ಪ್ರಶ್ನೆ ಪತ್ರಿಕೆ ಸೋರಿಕೆ : ಸೇನೆ ನೇಮಕಾತಿಯಲ್ಲೂ ಭ್ರಷ್ಟಾಚಾರ 

Team Udayavani, Feb 27, 2017, 11:17 AM IST

Ankana-1.jpg

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವುದು ಮತ್ತು ಅದರ ಫ‌ಲಾನುಭವಿಯಾಗುವುದು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸುವ ಕಾನೂನು ಅಗತ್ಯವಿದೆ.  ಜೊತೆಗೆ ನಮ್ಮ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರವಾದ ಸುಧಾರಣೆಗಳಾಗಬೇಕು.

ಪ್ರಶ್ನೆ ಪತ್ರಿಕೆ ಸೋರಿಕೆ ಎನ್ನುವುದು ಈಗ ಮಾಮೂಲು ಪಿಡುಗಾಗಿ ಹೋಗಿದೆ.  ಈಗ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಪರೀಕ್ಷೆ ನಡೆಸುವುದೇ ಒಂದು ಭಾರೀ ಸವಾಲಿನ ಕೆಲಸ ಎನ್ನುವಂತಾಗಿದೆ. ಒಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದೆಂದರೆ ಯುದ್ಧಕ್ಕೆ ನಡೆಸುವಂತಹ ತಯಾರಿಯನ್ನು ನಡೆಸಬೇಕಾಗಿದೆ. ಇದೀಗ ರವಿವಾರ ನಡೆದ ಸೇನಾ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಈ  ಸಾಲಿಗೆ ಇನ್ನೊಂದು ಸೇರ್ಪಡೆ. ದೇಶಾದ್ಯಂತ 52 ಕೇಂದ್ರಗಳಲ್ಲಿ ಸೇನೆಗೆ ಗುಮಾಸ್ತರು, ಸ್ಟ್ರಾಂಗ್‌ಮ್ಯಾನ್‌ ಮತ್ತು ಟ್ರೇಡ್ಸ್‌ಮ್ಯಾನ್‌ಗಳನ್ನು ನೇಮಿಸಿಕೊಳ್ಳುವ ಸಲುವಾಗಿ ಪರೀಕ್ಷೆ ನಡೆಸಲಾಗಿತ್ತು. ಪುಣೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಮಾಹಿತಿ ಸಿಕ್ಕಿದ ಬಳಿಕ ಮಹಾರಾಷ್ಟ್ರ ಮತ್ತು ಗೋವಾ ಒಳಗೊಂಡಿರುವ ಪಶ್ಚಿಮ ಭಾರತದ ಆರು ಕೇಂದ್ರಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. 18 ಮಂದಿಯನ್ನು ಸೋರಿಕೆಗೆ ಸಂಬಂಧಿಸಿ ಬಂಧಿಸಲಾಗಿದೆ ಹಾಗೂ 300ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಿಚಾರಣೆಗೊಳಪಡಿಸಲಾಗಿದೆ. ಕೋಚಿಂಗ್‌ ಕ್ಲಾಸ್‌ಗಳೇ ಪ್ರಶ್ನೆಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಿವೆ ಹಾಗೂ ಕೆಲವೆಡೆಗಳಲ್ಲಿ ಸೇನೆಯ ಉದ್ಯೋಗಿಗಳೇ ಹೊಟೇಲುಗಳಲ್ಲಿ ಕುಳಿತು ಉತ್ತರ ಬರೆದಿದ್ದಾರೆ ಎನ್ನಲಾಗಿದೆ. ಅತ್ಯಂತ ಹೆಚ್ಚು ಶಿಸ್ತು ಮತ್ತು ದಕ್ಷತೆ ಬಯಸುವ ಸೇನೆಯಲ್ಲಿ ಈ ಪರಿಯ ಭ್ರಷ್ಟಾಚಾರ ಇದೆ ಎನ್ನುವುದು ಗಂಭೀರವಾಗಿ ಪರಿಗಣಿಸಬೇಕಾದ ವಿಚಾರ. 

ಪ್ರಶ್ನೆ ಪತ್ರಿಕೆ ಸೋರಿಕೆ ಎಂದಾಕ್ಷಣ ಕಣ್ಣೆದುರು ಬರುವುದು ಕಳೆದ ವರ್ಷ ಕರ್ನಾಟಕದಲ್ಲಿ ಸಂಭವಿಸಿದ ಘಟನೆ. ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಎರಡೆರಡು ಸಲ ಸೋರಿಕೆಯಾಗಿ ಸರಕಾರ ಭಾರೀ ಮುಜುಗರಕ್ಕೀಡಾಗಿ ತಲೆತಗ್ಗಿಸುವಂತಾಗಿತ್ತು. ಅಂಕವೇ ಮುಖ್ಯವಾಗಿರುವ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಪರೀಕ್ಷೆಗೆ ಎಲ್ಲಿಲ್ಲದ ಮಹತ್ವವಿದೆ.  ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಮರುಪರೀಕ್ಷೆ ನಡೆಸುವುದು ಅನಿವಾರ್ಯ ಎಂದು 2010ರ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌ ಹೇಳಿದೆ. ನೇಮಕಾತಿ ಪ್ರಕ್ರಿಯೆಯ ಪಾವಿತ್ರ್ಯವನ್ನು ಕಾಪಾಡುವ ಸಲುವಾಗಿ ಚಿಕ್ಕ ಸೋರಿಕೆಯಾಗಿದ್ದರೂ ಮರುಪರೀಕ್ಷೆ ನಡೆಸಲೇ ಬೇಕೆಂದು ನ್ಯಾಯಾಲಯ ಈ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. 

