ರೋಟರಿ ಶತಮಾನೋತ್ಸವ: ವಿವಿಧ ಕಾರ್ಯಕ್ರಮ ಆಯೋಜನೆ
Team Udayavani, Feb 24, 2017, 12:06 PM IST
ಕೆ.ಆರ್.ನಗರ: ದೇಶಕ್ಕೆ ಶಾಪವೆಂಬಂತೆ ಇದ್ದ ಪೋಲಿಯೋವನ್ನು ತೊಡೆದುಹಾಕುವಲ್ಲಿ ಸರ್ಕಾರದೊಂದಿಗೆ ರೋಟರಿ ಸಂಸ್ಥೆ ನಡೆಸಿದ ಅವಿರತ ಪ್ರಯತ್ನದ ಫಲಿಸಿದೆ. ದೇಶ ಪೋಲಿಯೋ ಮುಕ್ತವಾಗಿದೆ. ಇದು ರೋಟರಿ ಸಂಸ್ಥೆಯ ಸಾಮಾಜಿಕ ಕಳಕಳಿಯ ಹೆಗ್ಗುರುತಾಗಿದೆ ಎಂದು ರೋಟರಿ ಸಂಸ್ಥೆಯ ಜಿಲ್ಲಾ ಗವರ್ನರ್ ಡಾ.ಎಸ್.ಆರ್.ನಾಗಾರ್ಜುನ್ ಹೇಳಿದರು.
ರೋಟರಿ ಸಂಸ್ಥೆ ದತ್ತಿನಿಧಿ ಎಂದು ಪ್ರಾರಂಭಿಸಿದ್ದು, ಈಗ ಶತಮಾನೋತ್ಸವದ ಅಂಚಿನಲ್ಲಿದೆ. ಆ ಪ್ರಯುಕ್ತ ಜಿಲ್ಲಾದ್ಯಂತ ಲಕ್ಷಾಂತರ ಸಸಿಗಳನ್ನು ನೆಡುವ ಹಾಗೂ ಆರೋಗ್ಯ ಶಿಬಿರ ನಡೆಸಲಾಗುತ್ತದೆ. ಸಂಸ್ಥೆಯ ತಾಲೂಕು ಘಟಕದ ವತಿಯಿಂದ ಸುಂಕನಹಳ್ಳಿ ಗ್ರಾಮವನ್ನು ದತ್ತು ಪಡೆದು ಅಲ್ಲಿಗೆ ಮೂಲ ಸೌಕರ್ಯಗಳನ್ನು ಒದಗಿಸುತ್ತಿರುವುದರ ಬಗ್ಗೆ ಗವರ್ನರ್ ಮೆಚ್ಚುಗೆ ವ್ಯಕ್ತಪಡಿಸಿದರು.
ರೋಟರಿ ಸಂಸ್ಥೆ 10 ರಾಷ್ಟ್ರಗಳಲ್ಲಿ ವ್ಯಾಪಿಸಿದ್ದು, 13ನೇ ವರ್ಷಕ್ಕೆ ದಾಪು ಗಾಲಿಡುತ್ತಿದೆ. ಲಕ್ಷಕ್ಕಿಂತಲೂ ಹೆಚ್ಚು ಸದಸ್ಯರನ್ನು 3 ಸಾವಿರ ರೋಟರಿ ಕ್ಲಬ್‌ಗಳು ಹೊಂದಿವೆ ಎಂದು ತಿಳಿಸಿದರು. ಕೆ.ಆರ್. ನಗರ ರೋಟರಿ ಸಂಸ್ಥೆಯ ಅಧ್ಯಕ್ಷ ಅರುಣ್ ಬಿ.ನರಗುಂದ್ ಮಾತನಾಡಿ, ರೋಟರಿ ಸಂಸ್ಥೆ ದತ್ತು ಪಡೆದಿರುವ ಸುಂಕನಹಳ್ಳಿ ಗ್ರಾಮಕ್ಕೆ ಮಾಡಿರುವ ಮೂಲ ಸೌಕರ್ಯಗಳ ಬಗ್ಗೆ ವಿವರಿಸಿದರು.
ಇದಕ್ಕಾಗಿ ಸಂಗ್ರಹಿಸಿರುವ ಹಣದಲ್ಲಿ ಉಳಿದಿರುವ ಹಣವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಬಿಸಿನೀರಿನ ಉಪಕರಣವನ್ನು ಅಳವಡಿಸಲು ಉದ್ದೇಶಿ ಸಿರುವುದಾಗಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ರೋಟರಿ ಕಾರ್ಯದರ್ಶಿ ಅನಂತರಾಜ್, ರೋಟೇರಿಯನ್‌ಗಳಾದ ಮೋಹನ್ ಕುಮಾರ್, ಸುರೇಶ್, ಶಶಿಭೂಷಣ್, ರವಿಶಂಕರ್, ವೈ.ಎಸ್. ಕುಮಾರ್, ಸತೀಶ್ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.