ಕಲೆ ವೃತ್ತಿಯಾಗಿಸಿಕೊಳ್ಳಿ: ಉಮಾಶ್ರೀ
Team Udayavani, Feb 26, 2017, 2:58 PM IST
ಮಾದನ ಹಿಪ್ಪರಗಿ: ಹಿಂದೆ ಕಲಾವಿದರಿಗೆ ಯಾವುದೆ ತರಬೇತಿಗಳಿರಲಿಲ್ಲ. ಬದಲಾದ ಜೀವನ ಶೈಲಿಯಿಂದ ನಮ್ಮ ದೇಶಿ ಸಂಸ್ಕೃತಿ ಮರೆಯಾಗಿದೆ. ಈಗ ಸರಕಾರ ಜಾನಪದ ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯದಲ್ಲಿತೊಡಗಿದೆ. ಕಾಲೇಜು ಯುವಕ-ಯುವತಿಯರು ಕಲೆಯನ್ನು ವೃತ್ತಿಯಾಗಿ ಸ್ವೀಕರಿಸುವ ಕಾಲ ಬಂದಿದೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು.
ಫೆ.23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಬಯಲು ರಂಗಮಂದಿರದಲ್ಲಿ 30 ಜಾನಪದ ಕಲಾವಿದರಿಗೆ 2016ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಜನಪದ ಸಂಸ್ಕೃತಿ ಬೆಳೆಸುವ ಉದ್ದೇಶದಿಂದ ಗ್ರಾಮೀಣ ಭಾಗದ ಕಲೆ ಗುರುತಿಸಿ ಪ್ರಸಕ್ತ ಸಾಲಿನಲ್ಲಿ 1280 ಯುವಕರಿಗೆ ತರಬೇತಿ ನೀಡಲಾಗಿದೆ ಎಂದು ಹೇಳಿದರು.
ಜಾನಪದ ಅಕಾಡೆಮಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ ಮಾತನಾಡಿ, ಕಲಾವಿದರಿಗೆ ನೀಡುತ್ತಿರುವ ಗೌರವಧನ ತಾರತಮ್ಯ ಹೋಗಲಾಡಿಸಲಾಗಿದೆ. ಎಲ್ಲ ಕಲಾವಿದರಿಗೂ ಒಂದೇ ಸಂಭಾವನೆ ಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದರು. ಪದ್ಮಶ್ರೀ ಪ್ರಶಸ್ತಿ ಪಡೆದ ಸುಕ್ರಿ ಬೊಮ್ಮೇಗೌಡ್ರು ಮಾತನಾಡಿ, ಕಲೆ ಉಳಿಸಿ ಬೆಳೆಸುವ ಕೆಲಸ ನಡೆಯಬೇಕಾಗಿದೆ ಎಂದರು. ನಂತರ 30 ಜಾನಪದ ಕಲಾವಿದರು ಮತ್ತು ಇಬ್ಬರು ಜಾನಪದ ವಿದ್ವಾಂಸರನ್ನು ಸಚಿವೆ ಉಮಾಶ್ರೀ ಸನ್ಮಾನಿಸಿದರು.
ಮಾದನ ಹಿಪ್ಪರಗಿ ಗ್ರಾಮದ ಶಕುಂತಲಾ ಕಲ್ಲಪ್ಪ ಭೂಸನೂರ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪಡೆದಿದ್ದಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ| ಡಿ.ಜಿ. ಸಾಗರ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಗೃಹ ನಿರ್ಮಾಣ ಸಂಘದ ಉಪಾಧ್ಯಕ್ಷ ಎಸ್.ಪಿ. ಸುಳ್ಳದ, ದಲಿತ ಮುಖಂಡ ಬಸಣ್ಣ ಸಿಂಗೆ, ಬೋಧಿಸತ್ವ ವಿದ್ಯಾವರ್ಧಕ ಸಂಸ್ಥೆ ಅಧ್ಯಕ್ಷ ಬಾಬುರಾವ ಸುಳ್ಳದ ಕಾರ್ಯದರ್ಶಿ ಮಿಲಿಂದ ಸುಳ್ಳದ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.