ಅಚ್ಚರಿಯ ವಿಚಾರವೆಂದರೆ ಗುಮಾಸ್ತರಂತಹ ಚಿಕ್ಕ ಹುದ್ದೆಗಳಿಗೆ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳಲ್ಲೂ ಪ್ರಶ್ನೆಪತ್ರಿಕೆ ಸೋರಿಕೆಯಾಗುವುದು. ಅಭ್ಯರ್ಥಿಗಳ ಸಾಮಾನ್ಯಜ್ಞಾನವನ್ನು ಮತ್ತು ವೃತ್ತಿಗೆ ಸಂಬಂಧಿಸಿದ ಕೌಶಲ್ಯವನ್ನು ಅಳೆಯಲು ನಡೆಸುವ ಪರೀಕ್ಷೆಯನ್ನು ಎದುರಿಸುವಷ್ಟು ಜ್ಞಾನವೂ ಇಲ್ಲ ಎಂದಾದರೆ ಅವರು ಗಳಿಸುವ ವಿದ್ಯೆ ಯಾವ ರೀತಿಯದ್ದು ಎನ್ನುವ ಪ್ರಶ್ನೆ ಎದುರಾಗುತ್ತದೆ.  ಶಾಲಾ ಕಾಲೇಜುಗಳಲ್ಲಿ ನೈತಿಕತೆಯ ಶಿಕ್ಷಣ ಮರೆಯಾಗಿರುವುದೇ ಇದರ ಮೂಲಕಾರಣ. ಈಗ ಎಲ್ಲರೂ ಅಂಕಗಳ ಹಿಂದೆ ನಾಗಾಲೋಟದಲ್ಲಿರುವುದರಿಂದ ನೈತಿಕತೆ, ಮೌಲ್ಯಗಳೆಲ್ಲ ಅರ್ಥ ಕಳೆದುಕೊಂಡಿವೆ. ಪರೀಕ್ಷೆ  ನೆನಪಿನ ಶಕ್ತಿ ಪರೀಕ್ಷಿಸುವ ವಿಧಾನವೇ  ಹೊರತು ಅಭ್ಯರ್ಥಿಯ ನೈಜ ಸಾಮರ್ಥ್ಯ ಮತ್ತು ಕೌಶಲ್ಯ ಪರೀಕ್ಷಿಸುವ ಮಾಧ್ಯಮವಲ್ಲ. ಒಂದೆರಡು ಲಕ್ಷ ಕೊಟ್ಟರೆ ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ಸಿಗುತ್ತದೆ. ಹೀಗಿರುವಾಗ  ಕಷ್ಟಪಟ್ಟು ಕಲಿಯುವುದು  ಏಕೆ ಎಂಬ ಮನೋಭಾವ ಬೆಳೆಯುತ್ತಿದೆ. ಮೊಬೈಲ್‌, ವಾಟ್ಸಪ್‌, ಫೇಸ್‌ಬುಕ್‌ನಂತಹ ಆಧುನಿಕ ಸಂಪರ್ಕ ಮಾಧ್ಯಮಗಳು ಸೋರಿಕೆಯನ್ನು ಬಹಳ ಸುಲಭಗೊಳಿಸಿವೆ.
 
ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ ವ್ಯವಸ್ಥಿತವಾದ ಜಾಲ ಕಾರ್ಯವೆಸಗುತ್ತಿದೆ. ಕೆಲವೊಮ್ಮೆ ಪ್ರಶ್ನೆಪತ್ರಿಕೆಗಳು ಮುದ್ರಣವಾಗುತ್ತಿರುವಾಗಲೇ  ಜಾಲದ ಕೈಸೇರಿರುತ್ತದೆ. ಈ ಜಾಲ ರಾಜಕಾರಣಿಗಳ ಮತ್ತು ಉನ್ನತ ಅಧಿಕಾರಿಗಳ ನಂಟು ಹೊಂದಿರುತ್ತದೆ. ಆದರೆ ಸಿಕ್ಕಿ ಬೀಳುವುದು ಚಿಲ್ಲರೆ ಅಪರಾಧಿಗಳು ಮಾತ್ರ. ಹೀಗಾಗಿ ಪ್ರತಿವರ್ಷ ಸೋರಿಕೆ ಎನ್ನುವುದು ಮರುಕಳಿಸುತ್ತಲೇ ಇರುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವುದು ಮತ್ತು ಅದರ ಫ‌ಲಾನುಭವಿಯಾಗುವುದು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸುವ ಕಠಿಣ ಕಾನೂನು ರಚಿಸುವ ಅಗತ್ಯವಿದೆ. ಇದಕ್ಕೂ ಮಿಗಿಲಾಗಿ ನಮ್ಮ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರವಾದ ಸುಧಾರಣೆಗಳಾಗಬೇಕು. ಪರೀಕ್ಷೆಗಳು ನೆನಪಿನ ಶಕ್ತಿಯನ್ನು ಅಳೆಯುವ ಮಾನದಂಡವಾಗುವ ಬದಲು ಅಭ್ಯರ್ಥಿಯ ನೈಜ ಸಾಮರ್ಥ್ಯವನ್ನು ಪರೀಕ್ಷಿಸುವ ಅಳತೆಗೋಳಾಗಬೇಕು. 

ಟಾಪ್ ನ್ಯೂಸ್

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.