ಕೋಟೇಶ್ವರ : ಭೂಮಿ ಹಕ್ಕುಪತ್ರಕ್ಕೆ ಆಗ್ರಹಿಸಿ ನಿವೇಶನ ರಹಿತರ ಸಮಾವೇಶ
Team Udayavani, Feb 23, 2017, 12:01 PM IST
ಕುಂದಾಪುರ: ಕೇಂದ್ರ ಸರಕಾರ ಇಂದಿರಾ ಅವಾಜ್ ಯೋಜನೆಯಡಿ ದೇಶದಲ್ಲಿ ಸ್ವಂತ ಮನೆ ಇಲ್ಲದವರು ಉಳಿಯದಂತೆ ಯೋಜನೆ ರೂಪಿಸಿದ್ದರೂ ಕೂಡಾ ದೇಶದಲ್ಲಿ 2 ಕೋಟಿ ಕುಟುಂಬ ಗ್ರಾಮೀಣ ಭಾರತದಲ್ಲಿ ಸ್ವಂತ ಮನೆ ಇಲ್ಲದವರಿದ್ದಾರೆ. ಶೇ. 3 ಗ್ರಾಮೀಣ ನಿವೇಶನ ರಹಿತರಿದ್ದಾರೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕೋಟೇಶ್ವರ ಗ್ರಾಮ ಸಮಿತಿ ಅಧ್ಯಕ್ಷ ಸ್ಥಳೀಯ ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಯದೇವಾಡಿಗ ಹೇಳಿದರು.
ಕೋಟೇಶ್ವರ ರಥಬೀದಿಯ ಶಾರದ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಕೋಟೇಶ್ವರ ಗ್ರಾ.ಪಂ. ವ್ಯಾಪ್ತಿಯ ಮನೆ ನಿವೇಶನ ರಹಿತ ಅರ್ಜಿದಾರರ ಸಮಾವೇಶದಲ್ಲಿ ಮಾತನಾಡಿದರು.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಸಮಾವೇಶದಲ್ಲಿ ಮಾತನಾಡುತ್ತ, ಗ್ರಾಮೀಣ ಪ್ರದೇಶದ ಜನಸಂಖ್ಯೆಯ ಅರ್ಧಕ್ಕಿಂತಲೂ ಹೆಚ್ಚಿಗೆ ಮನೆ ಇಲ್ಲದವರು, ಸುಮಾರು 5 ಕೋಟಿ ಜನರಿಗೆ ಸ್ವಂತ ಭೂಮಿ ಇಲ್ಲ, ತುಂಡು ಭೂಮಿ ಇಲ್ಲ, ವಸತಿ ರಹಿತರ ಗೋಳು ಕೇಳುವವರಿಲ್ಲ ಎಂದು ಹೇಳಿದರು. ಮನೆ ನಿವೇಶನ ರಹಿತರ ಬೇಡಿಕೆ ಈಡೇರಿಸುವುದಕ್ಕೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಯು. ದಾಸಭಂಡಾರಿ, ರಾಜೀವ ಪಡುಕೋಣೆ, ಪದ್ಮಾವತಿ ಶೆಟ್ಟಿ, ಕುಶಲಾ, ರತ್ನಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.