ಬರ ಪರಿಹಾರದ ಬಗ್ಗೆ ಶ್ವೇತಪತ್ರ ಹೊರಡಿಸಲಿ


Team Udayavani, Feb 24, 2017, 12:52 PM IST

hub2.jpg

ಹುಬ್ಬಳ್ಳಿ: ಬರ ಪರಿಹಾರ ನಿಟ್ಟಿನಲ್ಲಿ ರಾಜ್ಯ ಸರಕಾರ ಎಷ್ಟು ಹಣ ಬಿಡುಗಡೆ ಮಾಡಿದೆ, ಆಯಾ ಜಿಲ್ಲಾಧಿಕಾರಿಗಳು ಎಷ್ಟು ಹಣ ವೆಚ್ಚ ಮಾಡಿದ್ದಾರೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಒತ್ತಾಯಿಸಿದರು. 

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 165 ತಾಲೂಕುಗಳನ್ನು ಬರಪೀಡಿತವೆಂದು ರಾಜ್ಯ ಸರಕಾರವೇ ಘೋಷಣೆ ಮಾಡಿದೆ. ಬಹುತೇಕ ಕಡೆಗಳಲ್ಲಿ ಕುಡಿಯುವ ನೀರು, ಮೇವಿಗೆ ತೊಂದರೆ ಇದ್ದರೂ ಸರಕಾರದಿಂದ ಸಮರ್ಪಕ ಕ್ರಮ ಇಲ್ಲವಾಗಿದೆ. ನಿರ್ವಹಣೆ ಸಾಧ್ಯವಾಗದೆ ಜನರು ಜಾನುವಾರುಗಳನ್ನು ಕಟುಕರಿಗೆ ನೀಡುತ್ತಿದ್ದಾರೆ. ಸರಕಾರ ಉಚಿತವಾಗಿ ಮೇವು ನೀಡಲಿ ಇಲ್ಲವೇ ಗೋಶಾಲೆ ಆರಂಭಿಸಲಿ ಎಂದು ಒತ್ತಾಯಿಸಿದರು. 

ವಾರಕ್ಕೊಮೆ ಕೂಲಿ ಕೊಡಿ: ಉದ್ಯೋಗ ಖಾತರಿ ಯೋಜನೆಯಲ್ಲಿ ತಿಂಗಳು-ಎರಡು ತಿಂಗಳಿಗೆ ಕೂಲಿ ಹಣ ನೀಡುವ ಬದಲು ಏಳು ದಿನಕ್ಕೊಮ್ಮೆ ಹಣ ಪಾವತಿಸಿದರೆ ಗುಳೆ ಸಮಸ್ಯೆ ಕೊಂಚ ತಗ್ಗಲಿದೆ. ಬರ ವಿಚಾರದಲ್ಲಿ ಕೇವಲ ಕೇಂದ್ರ ಸರಕಾರದಿಂದ ಹಣ ಬಂದಿಲ್ಲ ಎಂದು ಸುಳ್ಳು ಆರೋಪದಲ್ಲಿ ಕಾಲ ಕಳೆಯುವ ಬದಲು ಬಂದ ಹಣ ಸಮರ್ಪಕವಾಗಿ ವೆಚ್ಚ ಮಾಡಲಿ, ತನ್ನ ಪಾಲಿನ ಎಷ್ಟು ಹಣ ವೆಚ್ಚ ಮಾಡಿದೆ ಎಂಬುದನ್ನು ತಿಳಿಸಲಿದೆ ಎಂದರು. 

