ಸಂವಿಧಾನ ಬುಡಮೇಲು ಮಾಡಲು ಯತ್ನ


Team Udayavani, Feb 27, 2017, 12:32 PM IST

mys1.jpg

ಮೈಸೂರು: ಜಾತಿ ಧರ್ಮದ ಹೆಸರಿನಲ್ಲಿ ಸಂವಿಧಾನವನ್ನು ಬುಡಮೇಲು ಮಾಡುವ ಯತ್ನ ನಡೆಯುತ್ತಿದೆ. ಸಂವಿಧಾನದಡಿಯಲ್ಲಿ ಪ್ರತಿಯೊಬ್ಬರೂ ಸಮಾನರು. ಬುದ್ಧ, ಬಸವ, ಅಂಬೇಡ್ಕರ್‌ರ ಜಾತಿ ರಹಿತ ಸಮಾಜ ನಿರ್ಮಾಣದ ಕನಸು ಈಡೇರಿಸಬೇಕಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಹೇಳಿದರು.

ತಾಲೂಕಿನ ಮೇಗಳಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುವ ವರುಣಾ ಪೊಲೀಸ್‌ ಠಾಣೆಯ ಕಟ್ಟಡ ನಿರ್ಮಾಣಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಕಾನೂನನ್ನು ನಾವು ಗೌರವಿಸಿದರೆ, ಕಾನೂನು ನಮ್ಮನ್ನು ಗೌರವಿಸಿ, ರಕ್ಷಣೆ ಮಾಡಲಿದೆ. ಸಂವಿಧಾನದಲ್ಲಿ ಪ್ರತಿಯೊಬ್ಬರೂ ಸಮಾನರು. ಜಾತಿಯ ಹೆಸರಿನಲ್ಲಿ ಗಲಾಟೆ ಮಾಡುವುದು, ತಪ್ಪು ತಿಳಿವಳಿಕೆಯಿಂದ ಗಾಳಿಸುದ್ದಿ ಹರಡುವುದು, ಕುಡುಕರ ಬಾಯಿಗೆ ಬೀಗ ಹಾಕುವುದು, ಮಹಿಳೆಯರನ್ನುಗೌರವದಿಂದ ಕಾಣದಿದ್ದರೆ ಅಂತವರಿಗೆ ನೀತಿ ಪಾಠ ಹೇಳಲು ಪೊಲೀಸ್‌ ಠಾಣೆ ಅಗತ್ಯವಾಗಿ ಬೇಕಾಗಿದೆ ಎಂದರು.

ಜಾತಿ ಹೆಸರಿನಲ್ಲಿ ನಿಂದನೆ ಮಾಡುವುದು, ಸಾಮಾಜಿಕ ಬಹಿಷ್ಕಾರ ಹಾಕುವುದು ಅಪರಾಧ. ಇದು ಮಾನವ ಹಕ್ಕುಗಳ ಉಲ್ಲಂಘನೆ. ಪೊಲೀಸ್‌ ಠಾಣೆಗಳಿಗೆ ಬಂದಾಗ ಉಳ್ಳವರಿಗೆ ಒಂದು, ಬಡವರಿಗೆ ಒಂದು ಮಾಡಬಾರದು. ಬಡವರಿಗೆ ಅನ್ಯಾಯ ವಾದರೆ ಪೊಲೀಸರ ಮೇಲೆ ಕ್ರಮ ತೆಗೆದು ಕೊಳ್ಳುವ ಅವಕಾಶವೂ ಇದೆ ಎಂದು ಹೇಳಿದರು.

ಜನಸಂಖ್ಯೆ ಹೆಚ್ಚಾದಂತೆ ಅಭಿವೃದ್ಧಿ ವೇಗ ಕೂಡ ಹೆಚ್ಚಿದೆ. ಆದರೆ, ಮನಸ್ಸು ಗಳು ಮಾತ್ರ ಪರಿವರ್ತನೆ ಆಗುತ್ತಿಲ್ಲ. ಜಾತಿ, ಧರ್ಮದ ಹೆಸರಿನಲ್ಲಿ ಸಂವಿಧಾನ ವನ್ನು ಬುಡಮೇಲು ಮಾಡುವ ಹುನ್ನಾರ ನಡೆಯುತ್ತಿದೆ. ಮನುಕುಲ ಉಳಿಯ ಬೇಕಾದರೆ ಸಂವಿಧಾನದ ಆಶಯ ಪಾಲನೆ ಯಾಗಬೇಕು. ಇಲ್ಲದಿದ್ದರೆ ಸಮಾಜ ಅಧಃಪತನಕ್ಕೆ ಸಾಗಲಿದೆ ಎಂದರು.

ಸಂಸದ ಆರ್‌. ಧ್ರುವನಾರಾಯಣ್‌ ಮಾತನಾಡಿ, ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಇದಕ್ಕೆ ಸಾಕ್ಷ ಕೊರತೆ ಕಾರಣ ಎನ್ನಲಾಗುತ್ತಿದೆ. ಹೀಗಾಗಿ ದಲಿತರು, ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ಸಾಕ್ಷಿಗಳ ಕೊರತೆ ಯಿಂದ ಖುಲಾಸೆಯಾಗದಂತೆ ನೋಡಿ ಕೊಳ್ಳಬೇಕಾಗಿದೆ. ಕಂಬಾಲಪಲ್ಲಿ ದಲಿತರ ಸಜೀವದಹನ ಪ್ರಕರಣದಲ್ಲಿ ಸಾಕ್ಷಿಗಳನ್ನು ಒದಗಿಸಲು ಸಾಧ್ಯವಾಗದ ಕಾರಣ ಖುಲಾಸೆಗೊಂಡರು. ಹಾಗಾಗಿ, ಪೊಲೀಸ್‌ ಅಧಿಕಾರಿಗಳು ಇಂಥ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ಜಿಪಂ ಅಧ್ಯಕ್ಷೆ ನಯಿಮಾಸುಲ್ತಾನ, ಜಿಪಂ ಸದಸ್ಯೆ ಕೆ.ವೈ.ಭಾಗ್ಯ, ತಾಪಂ ಸದಸ್ಯ ಅಂಜಲಿ ಸೋಮಣ್ಣ, ಗ್ರಾಪಂ ಅಧ್ಯಕ್ಷೆ ರಾಜಮ್ಮ, ಐಜಿಪಿ ವಿಪುಲ್‌ ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕಲಾ ಕೃಷ್ಣಸ್ವಾಮಿ, ಡಿವೈಎಸ್ಪಿ ವಿಕ್ರಂ ಆಮ್ಟೆ, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಎಂಜಿನಿಯರ್‌ ಸತ್ಯನಾರಾಯಣ ಇದ್ದರು.

ಟಾಪ್ ನ್ಯೂಸ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.