ಉದ್ಯೋಗವಿಲ್ಲವೆಂದು ಗುಳೆ ಹೋಗಬೇಡಿ

Team Udayavani, Feb 24, 2017, 1:00 PM IST

hub5.jpg

ಕುಂದಗೋಳ: ಕಾರ್ಮಿಕರು ಉದ್ಯೋಗವಿಲ್ಲವೆಂದು ಗುಳೆ ಹೋಗಬಾರದು. ಪ್ರತಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಉದ್ಯೋಗಖಾತ್ರಿ ಯೋಜನೆಯಡಿ ಕೆಲಸ ನೀಡಲಾಗುತ್ತದೆ ಎಂದು ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕಾಧಿಕಾರಿ ಎಂ.ಎಸ್‌. ಮೇಟಿ ಹೇಳಿದರು. 

ಅವರು ತಾಲೂಕಿನ ಚಿಕ್ಕಗುಂಜಳ ಗ್ರಾಮದ ಹೊರವಲಯದಲ್ಲಿನ  7.36 ಎಕರೆ ವಿಸ್ತಿರ್ಣದ ಪಡತಯ್ಯನ ಕೆರೆ ಹೂಳೆತ್ತುವ ಕಾಮಗಾರಿ ಗುರುವಾರ ವೀಕ್ಷಿಸಿ ಮಾತನಾಡಿದರು. ದುಡಿವ ಕೈಗಳಿಗೆ ಪ್ರತಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಒಬ್ಬರಿಗೆ 150 ದಿನಗಳ ಕಾಲ ಉದ್ಯೋಗ ನೀಡಲು ಸರ್ಕಾರ ಅನುದಾನ ನೀಡಿದೆ.

ಯಾರೂ ಕೆಲಸವಿಲ್ಲವೆಂದು ಬೇರೆಡೆ ವಲಸೆ ಹೋಗಬಾರದು. ಪುರುಷರು ಹಾಗೂ ಮಹಿಳೆಯರಿಗೆ  224 ರೂ. ಸಮಾನ ವೇತನ ನೀಡಲಾಗುತ್ತದೆ. ಕೆಲಸ ನಿರ್ವಹಿಸಿದ 9 ದಿನಗಳಲ್ಲೇ ಕಾರ್ಮಿಕರ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುವುದು ಎಂದು  ಹೇಳಿದರು. ಈ  ಕೆರೆ ಹೂಳೆತ್ತಲು ಈಗಾಗಲೇ 3 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.

ಕೆರೆ ವೀಕ್ಷಿಸಿ ಸಿಇಒ ಆರ್‌. ಸ್ನೇಹಲ್‌ ಅವರು ಆಗಮಿಸಿ ಕಾಮಗಾರಿ ಕಂಡು ಸಂತಸ  ವ್ಯಕ್ತಪಡಿಸಿ, ಕೂಲಿಕಾರರು ಹಾಗೂ ಗ್ರಾಪಂ ಅಧ್ಯಕ್ಷೆ ಗೌರಮ್ಮ ಸಜ್ಜನ ಅವರು ಹೆಚ್ಚಿನ ಅನುದಾನ 30 ಲಕ್ಷ ರೂ. ಬಿಡುಗಡೆಗೊಳಿಸಬೇಕೆಂಬ ಮನವಿಗೆ ಸ್ಪಂದಿಸಿದ್ದಾರೆ ಎಂದರು. ತಾಪಂ ಎಡಿ ಅಜೇಯ ಎನ್‌. ಅವರು ಮಾತನಾಡಿ, ತಾಲೂಕಿನ ಪ್ರಸಕ್ತ ಸಾಲಿನಲ್ಲಿ ಒಟ್ಟು 16494 ಮಾನವದಿನಗಳ ಗುರಿಹೊಂದಲಾಗಿದೆ ಎಂದರು.  

ಪಿಡಿಒ ಎಂ.ಎ.  ಗಿರೀಶ, ಈಗಾಲೇ ಕಳೆದ 4 ದಿನಗಳಿಂದ ಕೆರೆ ಹೂಳೆತ್ತಲು 658 ಜನ ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.  ಗ್ರಾಪಂ ಉಪಾಧ್ಯಕ್ಷ ಸದಾನಂದ ಅಂಗಡಿ, ಗ್ರಾಪಂ ಸದಸ್ಯ ರಮೇಶ ದ್ಯಾವನೂರ, ಕಲ್ಲವ್ವ ಶಿರೂರ, ಫಕ್ಕೀರಗೌಡ ಗೌಡಗೇರಿ ಸೇರಿದಂತೆ ಇತರರಿದ್ದರು. 

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.