ತಿಂಗಳಲ್ಲಿ ಕ್ರೀಡಾಪಟುಗಳ ಕೈಸೇರಲಿದೆ 14 ಕೋಟಿ ರೂ. ನಗದು


Team Udayavani, Feb 22, 2017, 12:08 PM IST

amt.jpg

ಬೆಂಗಳೂರು: ಅಂತಾ ರಾಷ್ಟ್ರೀಯ, ರಾಷ್ಟ್ರೀಯ ಮಟ್ಟದ ವಿವಿಧ ಕೂಟಗಳಲ್ಲಿ ಭಾಗವಹಿಸಿ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ಇನ್ನೊಂದು ತಿಂಗಳಲ್ಲಿ ನಗದು ಬಹುಮಾನ ಕೈಸೇರಲಿದೆ. ಹೀಗೆಂದು ಕ್ರೀಡಾ ಇಲಾಖೆ ಮೂಲಗಳು  ಉದಯವಾಣಿಗೆ ಸ್ಪಷ್ಟಪಡಿಸಿವೆ. 

ಕ್ರೀಡಾ ಇಲಾಖೆ ಈ ಹಿಂದೆ ಕಳುಹಿಸಿದ್ದ ಪಟ್ಟಿಯಲ್ಲಿನ ತಪ್ಪು ತಿದ್ದಿ ಕಳುಹಿಸಲು ಹಣಕಾಸು ಇಲಾಖೆ ಸೂಚಿಸಿದ್ದು, ಸದ್ಯದಲ್ಲೇ ಒಟ್ಟಾರೆ 14.50 ಕೋಟಿ ರೂ. ಕ್ರೀಡಾಪಟುಗಳಿಗೆ ವಿತರಣೆಯಾಗಲಿದೆ.

“ಪದಕ ಗೆದ್ದರೂ ರಾಜ್ಯದ ಕ್ರೀಡಾಪಟುಗಳಿಗೆ ಕಾಸು ಸಿಕ್ಕಿಲ್ಲ’ ಎಂಬ ವರದಿ ಪ್ರಕಟಗೊಂಡ  ಬೆನ್ನಲ್ಲೇ ಕ್ರೀಡಾ ಸಚಿವ ಪ್ರಮೋದ್‌ ಮಧ್ವರಾಜ್‌ ಹಣಕಾಸು ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಬಿ.ಎನ್‌.ಎಸ್‌. ಪ್ರಸಾದ್‌ ಜತೆಗೆ ತುರ್ತು ಸಭೆ ನಡೆಸಿದ್ದರು. ಪದಕ ವಿಜೇತರಿಗೆ ನೀಡಲು ಬಾಕಿ ಇರುವ ಒಟ್ಟು 14.50 ಕೋಟಿ ರೂ. ನಗದು ಬಹುಮಾನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು. ಸಚಿವರ ಮನವಿಗೆ ಸ್ಪಂದಿಸಿದ ಹೆಚ್ಚುವರಿ ಕಾರ್ಯದರ್ಶಿಗಳು ಅರ್ಹ ಕ್ರೀಡಾಪಟುಗಳ ಪಟ್ಟಿ ಕಳುಹಿಸಿಕೊಡುವಂತೆ ಸೂಚಿಸಿದ್ದರು.

ಕ್ರೀಡಾ ಇಲಾಖೆಯಿಂದ ಪರಿಷ್ಕೃತ ಪಟ್ಟಿ
ಕ್ರೀಡಾ ಇಲಾಖೆಯಿಂದ ಒಂದು ಪಟ್ಟಿಯನ್ನು ಕಳುಹಿಸಿ ಕೊಡ ಲಾಗಿತ್ತು. ಆದರೆ ಕೆಲ ಪದಕ ವಿಜೇತರ ಹೆಸರು ಎರಡೆರಡು ಬಾರಿ ನಮೂದಿಸಲ್ಪಟ್ಟಿದೆ. ಕೆಲವೊಂದು ತಪ್ಪಾಗಿ ನಮೂದಾಗಿದೆ. ಇದರಿಂದ ಹಣಕಾಸು ಇಲಾಖೆ ಸ್ಪಷ್ಟನೆ ಕೋರಿದೆ. 

ಹೀಗಾಗಿ ಕ್ರೀಡಾ ಇಲಾಖೆ ಮತ್ತೂಂದು ಬಾರಿಗೆ ಅರ್ಜಿಯನ್ನು ಪರಿಶೀಲಿಸುವ ಕೆಲಸ  ಆರಂಭಿಸಿದೆ. ಅರ್ಹರಿಗೆ ಮಾತ್ರ ಹಣ ದೊರೆಯಲಿದೆ. 

ಇನ್ನೊಂದು ತಿಂಗಳೊಳಗೆ ಎಲ್ಲ ಪದಕ ವಿಜೇತ ಕ್ರೀಡಾಪಟುಗಳಿಗೂ ನಗದು ಪುರಸ್ಕಾರ ತಲುಪಲಿದೆ ಎಂದು ಕ್ರೀಡಾ ಇಲಾಖೆ ಮೂಲಗಳು ಸ್ಪಷ್ಟಪಡಿಸಿವೆ. 2014ರಿಂದಲೇ ಅನುದಾನವಿಲ್ಲದೆ ಪದಕ ಗೆದ್ದ ಕ್ರೀಡಾಪಟುಗಳಿಗೆ ನಿಯಮಾನುಸಾರ ನಗದು ಪುರಸ್ಕಾರ ನೀಡಲು ಸಾಧ್ಯವಾಗಿರಲಿಲ್ಲ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.