ಸ್ಕಿನ್‌ ಬ್ಯಾಂಕ್‌ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‌


Team Udayavani, Feb 26, 2017, 10:46 AM IST

Skin.jpg

ಬೆಂಗಳೂರು: ರಕ್ತದಾನ ಮತ್ತು ಅಂಗಾಂಗದಾನ ಮಾದರಿಯಲ್ಲಿಯೇ ರಾಜ್ಯದಲ್ಲಿ ಮೊದಲ ಬಾರಿಗೆ ಆರಂಭಗೊಂಡಿರುವ ಸರ್ಕಾರಿ ಸ್ಕೀನ್‌ ಬ್ಯಾಂಕ್‌ಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ.

ಸುಟ್ಟ ಗಾಯಗಳಿಂದ ವಿರೂಪಗೊಳ್ಳುವವರ ದೇಹಕ್ಕೆ ಹೊಸರೂಪ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಸ್ಕಿನ್‌ ಬ್ಯಾಂಕ್‌ಗೆ ಖಾಸಗಿ ಆಸ್ಪತ್ರೆಗಳು ಚರ್ಮಕ್ಕಾಗಿ ಮುಗಿಬಿದ್ದಿವೆ.ಸೆಂಟ್‌ಜಾನ್ಸ್‌, ಬಿಜಿಎಸ್‌ ಗ್ಲೋಬಲ್‌ ಸೇರಿದಂತೆ ಹಲವು ಖಾಸಗಿ ಆಸ್ಪತ್ರೆಗಳು ಚರ್ಮಕ್ಕಾಗಿ ಬೇಡಿಕೆ ಇಟ್ಟಿದ್ದು, ಸ್ಕಿನ್‌ ಬ್ಯಾಂಕ್‌ ತುರ್ತಾಗಿ ಬೇಕಾಗಿರುವ ಪ್ರಕರಣಗಳಿಗೆ ಮಾತ್ರ ಪೂರೈಕೆ ಮಾಡಲಾಗುತ್ತಿವೆ.

ಸ್ಕಿನ್‌ ಬ್ಯಾಂಕ್‌ಗೆ ಖಾಸಗಿ ಆಸ್ಪತ್ರೆಗಳಿಂದ ಬರುತ್ತಿರುವ ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಅಲ್ಲಿ ತುರ್ತು ಪ್ರಕರಣಗಳು ಇಲ್ಲವಾದ್ದಲ್ಲಿ ಮಾತ್ರ ಖಾಸಗಿ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗುತ್ತದೆ.18 ವರ್ಷದ ಮೇಲ್ಪಟ್ಟ ಯಾರು ಬೇಕಾದರೂ ಚರ್ಮ ದಾನ ಮಾಡಬಹುದು. ಹೆಸರು ನೋಂದಾಯಿಸಿಕೊಂಡಿರುವವರ ಜತೆಗೆ ರಸ್ತೆ ಅಪಘಾತದಲ್ಲಿ ಮೃತಪಡುವವರ ಚರ್ಮವನ್ನು ಪಡೆಯುವ ಪ್ರಯತ್ನ ಮಾಡಲಾಗುತ್ತಿದೆ. ಚರ್ಮ ದಾನದಿಂದ ಅಗತ್ಯ ಇರುವವರಿಗೆ ಚರ್ಮ ನೀಡಿದಂತಾಗುತ್ತದೆ. 

ವಿರೂಪಗೊಳ್ಳುವವರ ದೇಹಕ್ಕೆ ಹೊಸರೂಪ ನೀಡಲು ಇದು ಸಹಕಾರಿಯಾಗಲಿದೆ. ಹೀಗಾಗಿ ಸಾರ್ವಜನಿಕರು ಚರ್ಮದಾನಕ್ಕೆ ಮುಂದಾಗಬೇಕು ಎಂದು ಸುಟ್ಟ ವಿಭಾಗದ ವೈದ್ಯರು ತಿಳಿಸುತ್ತಾರೆ.

