ಅಮೆರಿಕದಲ್ಲಿ ಭದ್ರತೆಗಾಗಿ ಹಿಂದುಗಳು ತಿಲಕ, ಬಿಂದಿ ಧರಿಸಬೇಕಂತೆ !
Team Udayavani, Feb 25, 2017, 4:47 PM IST
ಹೊಸದಿಲ್ಲಿ : ಅಮೆರಿಕದಲ್ಲಿ ತಮ್ಮ ಭದ್ರತೆಗಾಗಿ ಹಿಂದು ಪುರುಷರು ತಿಲಕವನ್ನು ಮತ್ತು ಹಿಂದು ಮಹಿಳೆಯರು ಬಿಂದಿಯನ್ನು ಹಾಕಿಕೊಂಡು ತಮ್ಮ ಧಾರ್ಮಿಕ ಗುರುತನ್ನು ಬಹಿರಂಗಪಡಿಸಬೇಕು, ಹಾಗೆ ಮಾಡಿದರೆ ಅವರು ಕನ್ಸಾಸ್ ಗುಂಡಿನ ದಾಳಿಯಂತಹ ಪ್ರಕರಣಗಳಿಗೆ ಬಲಿಯಾಗುವುದನ್ನು ತಪ್ಪಿಸಬಹುದಾಗಿದೆ ಎಂದು ಹೇಳುವ ಮೂಲಕ ಹಿಂದು ಸಮಿತಿ ಅಧ್ಯಕ್ಷ ತಪನ್ ಘೋಷ್ ದೊಡ್ಡ ವಿವಾದವನ್ನೇ ಸೃಷ್ಟಿಸಿದ್ದಾರೆ.
ಅಮೆರಿಕದ ಕನ್ಸಾನ್‌ನ ಒಲಾಥೆಯಲ್ಲಿ ಕಳೆದ ಬುಧವಾರ ರಾತ್ರಿ ಜನಾಂಗೀಯ ದ್ವೇಷದಲ್ಲಿ ನಡೆದಿದ್ದ ಗುಂಡಿನ ದಾಳಿಗೆ ಓರ್ವ ಭಾರತೀಯ ಇಂಜಿನಿಯರ್ ಬಲಿಯಾಗಿ ಇನ್ನಿಬ್ಬರು ಗಾಯಗೊಂಡ ಹಿನ್ನೆಲೆಯಲ್ಲಿ ತಪನ್ ಘೋಷ್ ಈ ಹೇಳಿಕೆ ನೀಡಿದ್ದಾರೆ.
ಕನ್ಸಾಸ್ ಗುಂಡಿನ ದಾಳಿಯ ಹಿನ್ನೆಲೆಯಲ್ಲಿ ಅಮೆರಿಕದಲ್ಲೀಗ ಭಾರತೀಯರಿಗೆ ಪ್ರಾಣ ಭಯ ಎದುರಾಗಿರುವ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಂತೆಯೇ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿವಾದಾತ್ಮಕ ವಲಸೆ ನೀತಿ, ಹಾಗೂ ಅಮೆರಿಕವೇ ಮೊದಲು ಎಂಬ ನಿಲುವು ಕೂಡ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಅಮೆರಿಕದಲ್ಲಿ ಭಾರತೀಯರು, ವಿಶೇಷವಾಗಿ ಹಿಂದುಗಳು ತಮ್ಮ ಧಾರ್ಮಿಕ ಅಸ್ಮಿತೆ, ಗುರುತನ್ನು ಇತರರಿಗೆ ಕಾಣುವಂತೆ, ಬಿಂದಿ-ತಿಲಕ ಧರಿಸಿಕೊಂಡರೆ ಅಪಾಯವಿಲ್ಲ ಎಂದು ತಪನ್ ಘೋಷ್ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರನ್ನು ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