ಸೆಲ್ವಂ ಪ್ರವಾಸ, ಸ್ಟಾಲಿನ್ ಉಪವಾಸ
Team Udayavani, Feb 23, 2017, 3:50 AM IST
ಚೆನ್ನೈ: ತಮಿಳುನಾಡಿನಲ್ಲಿ ಬಂಡಾಯದ ಕಹಳೆವೂದಿ ರಾಜಕೀಯ ಬಿಕ್ಕಟ್ಟಿಗೆ ಕಾರಣರಾದ ಮಾಜಿ ಸಿಎಂ ಪನ್ನೀರ್‌ಸೆಲ್ವಂ ಇದೀಗ ಹೊಸ ರೀತಿಯ ಚಳವಳಿಗೆ ಸಿದ್ಧತೆ ನಡೆಸಿದ್ದಾರೆ.
ಎಂಜಿಆರ್ ಮಾದರಿಯಲ್ಲೇ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ಪನ್ನೀರ್ ನಿರ್ಧರಿಸಿದ್ದಾರೆ. ಇದಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ತೆರೆದ ಮಹೀಂದ್ರಾ ಜೀಪ್‌ನಲ್ಲಿ ಪ್ರತಿ ಕ್ಷೇತ್ರಕ್ಕೂ ಭೇಟಿ ನೀಡಿ, ಶಶಿಕಲಾ ಬಣವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಿದ್ದಾರೆ. ಆದರೆ, ಇವರ ರಾಜ್ಯಪ್ರವಾಸ ಯಾವಾಗ ಆರಂಭವಾಗಲಿದೆ ಎಂಬ ಮಾಹಿತಿ ಸಿಕ್ಕಿಲ್ಲ.
ಇನ್ನೊಂದೆಡೆ, ಪಳನಿಸ್ವಾಮಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿರುವುದನ್ನು ಖಂಡಿಸಿ ಡಿಎಂಕೆ ರಾಜ್ಯಾದ್ಯಂತ ಪ್ರತಿಭಟನೆ ಆರಂಭಿಸಿದೆ. ಬುಧವಾರ ಪಕ್ಷದ ನಾಯಕ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹವೂ ನಡೆಯಿತು.
ಇದೇ ವೇಳೆ, ತಮಿಳುನಾಡು ವಿಧಾನಸಭೆಯ ನಿಯಮಗಳನ್ನು ಉಲ್ಲಂ ಸಿ ವಿಶ್ವಾಸಮತ ಪ್ರಕ್ರಿಯೆ ನಡೆದಿದೆ ಎಂಬ ಆರೋಪಕ್ಕೆ ಕುರಿತು ವಿಡಿಯೋ ಕ್ಲಿಪ್ಪಿಂಗ್‌ಗಳು, ಫೋಟೋಗಳು ಅಥವಾ ಇತರೆ ಸಾಕ್ಷ್ಯಗಳಿದ್ದರೆ ಒದಗಿಸಿ ಎಂದು ಡಿಎಂಕೆಗೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ.
“ಅಮ್ಮಾ’ಗೆ ಕೊಕ್?
ರಾಜ್ಯ ಸರ್ಕಾರದ ಎಲ್ಲ ಯೋಜನೆಗ ಳಿಂದಲೂ ಮಾಜಿ ಸಿಎಂ ಜಯಲಲಿತಾ ಅವರ ಫೋಟೋವನ್ನು ಮತ್ತು “ಅಮ್ಮಾ’ ಎಂಬ ಹೆಸರನ್ನು ತೆಗೆದುಹಾಕುವಂತೆ ಕೋರಿ ರಿಟ್ ಅರ್ಜಿಯೊಂದು ಮದ್ರಾಸ್ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾ ಗಿದೆ. ಕೆ. ಬಾಲು ನೇತೃತ್ವದ ಸಾಮಾಜಿಕ ನ್ಯಾಯಕ್ಕಾಗಿ ವಕೀಲರ ವೇದಿಕೆ ಎಂಬ ಸಂಘಟನೆಯು ಈ ಅರ್ಜಿ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.