ರಾಹುಲ್ ಗಾಂಧಿಗೆ ಇನ್ನೂ ಟೈಮ್ ಬೇಕು: ಶೀಲಾ ದೀಕ್ಷಿತ್
Team Udayavani, Feb 25, 2017, 3:50 AM IST
ಹೊಸದಿಲ್ಲಿ: ಬೃಹನ್ಮುಂಬಯಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದು ಒಂದೆಡೆಯಾದರೆ, ದಿಲ್ಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅನನುಭವಿ. ರಾಜಕೀಯವಾಗಿ ಪ್ರೌಢಿಮೆ ಸಾಧಿಸಲು ಇನ್ನಷ್ಟು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ. ಶೀಲಾ ದೀಕ್ಷಿತ್‌ರ ಈ ಮಾತು ಕಾಂಗ್ರೆಸ್‌ಗೆ ಇರಿಸು ಮುರಿಸು ತಂದಿಟ್ಟಿದೆ. ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಕಾಂಗ್ರೆಸ್ ಭಾರಿ ಬದಲಾವಣೆಗೆ ಒಳಗಾಗುತ್ತಿದೆ. ರಾಹುಲ್ ಗಾಂಧಿಯವರನ್ನು ಸಮರ್ಥಿಸಿಕೊಂಡು ಮಾತನಾಡಿದ ದಿಲ್ಲಿಯ ಮಾಜಿ ಸಿಎಂ “ರಾಹುಲ್ ಗಾಂಧಿ ಪ್ರಧಾನಮಂತ್ರಿಯಾಗಿಲ್ಲ. ಅವರಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಅಂಥ ಅವಕಾಶಗಳು ಬರಬಹುದು ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಪಕ್ಷಕ್ಕೆ ಸಂಬಂಧಿಸಿದ ಸಭೆಗಳಲ್ಲಿ ಭಾಗವಹಿಸಿ ಮಾತನಾಡುತ್ತಿದ್ದಾರೆ. ಅವರು ಇನ್ನೂ 40ರ ಆಸುಪಾಸಿನಲ್ಲಿದ್ದಾರೆ. ಅವರ ವಯಸ್ಸು ಪ್ರೌಢಿಮೆಯಿಂದ ವರ್ತಿಸಲು ಅವಕಾಶ ನೀಡುತ್ತಿಲ್ಲ’ ಎಂದು ಶೀಲಾ ದೀಕ್ಷಿತ್ ಸಂದರ್ಶನದಲ್ಲಿ ಹೇಳಿದ್ದಾರೆ.
ದೀಕ್ಷಿತ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಜನರಿಗೆ ಗೊತ್ತಿರುವ ವಿಚಾರವನ್ನೇ ದಿಲ್ಲಿ ಮಾಜಿ ಸಿಎಂ ಹೇಳಿದ್ದಾರೆಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಕ್ರಿಯೆ ನೀಡಿದ್ದಾರೆ. “ವಿಳಂಬವಾದರೂ ಅಂಥ ಹೇಳಿಕೆ ಬಂದಿರುವುದಕ್ಕೆ ಧನ್ಯವಾದ ಸಮರ್ಪಿಸಬೇಕು ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.