ಬರದ ಹಿನ್ನೆಲೆಯಲ್ಲಿ ರೈತರ ಬೆಳೆ ಸಾಲ ಮನ್ನಾ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಧ ಸಾಲ ಮನ್ನಾ ಮಾಡುವುದಾಗಿ ಹೇಳುತ್ತಿದ್ದು, ಮೊದಲು ಮನ್ನಾ ಆದೇಶ ಹೊರಡಿಸಿ ನಂತರ ಇನ್ನರ್ಧ ಮನ್ನಾಕ್ಕೆ ಪ್ರಧಾನಿಗೆ ಪತ್ರ ಬರೆದರೆ ಕೇಂದ್ರದ ಮನವೊಲಿಸಿ ಸಾಲ ಮನ್ನಾಕ್ಕೆ ಯತ್ನಿಸಲಾಗುವುದು. ನಾನು ಮುಖ್ಯಮಂತ್ರಿಯಾಗಿದ್ದಾಗ 25 ಸಾವಿರ ರೂ.ವರೆಗಿನ ಸಾಲ ಮನ್ನಾ ಹಣವನ್ನು ನಾವು ಪಾವತಿಸಿದ್ದೇವೆ ಎಂದು ಸಿಎಂ ಪದೇ ಪದೇ ಹೇಳುತ್ತಿದ್ದಾರೆ. ಅದು ಸರಕಾರದ ಖಜಾನೆಯಿಂದ ನೀಡಿದ ಹಣ ಎಂದರು. 

ಸವಾಲು: ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ. ಪಾಟೀಲರು ರಾಜ್ಯದಲ್ಲಿ 8500ಕ್ಕೂ ಹೆಚ್ಚು ಶುದ್ಧ ಕುಡಿವ ನೀರಿನ ಘಟಕ ಸ್ಥಾಪಿಸಿದ್ದಾಗಿ ಹೇಳಿಕೊಳ್ಳುತ್ತಾ, ಈ ಬಗ್ಗೆ ಸವಾಲು ಹಾಕುತ್ತಾರೆ. ಆದರೆ, ಶೇ. 50ಕ್ಕಿಂತ ಹೆಚ್ಚು ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ ಇಲ್ಲವೇ ದುರಸ್ತಿಯಲ್ಲಿವೆ.

ಈ ಬಗ್ಗೆ ವಾಸ್ತವಿಕ ಸ್ಥಿತಿ ಪರಿಶೀಲನೆಗೆ ಮುಖ್ಯಮಂತ್ರಿ, ಗ್ರಾಮೀಣಾಭಿವೃದ್ಧಿ ಸಚಿವರು ಬಂದರೆ ಅವರಿಗೆ ತೋರಿಸುವುದಾಗಿ ಶೆಟ್ಟರ ಸವಾಲು ಹಾಕಿದರು. ಕೆಪಿಎಸ್‌ಸಿ ಅಡಿಯಲ್ಲಿ ನೇಮಕಾತಿಗೆ ಅಭ್ಯರ್ಥಿಗಳ ಅನುಪಾತವನ್ನು 1:5ಕ್ಕೆ ಹೆಚ್ಚಿಸಿದೆ. ಪೈಪೋಟಿ ಹೆಚ್ಚಿ ಹೆಚ್ಚು ಹೆಚ್ಚು ಹಣ ನೀಡಲು ಮುಂದಾಗಲಿ ಎಂಬುದೇ ಸರಕಾರದ ಉದ್ದೇಶ.

ಕಾಂಗ್ರೆಸ್‌ ಸರಕಾರವೇ ರಚಿಸಿದ ಹೋಟಾ ಸಮಿತಿ 1:3ಗೆ ಶಿಫಾರಸ್ಸು ಮಾಡಿದ್ದರೂ ಪಾಲನೆ ಆಗುತ್ತಿಲ್ಲ ಎಂದು  ಆರೋಪಿಸಿದರು. ಜಿಪಂ ಸದಸ್ಯ ಯೋಗೀಶಗೌಡಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ   ನಡೆಯಬೇಕು. ಅವರ ಪತ್ನಿ ಮಲ್ಲಮ್ಮಗೆ ರಕ್ಷಣೆ ನೀಡಬೇಕು. ಪ್ರಕರಣದ ಕುರಿತಾಗಿ ಅಶ್ಲೀಲ ಹಾಗೂ ಬೆದರಿಕೆ ಪತ್ರಗಳ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.