“ಭಾರತೀಯ ಭಾಷೆಗಳ ತಾಯಿ ಸಂಸ್ಕೃತ: ಪ್ರೊ| ರಾಜಮಣಿ ‘
Team Udayavani, Feb 27, 2017, 12:51 PM IST
ಬಂಟ್ವಾಳ : ಸಂಸ್ಕೃತ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದೆ. ಅದು ಭಾರತೀಯ ಭಾಷೆಗಳ ತಾಯಿ ಸ್ಥಾನದಲ್ಲಿದೆ ಎಂದು ಪ್ರೊ| ರಾಜಮಣಿ ರಾಮಕುಂಜ ಹೇಳಿದರು.ವಾಮದಪದವು ಸರಕಾರಿ ಪದವಿ ಕಾಲೇಜಿನಲ್ಲಿ ಮಾನವಿಕ ಸಂಘ ಮತ್ತು ಬಂಟ್ವಾಳ ತಾಲೂಕು ಕ.ಸಾ.ಪ. ವತಿಯಿಂದ ