ಸರ್ಕಾರ ವಿಸರ್ಜಿಸಿ ಚುನಾವಣೆಗೆ ಬನ್ನಿ

Team Udayavani, Feb 27, 2017, 12:14 PM IST

shobakka.jpg

ಬೆಂಗಳೂರು: ರಾಜ್ಯದಲ್ಲಿ ಸಾಮೂಹಿಕ ಭ್ರಷ್ಟಾಚಾರ ನಡೆಯುತ್ತಿದ್ದು, ಇದನ್ನು ನಿಯಂತ್ರಿಸಲು ಸಾಧ್ಯವಾಗದ ಸಿಎಂ ಸಿದ್ದರಾಮಯ್ಯ ಅವರಿಗೆ ಈ ರಾಜ್ಯವನ್ನು ಆಳುವ ನೈತಿಕತೆಯಿಲ್ಲ. ಆದ್ದರಿಂದ ತಕ್ಷಣ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು. 

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ಉದ್ಘಾಟನೆ ಮತ್ತು ರಾಜ್ಯ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಭ್ರಷ್ಟಾಚಾರಿಗಳ ಕೂಟವೇ ಆಡಳಿತ ನಡೆಸುತ್ತಿದೆ. ಸರ್ಕಾರದ ಜನವಿರೋಧಿ ನೀತಿಯನ್ನು ಮಾರ್ಮಿಕವಾಗಿ ಮತ್ತು ಮನಮುಟ್ಟುವ ರೀತಿಯಲ್ಲಿ ಜನರಿಗೆ ತಿಳಿಸುವ ಕೆಲಸವನ್ನು ಸಾಂಸ್ಕೃತಿಕ ಪ್ರಕೋಷ್ಠ ಮಾಡಬೇಕು ಎಂದರು.

ರಾಜ್ಯಾದ್ಯಂತ ತೀವ್ರ ಬರಗಾಲ ವ್ಯಾಪಿಸಿದ್ದು, ರೈತರೇ ಊಟಕ್ಕಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ ಜಾನುವಾರುಗಳ ಮೇವಿಗೆ ರೈತರಿಂದ 3 ರೂ. ವಸೂಲಿ ಮಾಡುವ ದುಷ್ಟ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ಹಣ ನೀಡಿದರೂ ಅದನ್ನು ರೈತರಿಗೆ ತಲುಪಿಸಲು ಸರ್ಕಾರಕ್ಕೆ ಆಗುತ್ತಿಲ್ಲ.

ಮಂತ್ರಿಗಳು ತಮ್ಮ ಕೆಲಸ ಬಿಟ್ಟು ಹಣ ಸಂಗ್ರಹಕ್ಕಾಗಿ ಓಡಾಡುತ್ತಿದ್ದಾರೆ. ಆದ್ದರಿಂದ ಈ ಸರ್ಕಾರದ  ಮುಖವಾಡ ಕಳಚುವ ನಿಟ್ಟಿನಲ್ಲಿ ಬಿಜೆಪಿ ಕೆಲಸ ಮಾಡಲಿದೆ. ಮುಂದಿನ ಚುನಾವಣೆಯಲ್ಲಿ ಜನರೇ ಈ ಸರ್ಕಾರದ ಭವಿಷ್ಯ ತೀರ್ಮಾನಿಸಲಿದ್ದು, ಬಿ.ಎಸ್‌.ಯಡಿಯೂರಪ್ಪ ಮತ್ತೆ ಮುಖ್ಯ ಮಂತ್ರಿಯಾಗುವುದು ಖಚಿತ ಎಂದರು.

ಬಿಜೆಪಿಯ ಪಂಚ ದೀಕ್ಷೆಗಳಲ್ಲಿ “ಸಾಂಸ್ಕೃತಿಕ ರಾಷ್ಟ್ರವಾದ’ ಕೂಡ ಒಂದು. ಈ ದೇಶದ ಸಂಸ್ಕೃತಿ, ಕಲೆ ಮತ್ತು ಕಲಾವಿದರನ್ನು ಉಳಿಸಿ, ಬೆಳೆಸುವುದು ಸಾಂಸ್ಕೃತಿಕ ಪ್ರಕೋಷ್ಠದ ಜವಾಬ್ದಾರಿ. ಆ ನಿಟ್ಟಿನಲ್ಲಿ ಕಲಾವಿದರನ್ನು ಗುರುತಿಸಿ ಜಿಲ್ಲಾಮಟ್ಟದಲ್ಲಿ ಅವರನ್ನು ಪ್ರಕೋಷ್ಠಕ್ಕೆ ಸೇರಿಸಿಕೊಳ್ಳಿ ಎಂದರು.

ಅವರ ಮೂಲಕ ಕಾರ್ಯಕ್ರಮಗಳನ್ನು ನಡೆಸಿ ಈ ಸರ್ಕಾರದ ಜನ ವಿರೋಧಿ ನೀತಿಗಳನ್ನು ಜನರ ಗಮನಕ್ಕೆ ತಂದು ಮುಂದೆ ಬಿಜೆಪಿ ಅಧಿಕಾರಕ್ಕೆ ಬರುವಂತೆ ಮಾಡಿ ಎಂದರು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ಪ್ರಕೋಷ್ಠದ ರಾಜ್ಯ ಸಂಚಾಲಕ ರಮೇಶ್‌ ಪರವಿನಾಯಕ್‌, ಮಾಜಿ ಸಂಚಾಲಕ ಗಣೇಶ್‌ ಯಾಜಿ ಇತರರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Suilla

Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

byndoor

Siddapura: ಲಾರಿ ಚಾಲನೆಯಲ್ಲಿಯೇ ಹೃದಯಾಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.