ಹೋರಾಟಕ್ಕೆ ಸಾರ್ವಜನಿಕರ ಸಾಥ್‌ ಕೇಳಿದ ಚಾಲಕರು

Team Udayavani, Feb 27, 2017, 12:06 PM IST

ola-uber.jpg

ಬೆಂಗಳೂರು: ಸರ್ಕಾರಿ ದರ ನಿಗದಿಪಡಿಸಬೇಕು, ಕಂಪೆನಿಗಳ ಕಿರುಕುಳದಿಂದ ಮುಕ್ತಿ ಕಲ್ಪಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾನುವಾರ ಓಲಾ-ಉಬರ್‌ ಚಾಲಕರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ಗಮನಸೆಳೆದರು. 

ಪ್ರತಿಷ್ಠಿತ ರಸ್ತೆಗಳಾದ ಯುಬಿ ಸಿಟಿ, ಎಂ.ಜಿ. ರಸ್ತೆ, ಬ್ರಿಗೇಡ್‌ ರಸ್ತೆ, ಕಮರ್ಷಿಯಲ್‌ ಸ್ಟ್ರೀಟ್‌ಗಳಲ್ಲಿ ಫ‌ಲಕಗಳೊಂದಿಗೆ ರಸ್ತೆಗಿಳಿದ ಚಾಲಕರು, ವಾಹನ ಸವಾರರು ಮತ್ತು ಪಾದಚಾರಿಗಳ ಮುಂದೆ ತಮಗಾಗುತ್ತಿರುವ ಅನ್ಯಾಯವನ್ನು ಹೇಳಿಕೊಂಡರು. ಪೊಲೀಸರು ಪ್ರತಿಭಟನೆಗೆ ಅನುಮತಿ ನೀಡುತ್ತಿಲ್ಲ; ಇತ್ತ ಕಂಪೆನಿಗಳು ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ದಯವಿಟ್ಟು ನಮ್ಮ ಹೋರಾಟಕ್ಕೆ ದನಿಯಾಗಿ ಎಂದು ಪ್ರತಿಭಟನಾಕಾರರು ಜನರಲ್ಲಿ ಅಲವತ್ತುಕೊಂಡರು. 

“ನಾವು ಭಿಕ್ಷುಕರಲ್ಲ; ಓಲಾ-ಉಬರ್‌ ಚಾಲಕರು’, “ಓಲಾ-ಉಬರ್‌ ಸಹವಾಸ; ಹೆಂಡತಿ-ಮಕ್ಕಳ ಉಪವಾಸ’, “ನಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಕಪ್ಪಕಾಣಿಕೆ ನೀಡಬೇಕಿದೆ. ಹಾಗಾಗಿ, 1 ರೂ. ನೆರವು ಕೊಡಿ’ ಎಂಬ ಫ‌ಲಕಗಳು ಪ್ರತಿಭಟನೆಯಲ್ಲಿ ಜನರ ಗಮನಸೆಳೆದವು. ಇದಕ್ಕೆ ಪೂರಕವಾಗಿ ಜನ ಕೂಡ ಸ್ಪಂದಿಸಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಮನೆಯಲ್ಲಿ ಕುಳಿತು ಶಾಂತಿಯುತವಾಗಿ ಬಂದ್‌ಗೆ ಬೆಂಬಲಿಸುತ್ತಿರುವ ಚಾಲಕರು ಕಳೆದ ಎರಡು ದಿನಗಳಿಂದ ಉಪವಾಸ ಸತ್ಯಾಗ್ರಹ ನೆಡೆಸಲು ಅನುಮತಿ ಕೊರುತ್ತಿದ್ದಾರೆ. ಆದರೆ, ಪೋಲೀಸ್‌ ಇಲಾಖೆ ಅನುಮತಿ ನೀಡುತ್ತಿಲ್ಲ. ಇತ್ತ ರಾಜ್ಯ ಸರ್ಕಾರವು ಮಧ್ಯಪ್ರವೇಶಿಸಿ ಚಾಲಕರ ಸಮಸ್ಯೆ ಬಗೆಹರಿಸುತ್ತಿಲ್ಲ.

ಹಾಗಾಗಿ, ಅನಿವಾರ್ಯವಾಗಿ ನಮ್ಮ ಸಮಸ್ಯೆಗಳನ್ನು ರಸ್ತೆ ಬದಿಯಲ್ಲಿ ನಿಂತು ಜನರಿಗೆ ತಲುಪಿಸುತ್ತಿದ್ದೇವೆ’ ಎಂದು ಹೇಳಿದರು. ಯಾರಿಗೂ ತೊಂದರೆ ನೀಡದೆ ಈ ರೀತಿ ಜನರ ಮುಂದೆ ಬಂದಿರುವ ಚಾಲಕರಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿತು. ಸೋಮವಾರ ಕೂಡ ಈ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೆಸರು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ತಿಳಿಸಿದರು. 

ಟಾಪ್ ನ್ಯೂಸ್

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.