26ರಂದು ಮತ್ತೊಂದು ಉದ್ಯೋಗ ಮೇಳ
Team Udayavani, Feb 21, 2017, 1:27 PM IST
ಧಾರವಾಡ: ಉದ್ಯೋಗ ಮೇಳದಿಂದ ಉತ್ತಮ ಸ್ಪಂದನೆ ದೊರಕಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ಫೆ.26ರಂದು ವಿದ್ಯಾಗಿರಿಯ ಜೆಎಸ್‌ಎಸ್ ಮಹಾವಿದ್ಯಾಲಯದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.
ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಬಳಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗವನ್ನು ಕೇಂದ್ರವನ್ನಾಗಿ ಇಟ್ಟುಕೊಂಡು ಮಾಡಲಾದ ಉದ್ಯೋಗ ಉತ್ಸವ ಹಾಗೂ ಮಿನಿ ಉದ್ಯೋಗ ಮೇಳಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ.
ಅದರಲ್ಲೂ ಉದ್ಯೋಗ ಉತ್ಸವದಲ್ಲಿ ಭಾಗವಹಿಸಿದ 45 ಸಾವಿರ ಅಭ್ಯರ್ಥಿಗಳ ಪೈಕಿ 17 ಸಾವಿರ ಜನರಿಗೆ ಉದ್ಯೋಗ ನೀಡುವಲ್ಲಿ ಮೇಳ ಯಶಸ್ವಿಯಾಗಿದೆ.ಆದರೆ 9 ಸಾವಿರ ಜನರಷ್ಟೇ ಆ ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ ಎಂದರು.
ಈ ಹಿಂದಿನ ಮೇಳದಲ್ಲಿ ಆಗಿರುವ ಲೋಪದೋಷಗಳು ಪುನರಾವರ್ತನೆ ಆಗದಂತೆ ನಿರುದ್ಯೋಗ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ಒದಗಿಸುವ ನಿಟ್ಟಿನಲ್ಲಿ ಫೆ.26ರಂದು ಜೆಎಸ್‌ಎಸ್ ಕಾಲೇಜು ಆವರಣದಲ್ಲಿ ಈಗ ಮತ್ತೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈಗಾಗಲೇ 50ಕ್ಕೂ ಹೆಚ್ಚು ಕಂಪನಿಗಳು ನೋಂದಣಿ ಮಾಡಿಕೊಂಡಿದ್ದು, ಇದರೊಂದಿಗೆ ಸ್ಥಳೀಯ ಕಂಪನಿಗಳು ಭಾಗವಹಿಸಲಿವೆ ಎಂದರು.
ಸ್ಥಳೀಯರಿಗೆ ಆದ್ಯತೆ: ಸ್ಥಳೀಯ ಕಂಪನಿಗಳು ಸ್ಥಳೀಯರಿಗೆ ಆದ್ಯತೆ ನೀಡುವಂತೆ ಈಗಾಗಲೇ ಮನವಿ ಮಾಡಿದ್ದು, ಅದಕ್ಕಾಗಿ ಸ್ಥಳೀಯ ಕಂಪನಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ ಸೂಚನೆ ನೀಡಲಾಗಿದೆ. ಹೀಗಾಗಿ ಈ ಮೇಳದಲ್ಲಿ 2-3 ಸಾವಿರ ಉದ್ಯೋಗ ಅವಕಾಶ ಸ್ಥಳೀಯರಿಗೆ ಸಿಗುವ ನಿರೀಕ್ಷೆ ಇದೆ.
ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ, ಡಿಪ್ಲೋಮಾ ಹಾಗೂ ಎಲ್ಲ ಪದವೀಧರರು ಭಾಗವಹಿಸಬಹುದು. ಆಸಕ್ತರು ಇಲ್ಲಿನ ಅಂಬೇಡ್ಕರ ಭವನದಲ್ಲಿನ ವಿದ್ಯಾ ಸ್ನೇಹಿ ಸಂಪರ್ಕ ಕೇಂದ್ರ(18004255540) ಸಂಪರ್ಕಿಸುವ ಮೂಲಕ ಉಚಿತವಾಗಿ ಹೆಸರು ನೋಂದಾಯಿಸಬಹುದು ಎಂದರು.
ವೈಶುದೀಪ ಪ್ರತಿಷ್ಠಾನ, ಜನತಾ ಶಿಕ್ಷಣ ಸಮಿತಿ, ಉದ್ಯೋಗ ಮತ್ತು ತರಬೇತಿ ಇಲಾಖೆ ಸಹಯೋಗದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಬಾರಿಯ ಮೇಳದಲ್ಲಿ ತಮ್ಮ ವಿದ್ಯಾರ್ಹತೆಗೆ ತಕ್ಕ ಕಂಪನಿಗಳಿಗೆ ಮಾತ್ರ ಉದ್ಯೋಗ ನೀಡುವಂತೆ ವಿದ್ಯಾರ್ಥಿ ಸಮೂಹಕ್ಕೆ ನೀಡುವಂತೆ ತಿಳಿಸಲಾಗುವುದು ಎಂದರು.
ಈ ಬಾರಿಯ ಉದ್ಯೋಗದಲ್ಲಿ ನಿರುದ್ಯೋಗಿಗಳಿಗೆ ಮಾತ್ರ ಅವಕಾಶವಿದೆ. ಈಗಾಗಲೇ ಕೆಲಸ ಮಾಡುತ್ತಿರುವವರು ಹೆಚ್ಚಿನ ವೇತನಕ್ಕಾಗಿ ಮೇಳದಲ್ಲಿ ಭಾಗವಹಿಸುತ್ತಾರೆ. ಅಂಥವರಿಗೆ ಅವಕಾಶ ನೀಡಲಾಗುವುದಿಲ್ಲ. ಮೇಳದಲ್ಲಿ ಸುಮಾರು 3-4 ಸಾವಿರ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗ ಸಿಗುವಂತಾಗಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.