ಸಾಂಸ್ಕೃತಿಕ ನಗರಿಯಲ್ಲಿ ಶಿವನಾಮ ಸ್ಮರಣೆ


Team Udayavani, Feb 24, 2017, 12:13 PM IST

mys4.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನೆಲ್ಲೆಡೆ ಮಹಾಶಿವರಾತ್ರಿ ಆಚರಣೆಯ ಸಂಭ್ರಮ ಮನೆಮಾಡಿದ್ದು, ಅರಮನೆ ಆವರಣದಲ್ಲಿರುವ ಐತಿಹಾಸಿಕ ಶ್ರೀ ತ್ರಿನೇಶ್ವರಸ್ವಾಮಿ ದೇವಾಲಯ, ಚಾಮುಂಡಿಬೆಟ್ಟದ ಮಹಾಬಲೇಶ್ವರ ದೇವಾಲಯ ಸೇರಿದಂತೆ ನಗರದ ಪ್ರಮುಖ ದೇವಾಲಯಗಳಲ್ಲಿ ಮಹಾಶಿವರಾತ್ರಿ ಆಚರಣೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದೆ.

ಶಿವರಾತ್ರಿ ಹಿನ್ನೆಲೆ ಗುರುವಾರ ಅನೇಕ ದೇವಸ್ಥಾನಗಳಲ್ಲಿ ದೇವಾಲಯವನ್ನು ಸ್ವತ್ಛ ಗೊಳಿಸಿ, ಸಿಂಗರಿಸುವ ಕಾರ್ಯಗಳನ್ನು ಪೂರ್ಣ ಗೊಳಿಸಲಾಗಿದೆ. ಮಹಾಶಿವರಾತ್ರಿ ಅಂಗವಾಗಿ ಶುಕ್ರವಾರ ಬೆಳಗ್ಗಿನಿಂದಲೇ ಅಪಾರ ಸಂಖ್ಯೆಯ ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದು, ಅನೇಕ ದೇವಸ್ಥಾನಗಳಲ್ಲಿ ಶಿವಗಣ ಹೋಮ, ಸಂಕಲ್ಪ, ಪುಷ್ಪಾರ್ಚನೆ, ಅಭಿಷೇಕ, ಭಜನೆ, ನವಗ್ರಹ ಪೂಜೆ, ಮಹಾ ಮಂಗಳಾರತಿ ಹಾಗೂ ರಾತ್ರಿ ಜಾಗರಣೆ ಸೇರಿದಂತೆ ಇನ್ನಿತರ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಪ್ರಮುಖವಾಗಿ ಮಹಾಶಿವರಾತ್ರಿ ಆಚರಣೆಗೆ ಅರಮನೆಯ ತ್ರಿನೇಶ್ವರಸ್ವಾಮಿ ದೇವಸ್ಥಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಲ್ಲದೆ ನಗರದ ಅಗ್ರಹಾರದ ರಾಮಾನುಜ ರಸ್ತೆ ಯಲ್ಲಿರುವ 108 ಶಿವಲಿಂಗಗಳಿರುವ ಶಿವನ ದೇವಾಲಯ, ಅಶೋಕ ರಸ್ತೆಯ ಶ್ರೀ ಮುಕ್ಕಣ್ಣೇಶ್ವರಸ್ವಾಮಿ ದೇವಸ್ಥಾನ, ಗರಡಿಕೇರಿಯ ಮಲೈ ಮಹದೇಶ್ವರಸ್ವಾಮಿ ದೇವಸ್ಥಾನ, ರಾಮಾನುಜ ರಸ್ತೆಯ ಶ್ರೀ ಕಾಮೇಶ್ವರ ಕಾಮೇಶ್ವರಿ ದೇವಸ್ಥಾನ, ವಿವಿ ಮೊಹಲ್ಲಾದ ಚಂದ್ರಮೌಳೇಶ್ವರ ಸ್ವಾಮಿ ದೇವಸ್ಥಾನ, ಸಂತೆಪೇಟೆಯ ಶ್ರೀ ಪ್ರಸನ್ನ ನಂಜುಂಡೇಶ್ವರ ಸ್ವಾಮಿ ದೇವಸ್ಥಾನ, ಬೋಗಾದಿ ರಿಂಗ್‌ರಸ್ತೆಯಲ್ಲಿರುವ ಬೋಗೇಶ್ವರಸ್ವಾಮಿ ದೇವಸ್ಥಾನ ಗಳಲ್ಲಿ ವಿಶೇಷ ಪೂಜೆಗಳು ನಡೆಯಲಿದೆ.

