದ್ರ

Team Udayavani, Feb 21, 2017, 12:03 PM IST

krishna-byre-.jpg

ಬೆಂಗಳೂರು: ಕಾರಣಾಂತರಗಳಿಂದ ರೈತರು ಕೃಷಿ ಚಟುವಟಿಕೆ ನಡೆಸದ ಜಮೀನನ್ನು ಬೇರೆಯವರಿಗೆ ಕೃಷಿ ಚಟುವಟಿಕೆಗಾಗಿಯೇ ಗುತ್ತಿಗೆ ನೀಡಲು “ಮಾದರಿ ಗುತ್ತಿಗೆ ಕಾಯ್ದೆ’ ರೂಪಿಸುವ ಸಂಬಂಧ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳ ಮುಂದೆ ಪ್ರಸ್ತಾವನೆ ಇಟ್ಟಿದೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಕರ್ನಾಟಕ ಕೃಷಿ ಬೆಲೆ ಆಯೋಗವು ಸೋಮ ವಾರ ನಾಗರಭಾವಿಯ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ (ಐಸೆಕ್‌) ಸಭಾಂಗಣದಲ್ಲಿ ಆಯೋಜಿಸಿದ್ದ “ರೈತರ ಆದಾಯ ಮತ್ತು ಕಲ್ಯಾಣ ವೃದ್ಧಿ ಪ್ರಾಯೋಗಿಕ ಯೋಜನೆ’ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, “ಮಾದರಿ ಗುತ್ತಿಗೆ ಕಾಯ್ದೆ’ ರೂಪಿಸುವಂತೆ ನೀತಿ ಆಯೋಗ ನೀಡಿರುವ ಸಲಹೆಯನ್ನು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಕಳುಹಿಸಿದೆ ಎಂದು ತಿಳಿಸಿದರು.

ಕೇಂದ್ರದ ಸಲಹೆಯಂತೆ ಕಾಯ್ದೆ ರೂಪಿಸಬೇ ಕೆಂದರೆ ರಾಜ್ಯ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಬೇಕಾಗುತ್ತದೆ. ಈ ವಿಚಾರವಾಗಿ ಕೃಷಿ ತಜ್ಞರು, ರೈತರು ಸೇರಿದಂತೆ ಎಲ್ಲರೊಂದಿಗೆ ಚರ್ಚೆ ನಡೆಸಿ, ಸಲಹೆ ಪಡೆಯಬೇಕಾಗುತ್ತದೆ. ಹಾಗಾಗಿ ಈ ವಿಚಾರವಾಗಿ ರಾಜ್ಯ ಸರ್ಕಾರ  ಇನ್ನೂ ಯಾವುದೇ ನಿಲುವಿಗೆ ಬಂದಿಲ್ಲ ಎಂದು ಹೇಳಿದರು.

ರೈತರು ಕೃಷಿ ಚಟುವಟಿಕೆ ಕೈಗೊಳ್ಳದ ಜಮೀನು  ಕೈಗಾರಿಕೆ ಅಥವಾ ಕಂಪನಿಗಳಿಗೆ ಗುತ್ತಿಗೆ ನೀಡುವ ಪ್ರಸ್ತಾವನೆ ಅಲ್ಲ. ರೈತರಿಂದ ರೈತರಿಗೆ ಕೃಷಿ ಚಟುವಟಿಕೆಗೆ ಮಾತ್ರವೇ ಗುತ್ತಿಗೆ ನೀಡುವ ಪ್ರಸ್ತಾವನೆ ಅದಾಗಿದೆ ಎಂದು ಸ್ಪಷ್ಟಪಡಿಸಿದರು.

ಇಂತಹ ಕಾಯ್ದೆ ರೂಪುಗೊಂಡರೆ ನೀರಿನ ಸಮಸ್ಯೆ, ಕಾರ್ಮಿಕರ ಸಮಸ್ಯೆ, ಬಂಡವಾಳ ಸಮಸ್ಯೆ ಹೀಗೆ ಹಲವು ಕಾರಣಗಳಿಂದ ರೈತರು ಬೀಳು ಬಿಟ್ಟಿರುವ ತಮ್ಮ ಭೂಮಿಯನ್ನು ಅಕ್ಕಪಕ್ಕದ ರೈತರಿಗೆ ಅಥವಾ ಭೂಮಿ ಇಲ್ಲದಿದ್ದರೂ ಕೃಷಿಯಲ್ಲಿ ಆಸಕ್ತಿ ಇರುವ ಕುಟುಂಬಗಳಿಗೆ ನಿರ್ದಿಷ್ಟ ಕಾಲಮಿತಿಯಲ್ಲಿ ಗುತ್ತಿಗೆ ನೀಡಲು ನೆರವಾಗಬಹುದು ಎಂದು ಹೇಳಿದರು.

