ಸಿಎಂ ಪ್ರತಿಕೃತಿ ದಹಿಸಿ ಪ್ರತಿಭಟನೆ


Team Udayavani, Feb 25, 2017, 2:53 PM IST

gul1.jpg

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಹೈಕಮಾಂಡ್‌ಗೆ ಸಾವಿರ ಕೋಟಿ ರೂ. ಗಳನ್ನು ರಾಜ್ಯದ ಹಲವಾರು ಸಚಿವರಿಂದ ಹಾಗೂ ಶಾಸಕರಿಂದ ಸಂಗ್ರಹಿಸಿ ಹೈಕಮಾಂಡ್‌ಗೆ ಹಂಚಿಕೆ ಮಾಡಿರುವ ವಿವರಗಳುಳ್ಳ ಡೈರಿಯನ್ನು ಸುದ್ದಿ ವಾಹಿನಿಯೊಂದು ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಯುವ ಮೋರ್ಚಾ ಆಗ್ರಹಿಸಿ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು. 

ಪ್ರತಿಭಟನಾಕಾರರನ್ನು ಉದ್ದೇಶಿಸಿ ಬಿಜೆಪಿ ಯುವಮೋರ್ಚಾ ರಾಜ್ಯ ಉಪಾಧ್ಯಕ್ಷ ಹಾಗೂ  ಪಾಲಿಕೆ ಸದಸ್ಯ ಪರಶುರಾಮ ನಸಲವಾಯಿ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲ ಸೇರಿದಂತೆ ಹಲವಾರು ಸಮಸ್ಯೆಗಳಿರುವ ಸಂದರ್ಭದಲ್ಲಿ ರಾಜ್ಯದ ಬಡ ಜನರಿಗೆ ಸಲ್ಲಬೇಕಾದ ಸಂಪತ್ತನ್ನು ಕೊಳ್ಳೆ ಹೊಡೆದು ತಮ್ಮ ಕುರ್ಚಿ ಉಳಿಸಿಕೊಳ್ಳಲು ಕಾಂಗ್ರೆಸ್‌ ಹೈಕಮಾಂಡ್‌ಗೆ ಸಾವಿರ ಕೋಟಿ ರೂ.ಗಳನ್ನು ಕಪ್ಪ ನೀಡಿದ್ದ ವಿವರಗಳು ಬಯಲಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಎಂಎಲ್‌ಸಿ ಕೆ.ಗೋವಿಂದರಾಜು ಮೂಲಕ ಹಣ ಸಂಗ್ರಹಿಸಿದ್ದು ಮತ್ತು ಸಂದಾಯ ಮಾಡಿರುವುದು ಡೈರಿಯಲ್ಲಿ ಇನಿಷಿಯಲ್‌ಗ‌ಳ ರೂಪದಲ್ಲಿ ಸ್ವಬರಹದಲ್ಲಿದ್ದರೂ ನಗ್ನ ಸತ್ಯವನ್ನು ಒಪ್ಪಿಕೊಳ್ಳದೇ ಅಂಗೈಯಲ್ಲಿರುವ ಹುಣ್ಣನ್ನು ನೋಡಲು ಕನ್ನಡಿ ಹುಡುಕಿದಂತೆ ನಟಿಸುತ್ತಿರುವ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. 

ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಕರ್ನಾಟಕದ ಜನತೆ ನಂಬಿಸಿ ಅಧಿಕಾರಕ್ಕೆ ಏರಿದ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕತೆಯಿದ್ದರೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಆಪ್ತ ಕೆ.ಗೋವಿಂದರಾಜು ಅವರನ್ನು ಮಂಪರು ಪರೀಕ್ಷೆಗೆ ಒಪ್ಪಿಸಬೇಕು. ಮಂತ್ರಿಮಂಡಲದೊಂದಿಗೆ ಸಾಮೂಹಿಕ ರಾಜೀನಾಮೆ ನೀಡಿ ಚುನಾವಣೆಗೆ ಬರಬೇಕು ಎಂದರು. 

ಪ್ರತಿಭಟನೆ ಉದ್ದೇಶಿಸಿ ದಕ್ಷಿಣ ಮಂಡಲ ಅಧ್ಯಕ್ಷ ಶ್ರೀನಿವಾಸ ದೇಸಾಯಿ ಮಾತನಾಡಿ, ರಾಜ್ಯದ ಜನತೆಯ ತೆರಿಗೆ ಹಣವನ್ನು ಕಾಂಗ್ರೆಸ್‌ ಹೈಕಮಾಂಡ್‌ ಗೆ ಕಪ್ಪ ನೀಡಿ ಜನತೆಗೆ ಮೋಸ ಮಾಡಿರುವ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. 

ಪ್ರತಿಭಟನೆಯಲ್ಲಿ ಮಹಾನಗರ ಜಿಲ್ಲಾಧ್ಯಕ್ಷ ಮಲ್ಲು ಉದನೂರ, ಸಂತೋಷ ಹಾದಿಮನಿ, ಶರಣು ಸಜ್ಜನ್‌, ಕೈಲಾಸ ಪಾಟೀಲ, ಪ್ರವೀಣನಾಯಕ, ಸುನೀಲ್‌, ಬಸವರಾಜ ಜವಳಿ, ನಾಗರಾಜ ಉಪಾಸೆ, ಮಹಿಂದ್ರಾ ನಾಯ್ಡು, ಶ್ರೀಧರ ಚವ್ಹಾಣ, ಸುನೀಲ ಮಹಾಗಾಂವಕರ, ಅಮೀತ ಚಿಡಗುಂಪಿ, ಶಿವು ಕಾಳಗಿ, ಸಂದೇಶ, ಮಲ್ಲಿಕಾರ್ಜುನ ಕೊಂಡೇದ, ದಿಗಂಬರ್‌ ಮಾಗೆನಗೇರಿ, ಶಾಂತಿನಾಥ, ಸ್ವರೂಪ, ಶಶಾಂಕ, ಶರಣು ಹಿರೇಗೌಡ, ದತ್ತಾತ್ರೇಯ, ರಾಜು ಮಾಳಗಿ, ಶಿವು, ಪ್ರಶಾಂತ ಜಾಧವ, ಅನಿಲ, ಪ್ರಮೋದ, ಪ್ರವೀಣ ಯಾದವ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.