ಫೆ. 26: ಮುಂಬ್ರಾ ಭಗವಾನ್‌ ಬಾಹುಬಲಿ ಕ್ಷೇತ್ರದಲ್ಲಿ ಸ್ವಚ್ಛತಾ ಅಭಿಯಾನ

Team Udayavani, Feb 25, 2017, 5:30 PM IST

8.jpg

ಮುಂಬಯಿ: ಧರ್ಮಸ್ಥಳದ ಧರ್ಮಾಧಿಕಾರಿಗಳಾದ  ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ  ಧಾರ್ಮಿಕ ಕ್ಷೇತ್ರಗಳ ಸ್ವತ್ಛತಾ ಅಭಿಯಾನ ಪರಿಕಲ್ಪನೆಯಿಂದ ಪ್ರೇರಣೆ ಪಡೆದು  ಮುಂಬ್ರಾದ ಬಾಹುಬಲಿ ಕ್ಷೇತ್ರದಲ್ಲಿ  ಫೆ. 26ರಂದು ಬೆಳಗ್ಗೆ 9ರಿಂದ ಸ್ವತ್ಛತಾ ಕಾರ್ಯಕ್ರಮವನ್ನು ಅಖೀಲ ಕರ್ನಾಟಕ ಜೈನ ಸಂಘ ಮುಂಬಯಿ ವತಿಯಿಂದ ಆಯೋಜಿಸಲಾಗಿದೆ.

ಜಗತ್ತಿಗೆ ತ್ಯಾಗ  ಶಾಂತಿ ಮತ್ತು ಅಹಿಂಸೆಯ ಸಂದೇಶವನ್ನು ತನ್ನ ತ್ಯಾಗ ಶಕ್ತಿಯ ಮೂಲಕ ಸಾರಿದವರು ಭಗವಾನ್‌  ಬಾಹುಬಲಿ. ಇಂತಹ ಅತ್ಯುನ್ನತ ತ್ಯಾಗಿಯ ಉನ್ನತ ಪ್ರತಿಮೆಗಳು ಹೆಚ್ಚು ಇರುವುದು ಕರ್ನಾಟಕದಲ್ಲಿ. ಹಾಗೆಯೇ ಜೈನರ ಸಂಖ್ಯೆ ಅಧಿಕವಾಗಿರುವ ಮಹಾರಾಷ್ಟ್ರದಲ್ಲಿಯೂ ಕೂಡ ಬಾಹುಬಲಿ ಜಿನ ದೇವನ ಪ್ರತಿಮೆಗಳನ್ನು ನಾವು ಕಾಣಬಹುದು. ಇಂತಹ ಕ್ಷೇತ್ರಗಳಲ್ಲಿ ಮುಂಬಯಿ ನಗರದ ಪ್ರವೇಶ ದ್ವಾರದಲ್ಲಿರುವ ಮುಂಬ್ರಾದ ಭಗವಾನ್‌  ಬಾಹುಬಲಿ ಕ್ಷೇತ್ರವೂ  ಒಂದು. ಸುಮಾರು 50 ವರ್ಷಗಳ ಹಿಂದೆ ಆಚಾರ್ಯ 108 ಶಾಂತಿಸಾಗರ ಮಹಾ ರಾಜರ ಶಿಷ್ಯರಾದ ಆಚಾರ್ಯ 108 ನೇಮಿಸಾಗರ ಮುನಿ ಮಹಾರಾಜರಿಂದ ಪ್ರತಿಷ್ಟಾಪಿಸಲ್ಪಟ್ಟ 28 ಅಡಿ ಎತ್ತರದ ಭಗವಾನ್‌  ಬಾಹುಬಲಿ ಪ್ರತಿಮೆಯು ನೋಡಲು ನಯನ ಮನೋಹರವಾಗಿದೆ.

ಸುಮಾರು 13 ಎಕರೆಯಷ್ಟು ವಿಸ್ತೃತ ಪ್ರದೇಶದಲ್ಲಿರುವ ಈ ಕ್ಷೇತ್ರದಲ್ಲಿ ಅನೇಕ ಬಾರಿ ಮಹಾಮಸ್ತಕಾಭಿಷೇಕದ ಕಾರ್ಯಕ್ರಮಗಳು ಕೂಡ ಬಹಳ ವಿಜೃಂಭಣೆಯಿಂದ ಜರಗಿವೆ. ಆಚಾರ್ಯರತ್ನ 108 ದೇಶಭೂಷಣ ಮುನಿ ಮಹಾರಾಜರ ಸಂಘ, ಆಚಾರ್ಯ 108  ಕುಂಥುಸಾಗರ ಮುನಿಮಹಾರಾಜರ ಸಂಘ , ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯರು ಈ ಕ್ಷೇತ್ರಕ್ಕೆ ಆಗಮಿಸಿ ಭಗವಾನ್‌ ಬಾಹುಬಲಿಯ ದರ್ಶನಗೈದಿದ್ದಾರೆ.  ಮುನಿಶ್ರೀ 108 ಕಲ್ಪವೃಕ್ಷನಂದಿ ಮಹಾರಾಜರ 2  ಚಾತು ರ್ಮಾಸವು ಈ ಕ್ಷೇತ್ರದಲ್ಲಿ ನಡೆದಿದೆ. ಆದರೆ ಈಗ ಕ್ಷೇತ್ರಕ್ಕೆ ಆಗಮಿಸುವ ಶ್ರಾವಕರ ಸಂಖ್ಯೆ ಕಡಿಮೆಯಾಗಿರುವುದರಿಂದ ಕ್ಷೇತ್ರವು ಜೀರ್ಣಾವಸ್ಥೆಯಲ್ಲಿರುವುದು  ವಿಷಾದನೀಯ.

ಈ ಸಮಾಜಮುಖೀ ಕಾರ್ಯದಲ್ಲಿ ಶ್ರಾವಕರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಬೇಕು ಎಂದು ಅಖೀಕ ಕರ್ನಾಟಕ ಜೈನ ಸಂಘ ಮುಂಬಯಿ ತಿಳಿಸಿದೆ. ಅಭಿಯಾನದ ಸಂದರ್ಭದಲ್ಲಿ ಊಟೋಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಮುಂಬ್ರಾ ಪೂರ್ವ, ಪೊಲೀಸ್‌ ಠಾಣೆಯ ಎದುರುಗಡೆಯಲ್ಲಿ ಈ ಕ್ಷೇತ್ರವಿದ್ದು, ಸಮಾಜ ಬಾಂಧವರು ಪಾಲ್ಗೊಂಡು ಸಹಕರಿಸುವಂತೆ ಸಂಘದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

12

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.