ಸರ್ಕಾರಗಳ ವೈಫ‌ಲ್ಯ: ಖ್ಯಾತ ಕೃಷಿ ಮತ್ತು ಆಹಾರ ನೀತಿ ವಿಮರ್ಶಕ ಡಾ.ದೇವೇಂದ್ರ ಶರ್ಮಾ ಮಾತನಾಡಿ, ರೈತರ ಆದಾಯ ಇತರೆ ಕ್ಷೇತ್ರದ ಜನರಂತೆ ಹೆಚ್ಚಳವಾಗದಿರುವುದಕ್ಕೆ ಸರ್ಕಾರಗಳೇ ಕಾರಣ. ರೈತರು ಕೃಷಿಯಲ್ಲಿ ಎಂದೂ ಸೋತಿಲ್ಲ. ಆದರೆ, ರೈತರಿಗೆ ಸೂಕ್ತ ಸಾಲ, ಸೌಲಭ್ಯ, ಬೆಂಬಲ ಬೆಲೆ, ಮಾರುಕಟ್ಟೆ, ಸಹಕಾರ ನೀಡುವಲ್ಲಿ ಸರ್ಕಾರಗಳು ಸಂಪೂರ್ಣ ನಿರ್ಲಕ್ಷ್ಯಧೋರಣೆ ಅನುಸರಿಸಿಕೊಂಡು ಬಂದಿವೆ ಎಂದರು. 

ಕಳೆದ 45 ವರ್ಷಗಳಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯಿಂದ ಅವರ ಆದಾಯ ಶೇ. 120ರಿಂದ 150ರಷ್ಟು ಹೆಚ್ಚಳವಾಗಿದೆ. ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರ ವೇತನ 150 ರಿಂದ 170ರಷ್ಟು ಹೆಚ್ಚಿದೆ. ಐಟಿ, ಬಿಟಿಯವರ ಆದಾಯ ಶೇ.280ರಷ್ಟು ಹೆಚ್ಚಿದೆ. ಆದರೆ, ರೈತರ ಆದಾಯ ಶೇ.19ರಷ್ಟು ಮಾತ್ರ ಹೆಚ್ಚಾಗಿದೆ. 

ತಿದ್ದುಪಡಿ ಅಗತ್ಯ: ಐಸೆಕ್‌ ಆಡಳಿತ ಮಂಡಳಿ ಅಧ್ಯಕ್ಷ ಡಾ.ಎ. ರವೀಂದ್ರ ಮಾತನಾಡಿ, ರೈತರ ಆದಾಯ ಹೆಚ್ಚಬೇಕಾದರೆ ಕೃಷಿ ಉತ್ಪಾದನೆ ಹೆಚ್ಚಬೇಕು. ಪ್ರತಿ ಬೆಳೆಗೂ ವೈಜ್ಞಾನಿಕ ಬೆಂಬಲ ಬೆಲೆ, ಮಧ್ಯವರ್ತಿ ರಹಿತ ಮಾರುಕಟ್ಟೆ ವ್ಯವಸೆ ಕಲ್ಪಿಸಬೇಕು, ಜತೆಗೆ ಕೃಷಿಯನ್ನೂ ಒಂದು ವ್ಯಾಪಾರ ಆಗಿ ಮಾರ್ಪಡಿಸಬೇಕು. ಇದಕ್ಕಾಗಿ ಭೂ ಸುಧಾರಣಾ ಕಾಯ್ದೆಗೆ ಅಗತ್ಯ ತಿದ್ದುಪಡಿ ತರಬೇಕು ಎಂದು ಪ್ರತಿಪಾದಿಸಿದರು. 

ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಟಿ.ಎನ್‌. ಪ್ರಕಾಶ್‌ ಕಮ್ಮರಡ್ಡಿ ಮಾತನಾಡಿ, ಆಯೋಗವು ರೈತರ ಆದಾಯ ಕಲ್ಯಾಣ ವೃದ್ಧಿಗೆ ಕಾರ್ಯಯೋಜನೆ ರೂಪಿಸಿದ್ದು, ಯೋಜನೆಗೆ ತುಮಕೂರು, ಕೋಲಾರ, ಚಿತ್ರದುರ್ಗ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ತಲಾ ಒಂದೊಂದು ಗ್ರಾಮಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಆಯಾ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರಗಳು ಯೋಜನೆ ಕಾರ್ಯಗತಗೊಳಿಸುವ ಜವಾಬ್ದಾರಿ ಹೊಂದಿವೆ. ಆಯ್ಕೆ ಮಾಡಿದ ಗ್ರಾಮದ ರೈತರಿಗೆ ಸರ್ಕಾರದ ಎಲ್ಲಾ ಯೋಜನೆಗಳನ್ನೂ ಸಮರ್ಪಕವಾಗಿ ತಲು ಪಿಸಿ ವರ್ಷದಿಂದ ವರ್ಷಕ್ಕೆ ಅವರ ಆದಾಯ ದಲ್ಲಾಗುವ ಹೆಚ್ಚಳ ಗಮನಿಸಲಾಗುವುದು ಎಂದು ವಿವರಿಸಿದರು. 