ಇದರೊಂದಿಗೆ ವಿವಿಧೆಡೆಗಳಲ್ಲಿ ಶಿವರಾತ್ರಿ ಅಂಗವಾಗಿ ಶಿವರಾತ್ರಿ ಪ್ರಯುಕ್ತ ವಿಶೇಷ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇನ್ನೂ ಶಿವರಾತ್ರಿ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆಗಳಲ್ಲಿ ಭರ್ಜರಿ ವ್ಯಾಪಾರ ವಹಿವಾಟು ನಡೆದಿದ್ದು, ಹಬ್ಬಕ್ಕೆ ಬಳಸಲಾಗುವ ಬಿಲ್ವಪತ್ರೆ, ಹೂವು, ಹಣ್ಣು, ಅಭಿಷೇಕಕ್ಕೆ ಬಳಸ ಲಾಗುವ ಎಳನೀರು ಸೇರಿದಂತೆ ಇನ್ನಿತರ ವಸ್ತುಗಳ ಖರೀದಿಯಲ್ಲಿ ಶಿವಭಕ್ತರು ತೊಡಗಿದ್ದರು.

ತ್ರಿನೇಶ್ವರನಿಗೆ ಚಿನ್ನದ ಕೊಳಗ ಧಾರಣೆ
ಅರಮನೆ ಆವರಣದಲ್ಲಿರುವ ಶ್ರೀ ತ್ರಿನೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಶಿವ ಲಿಂಗಕ್ಕೆ ಚಿನ್ನದ ಕೊಳಗವನ್ನು ಧಾರಣೆ ಮಾಡಲಾಗುವುದು. ಹಬ್ಬದ ಮುನ್ನಾದಿನವಾದ ಗುರುವಾರ ಶ್ರೀ ತ್ರಿನೇಶ್ವರಸ್ವಾಮಿ ದೇವಾಲಯದಲ್ಲಿರುವ ಶಿವನಮೂರ್ತಿಗೆ ಚಿನ್ನದ ಕೊಳಗವನ್ನು ಧರಿಸಲಾಯಿತು.

ಶಿವರಾತ್ರಿ ಸಂದರ್ಭದಲ್ಲಿ ಮಾತ್ರವೇ ಅಳವಡಿಸಲಾಗುವ ಚಿನ್ನದ ಕೊಳಗ, ಉಳಿದ ಸಂದರ್ಭದಲ್ಲಿ ಜಿಲ್ಲಾಡಳಿತದ ಖಜಾನೆಯಲ್ಲಿರಲಿದೆ. ಹೀಗಾಗಿ ಜಿಲ್ಲಾಡಳಿತದ ಖಜಾನೆಯಲ್ಲಿದ್ದ ಅಂದಾಜು 11 ಕೆ.ಜಿ. ತೂಕದ ಚಿನ್ನದ ಕೊಳಗವನ್ನು ಮುಜಾರಾಯಿ ಇಲಾಖೆ ಸುಪರ್ದಿನಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಹಸ್ತಾಂತರಿಸಲಾಯಿತು.

