ಬಿಎಂಸಿ ಗದ್ದುಗೆ; ಶಿವಸೇನೆ, ಬಿಜೆಪಿ ಮತ್ತೆ ದೋಸ್ತಿ ಆಗಲೇಬೇಕು!
Team Udayavani, Feb 24, 2017, 4:51 PM IST
ಮುಂಬೈ:ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಸ್ಪಷ್ಟ ಬಹುಮತ ಪಡೆಯದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಏತನ್ಮಧ್ಯೆ ಮುಂಬೈ ಮಹಾನಗರ ಪಾಲಿಕೆಯಲ್ಲಿ ಆಡಳಿತ ನಡೆಸುವ ನಿಟ್ಟಿನಲ್ಲಿ ಬಿಜೆಪಿ ಮತ್ತು ಶಿವಸೇನೆಗೆ ಪರ್ಯಾಯ ಮಾರ್ಗವೇ ಇಲ್ಲ. ಹಾಗಾಗಿ ಉಭಯ ಪಕ್ಷಗಳು ಕೈಜೋಡಿಸಬೇಕಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತೀನ್ ಗಡ್ಕರಿ ಶುಕ್ರವಾರ ತಿಳಿಸಿದ್ದಾರೆ.
ಬಿಎಂಸಿ ಅತಂತ್ರ ಪರಿಸ್ಥಿತಿಯಲ್ಲಿ ಬಿಜೆಪಿ, ಶಿವಸೇನೆಗೆ ಬೇರೆ ಯಾವ ಆಯ್ಕೆಯೂ ಇಲ್ಲ, ಮತ್ತೆ ನಾವು ಒಂದಾಗಬೇಕಾಗಿದೆ ಎಂದು ಹೇಳಿದ್ದಾರೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಶಿವಸೇನೆ ಚುನಾವಣಾ ಅಖಾಡಕ್ಕೆ ಇಳಿಯುತ್ತಿತ್ತು. ಆದರೆ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಈ ಬಾರಿಯ ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆದು ಶಿವಸೇನೆ ಮೈತ್ರಿ ಬಿಟ್ಟು ಏಕಾಂಗಿಯಾಗಿ ಕಣಕ್ಕಿಳಿದಿತ್ತು. ಹಾಗಾಗಿ ಬಿಜೆಪಿ ಮತ್ತು ಶಿವಸೇನೆ ಚುನಾವಣೆ ಪ್ರತಿಷ್ಠೆಯ ಅಖಾಡವಾಗಿತ್ತು. ಆದರೆ ಉಭಯ ಪಕ್ಷಗಳು ಬಹುಮತ ಪಡೆದು ಬಿಎಂಸಿ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿಲ್ಲ.
ಬಿಎಂಸಿ ಮೈತ್ರಿ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಹಾಗೂ ಉದ್ಧವ್ ಠಾಕ್ರೆ ಅಂತಿಮ ನಿರ್ಧಾರ ಕೈಗೊಳ್ಳಬೇಕಾಗಿದೆ. ಇಬ್ಬರು ಸೂಕ್ತವಾದ ಹೆಜ್ಜೆ ಇಡಲಿದ್ದಾರೆ ಎಂಬ ವಿಶ್ವಾಸ ಇದೆ ಎಂದು ಗಡ್ಕರಿ ತಿಳಿಸಿದ್ದಾರೆ.
227 ಸದಸ್ಯ ಬಲದ ಬಿಎಂಸಿಯಲ್ಲಿ ಶಿವಸೇನೆ 84 ಸ್ಥಾನ, ಬಿಜೆಪಿ 82 ಸ್ಥಾನ ಗಳಿಸಿದೆ. ಆದರೆ ಅಧಿಕಾರದ ಗದ್ದುಗೆ ಏರಲು 114 ಸ್ಥಾನಗಳ ಅಗತ್ಯವಿದೆ. ಶಿವಸೇನೆ, ಬಿಜೆಪಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇಲ್ಲ. ಆ ನೆಲೆಯಲ್ಲಿ ಶಿವಸೇನೆ, ಬಿಜೆಪಿ ಮತ್ತೆ ಕೈಜೋಡಿಸಬೇಕಾದ ಅನಿವಾರ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.