ಐಸೆಕ್‌ ನಿರ್ದೇಶಕ ಡಾ.ಎಂ.ಜಿ. ಚಂದ್ರಕಾಂತ್‌, ಕೃಷಿ ಬೆಲೆ ಆಯೋ ಗದ ಸದಸ್ಯ ಹನುಮನಗೌಡ ಬೆಳಗುರ್ಕಿ, ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿ ಡಾ.ಎಂ.ಮಹದೇವಪ್ಪ ಹಾಗೂ ಕರುಬೂರು ಶಾಂತ ಕುಮಾರ್‌ ಸೇರಿದಂತೆ ಹಲವು ರೈತ ಮುಖಂಡರು ಪಾಲ್ಗೊಂಡಿದ್ದರು. 

ಬರ ಹಿನ್ನೆಲೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಿಡುಗಡೆಯಾಗಿರುವ 450 ಕೋಟಿ ರೂ. ಬರ ಪರಿಹಾರ ಮೊತ್ತವನ್ನು ರೈತರಿಗೆ ಹಂಚಿದರೆ ಪುಡಿಗಾಸೂ ಸಿಗುವುದಿಲ್ಲ. ಹೀಗಾಗಿ, ಇನ್ನೂ ಆ ಹಣ ಹಂಚಿಕೆ ಮಾಡಿಲ್ಲ. ಕೇಂದ್ರ ಸರ್ಕಾರಕ್ಕೆ ಇನ್ನಷ್ಟು ಹಣಕ್ಕಾಗಿ ಬೇಡಿಕೆ ಇಡಲಾಗಿದ್ದು ಸೂಕ್ತ ಭರವಸೆಯೂ ಸಿಕ್ಕಿದೆ. ಹೆಚ್ಚುವರಿ ಹಣ ಬಂದ ಬಳಿಕ ರೈತರ ಖಾತೆಗಳಿಗೆ ನೇರ ಜಮೆ ಮಾಡಲಾಗುವುದು. 
-ಕೃಷ್ಣಬೈರೇಗೌಡ, ಕೃಷಿ ಸಚಿವ

ನೀತಿ ಆಯೋಗದ ರೈತರ ಬೀಳು ಭೂಮಿ ಗುತ್ತಿಗೆ ನೀಡುವ “ಮಾಡೆಲ್‌ ಲೀಸ್‌ ಆ್ಯಕ್ಟ್’ ಪ್ರಸ್ತಾವನೆಯ ಹಿಂದೆ ರೈತರನ್ನು ಒಕ್ಕಲೆಬ್ಬಿಸಿ ಕೈಗಾರಿಕೆಗಳಿಗೆ, ಕಂಪನಿಗಳಿಗೆ ಲ್ಯಾಂಡ್‌ ಬ್ಯಾಂಕ್‌ ಸೃಷ್ಟಿಸಿ ಭೂಮಿ ವಶಪಡಿಸಿಕೊಳ್ಳುವ ಪರೋಕ್ಷ ಹುನ್ನಾರದ ಜತೆಗೆ ಕಡಿಮೆ ವೇತನಕ್ಕೆ ಕೈಗಾರಿಕೆಗಳಿಗೆ ಕಾರ್ಮಿಕರನ್ನು ಒದಗಿಸುವ ಕುತಂತ್ರ ಅಡಗಿದೆ. ಇದರ ಬದಲು ರೈತರಿಗೆ ಕೃಷಿಯಲ್ಲಿ ಕೌಶಲ್ಯ ತರಬೇತಿ, ಅಗತ್ಯ ಸಾಲ ಸೌಲಭ್ಯ, ನೀರಾವರಿ ಯೋಜನೆ, ತಾಂತ್ರಿಕ ಸಹಕಾರ, ಸಹಾಯಧನ ನೀಡುವ ಅಗತ್ಯವಿದೆ. 
-ಡಾ.ದೇವೇಂದ್ರ ಶರ್ಮಾ, ಖ್ಯಾತ ಕೃಷಿ ಮತ್ತು ಆಹಾರ ನೀತಿ ವಿಮರ್ಶಕ

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.