ಈ ಚಿನ್ನದ ಕೊಳಗವನ್ನು ಜಯ ಚಾಮರಾಜೇಂದ್ರ ಒಡೆಯರ್‌ ಅವರು ತಮ್ಮ ಪುತ್ರ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಅವರ ಜನ್ಮದಿನದ ನೆನಪಿಗಾಗಿ ಶ್ರೀ ತ್ರಿನೇಶ್ವರಸ್ವಾಮಿ ದೇವಸ್ಥಾನಕ್ಕೆ ನೀಡಿದ್ದಾರೆ. ಹೀಗಾಗಿ ಈ ಚಿನ್ನದ ಕೊಳಗವನ್ನು ಅಂದಿನಿಂದ ಇಂದಿನವರೆಗೂ ಶಿವರಾತ್ರಿ ಹಬ್ಬದ ದಿನದಂದು ಮಾತ್ರವೇ ಧಾರಣೆ ಮಾಡಲಾಗುತ್ತದೆ.

ಪೊಲೀಸರ ಸೂಚನೆ…
ಮೈಸೂರು: ಶಿವರಾತ್ರಿ ಜಾಗರಣೆ ವೇಳೆ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಪೊಲೀಸರ ಸೂಚನೆಗಳನ್ನು ಪಾಲಿಸುವಂತೆ ನಗರ ಪೊಲೀಸ್‌ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್‌ ಕೋರಿದ್ದಾರೆ.

ಶಿವರಾತ್ರಿ ಪ್ರಯುಕ್ತ ಶುಕ್ರವಾರ ರಾತ್ರಿ ಸಾರ್ವಜನಿಕರು ಶಿವನ ದೇವಸ್ಥಾನಗಳಿಗೆ ದರ್ಶನಕ್ಕೆ ತೆರಳುವುದು ಹಾಗೂ ರಾತ್ರಿ ಪೂರ ಜಾಗರಣೆ ಮಾಡುವುದು ಸಾಮಾನ್ಯವಾಗಿದೆ. ಈ ವೇಳೆ ಮಹಿಳೆಯರು ತಮ್ಮ ಆಭರಣ ಮತ್ತು ಬೆಲೆಬಾಳುವ ವಸ್ತುಗಳ ಬಗ್ಗೆ ಜಾಗ್ರತೆಯಿಂದ ಇರುವುದು ಹಾಗೂ ಅವೇಳೆಯಲ್ಲಿ ಚಿನ್ನಾಭರಣ ಧರಿಸಿಕೊಂಡು ಒಂಟಿಯಾಗಿ ಓಡಾಡಬಾರದು. ರಸ್ತೆಯಲ್ಲಿ ವಾಹನಗಳ ವ್ಹೀಲಿಂಗ್‌ ಮಾಡುವುದು, ಅಜಾಗರೂಕತೆ ಮತ್ತು ಅತಿಯಾದ ವೇಗವಾಗಿ ವಾಹನ ಚಾಲನೆ ಮಾಡುವುದನ್ನು ನಿಷೇಧಿಸಿದೆ.

ಆಟೋ ಮತ್ತು ಕ್ಯಾಬ್‌ ವಾಹನದವರು ಸಾರ್ವಜನಿಕರು ಕರೆದ ಕಡೆ ಬರಲು ನಿರಾಕರಿಸುವುದು, ಹೆಚ್ಚಿನ ಹಣಕ್ಕಾಗಿ ಪೀಡಿಸುವುದು ಮಾಡಬಾರದು. ಮಹಿಳೆಯರು ಮತ್ತು ಹೆಣ್ಣು ಮಕ್ಕಳೊಂದಿಗೆ ಅಸ¸‌Âವಾಗಿ ವರ್ತಿಸಬಾರದು. ಸಾರ್ವಜನಿಕರ ಆಸ್ತಿ-ಪಾಸ್ತಿಗೆ ನಷ್ಟ ಉಂಟು ಮಾಡಬಾರದು. ರಸ್ತೆಗೆ ಅಡ್ಡಲಾಗಿ ಚಲನಚಿತ್ರಗಳನ್ನು ಪ್ರದರ್ಶಿಸುವುದು, ಅನುಮತಿ ಇಲ್ಲದೇ ಮತ್ತು ಹೆಚ್ಚಿನ ಧ್ವನಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವುದನ್ನು ಹಾಗೂ ಜಾಗರಣೆ ಆಚರಿಸುವ ನೆಪದಲ್ಲಿ ಜೂಜಾಟಗಳಲ್ಲಿ ತೊಡಗುವುದನ್ನು ನಿಷೇಧಿಸಿದೆ.

