ದಕ್ಷಿಣಕಾಶಿ ನಂಜನಗೂಡಿನಲ್ಲಿ ಜಾಗರಣೆ
Team Udayavani, Feb 26, 2017, 12:20 PM IST
ನಂಜನಗೂಡು: ದಕ್ಷಿಣಕಾಶಿಯ ನಂಜನಗೂಡಿನ ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ಶಿವರಾತ್ರಿ ಪ್ರಯುಕ್ತ ರಾತ್ರಿಯೀಡಿ ಜಾಗರಣೆ ನಡೆಸಲಾಯಿತು. ಶುಕ್ರವಾರ ಬೆಳಗಿನ ಜಾವದಿಂದ ಹಿಡಿದು ಶನಿವಾರ ಸೂರ್ಯೋದಯದ ವರೆಗೂ ಭಕ್ತಾದಿಗಳು ಸಾಲುಗಟ್ಟಿ ನಿಂತು ನಂಜುಂಡೇಶ್ವರನ ದರ್ಶನ ಪಡೆದು ಪುನೀತರಾದರು.
ಜಾಗರಣೆಗಾಗಿ ಶ್ರೀಕಂಠೇಶ್ವರ ದೇವಾಲಯಕ್ಕೆ ವಿವಿಧ ಭಾಗಗಳಿಂದ ಸಹಸ್ರಾರು ಭಕ್ತರು ಆಗಮಿ ಸಿದ್ದರು. ಈ ವೇಳೆ ಭರತ ನಾಟ್ಯ, ಭಕ್ತಿಗೀತೆ, ಹರಿಕಥೆ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಭಕ್ತರಿಗೆ ರಾತ್ರಿ ಫಲಹಾರದ ವ್ಯವಸ್ಥೆ ಮಾಡಲಾಗಿತ್ತು.
ನಂಜನಗೂಡಿನಲ್ಲಿ ಮಹಾಶಿವರಾತ್ರಿ ಅಂಗವಾಗಿ ಚಿಕ್ಕಯ್ಯನ ಛತ್ರದ ಶ್ರೀಪ್ರಸನ್ನ ನಂಜುಂಡೇಶ್ವರ ದೇವಸ್ಥಾನ, ಮಹದೇಶ್ವರ ಬಡಾವಣೆಯ ಮಲೆಮಹದೇಶ್ವರಸ್ವಾಮಿ ದೇವಸ್ಥಾನ, ಕಪಿಲಾನದಿ ತೀರದ ಲಿಂಗಾಭಟ್ಟರ ಶ್ರೀ ಕಾಶಿವಿಶ್ವೇಶ್ವರಸ್ವಾಮಿ ದೇವಸ್ಥಾನ, ಗೌರಿಘಟದ ಬೀದಿಯಲ್ಲಿರುವ ಶ್ರೀ ಕಪಿಲಾ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ, ದೇವೀರಮ್ಮನಹಳ್ಳಿಯ ಶ್ರೀಶರಣ ಸಂಗಮ ಮಂಟಪದಲ್ಲಿ ಭಕ್ತರಿಗಾಗಿ ಪ್ರಸಾದ ಹಾಗೂ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.