ಎಚ್‌ಐವಿ ಸೋಂಕು ಹಾಗೂ ಚರ್ಮರೋಗ ಇರುವವರಿಂದ ಚರ್ಮ ಪಡೆಯುವುದಿಲ್ಲ. ಮೃತ ವ್ಯಕ್ತಿಯ ದೇಹದಿಂದ ಅಂಗಾಂಗ ಮಾದರಿಯಲ್ಲಿಯೇ ಆರು ತಾಸಿನೊಳಗೆ ಚರ್ಮ ಸಂಗ್ರಹಿಸಲಾಗುತ್ತದೆ. ಬಳಿಕ ರಕ್ತ ನಿಧಿ ಮಾದರಿಯÇÉೇ ಕೋಲ್ಡ್‌ ಸ್ಟೋರೇಜ್‌ನಲ್ಲಿ ಸಂರಕ್ಷಿಸಲಾಗುತ್ತದೆ. ಚರ್ಮವನ್ನು 3-4 ವಾರಗಳ ಕಾಲ ಮಾತ್ರ ಸಂರಕ್ಷಿಸಬಹುದು. ಹೀಗಾಗಿ ಬೇಡಿಕೆ ಇರುವ ಖಾಸಗಿ ಆಸ್ಪತ್ರೆಯ ತುರ್ತು ಪ್ರಕರಣಗಳಿಗೆ ಮಾತ್ರ ನೀಡಲಾಗುತ್ತದೆ ಎಂದು ಹೇಳುತ್ತಾರೆ.

ದೇಶದ 3ನೇ ಸ್ಕಿನ್‌ ಬ್ಯಾಂಕ್‌
ಮುಂಬೈನ ರಾಷ್ಟ್ರೀಯ ಸುಟ್ಟ ಗಾಯಗಳ ಕೇಂದ್ರ ಹಾಗೂ ಚೆನ್ನೈನಲ್ಲಿನ ರೈಟ್ಸ್‌ ಆಸ್ಪತ್ರೆಯಲ್ಲಿ ಸ್ಕಿನ್‌ ಬ್ಯಾಂಕ್‌ ಹೊರತು ಪಡಿಸಿದರೆ, ಬೆಂಗಳೂರು ನಗರದ ಸ್ಕಿನ್‌ ಬ್ಯಾಂಕ್‌ ದೇಶದಲ್ಲಿಯೇ ಮೂರನೇ ಬ್ಯಾಂಕ್‌ ಆಗಿದೆ. ಮುಂಬೈನ ಮಾದರಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದ್ದು, ತಜ್ಞ ವೈದ್ಯರು ಮತ್ತು ಸಿಬ್ಬಂದಿ ಮುಂಬೈಗೆ ಹೋಗಿ ತರಬೇತಿ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದ ಮುಖ್ಯಸ್ಥ ಡಾ.ಕೆ.ಟಿ.ರಮೇಶ್‌ ತಿಳಿಸಿದ್ದಾರೆ.

30 ಮಂದಿಯಿಂದ ದಾನ:
ಸ್ಕಿನ್‌ ಬ್ಯಾಂಕ್‌ ಪ್ರಾರಂಭಗೊಂಡು ವರ್ಷದಲ್ಲಿಯೇ 30 ದಾನಿಗಳು ಚರ್ಮದಾನ ಮಾಡಿದ್ದಾರೆ. ಜನರಲ್ಲಿ ಜಾಗೃತಿಯ ಕೊರತೆಯ ನಡುವೆಯೂ 30ದಾನಿಗಳ ಚರ್ಮ ದಾನವಾಗಿರುವುದು ಮೆಚ್ಚುಗೆಗೆ ಪಾತ್ರವಾಗಿದೆ. ಜಾಗೃತಿಯ ಕೊರತೆ ಕಾರಣ ಹಲವು ಮಂದಿ ಚರ್ಮ ದಾನಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ನಟರನ್ನು ರಾಯಭಾರಿಗಳನ್ನಾಗಿ ಮಾಡಿಕೊಳ್ಳುವ ಮೂಲಕ ಜನತೆಯಲ್ಲಿ ಮತ್ತಷ್ಟು ಜಾಗೃತಿ ಮೂಡಿಸುವ ಯೋಚನೆ ವೈದ್ಯರಾಗಿದ್ದಾರೆ.

ಈಗಾಗಲೇ ನೆನಪಿರಲಿ ಖ್ಯಾತಿ ನಟ ಪ್ರೇಮ್‌ ಮತ್ತು ಕಾಂಗ್ರೆಸ್‌ ಮುಖಂಡರೂ ಆಗಿರುವ ನಟ ಕುಮಾರ್‌ ಬಂಗಾರಪ್ಪ ರಾಯಭಾರಿಗಳಾಗಲು ಸಹಮತ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ಸೆಲೆಬ್ರಿಟಿಗಳನ್ನು ಆಯ್ಕೆ ಮಾಡಿಕೊಂಡು ಪ್ರಚಾರ ಕಾರ್ಯ ಆರಂಭಿಸಲು ನಿರ್ಧರಿಸಲಾಗಿದೆ.

– ಪ್ರಭುಸ್ವಾಮಿ ನಟೇಕಲ್‌

ಟಾಪ್ ನ್ಯೂಸ್

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.