ಮಹಾ ಶಿವರಾತ್ರಿ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸ್‌ ವತಿಯಿಂದ ಎಲ್ಲಾ ರೀತಿಯ ಪೊಲೀಸ್‌ ಬಂದೋಬಸ್ತ್ ಮತ್ತು ಗಸ್ತು ವ್ಯವಸ್ಥೆಯನ್ನು ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಕೃತ್ಯಗಳು ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪೊಲೀಸ್‌ ಠಾಣೆಗಳಿಗೆ ಅಥವಾ ಪೊಲೀಸ್‌ ಕಂಟ್ರೋಲ್‌ ರೂಂ ದೂ. 100, 2418139, 2418339 ಸಂಖ್ಯೆಗೆ ಮಾಹಿತಿ ನೀಡಿ ನಗರದ ಶಾಂತಿ ಕಾಪಾಡುವಲ್ಲಿ ಪೊಲೀಸರೊಂದಿಗೆ ಸಹಕರಿಸಬೇಕೆಂದು ಕೋರಿದ್ದಾರೆ.

ಟಾಪ್ ನ್ಯೂಸ್

Jammu: Union Minister Jitendra Singh’s brother, BJP MLA Devendra Singh Rana passed away

Jammu: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೋದರ, ಬಿಜೆಪಿ ಶಾಸಕ ದೇವೇಂದ್ರ ಸಿಂಗ್‌ ರಾಣಾ ನಿಧನ

8-book

Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!

Dhananjay: ಮದುವೆಗೆ ಸಿದ್ದವಾದ್ರು ಡಾಲಿ; ದುರ್ಗದ ಹುಡುಗಿಯ ಕೈ ಹಿಡಿಯಲಿದ್ದಾರೆ ಧನಂಜಯ

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

6-shivaraja

Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

Prathap-Simha

Waqf Property: ವಕ್ಫ್ ಆಸ್ತಿ ಅಕ್ಬರ್, ಔರಂಗಜೇಬ್‌ ಬಿಟ್ಟುಹೋದ ಆಸ್ತಿಯಾ?: ಪ್ರತಾಪ್‌ ಸಿಂಹ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10

Lucknow: ಹೊಟೇಲ್‌ ಬಳಿಕ 7 ಆಸ್ಪತ್ರೆಗಳಿಗೆ ಹುಸಿ ಬಾಂಬ್‌ ಬೆದರಿಕೆ

Jammu: Union Minister Jitendra Singh’s brother, BJP MLA Devendra Singh Rana passed away

Jammu: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೋದರ, ಬಿಜೆಪಿ ಶಾಸಕ ದೇವೇಂದ್ರ ಸಿಂಗ್‌ ರಾಣಾ ನಿಧನ

9

New Delhi: ಹಬ್ಬದ ಋತು; ದೇಶದಲ್ಲಿ 4.5 ಲಕ್ಷ ವಾಹನಗಳ ದಾಖಲೆ ಮಾರಾಟ!

8-book

Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!

8

Ranchi: ಹೇಮಂತ್‌ ಸೊರೇನ್‌ ವಯಸ್ಸು 5 ವರ್ಷದಲ್ಲಿ 7 ವರ್ಷ ಹೆಚ್ಚಳ!; ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.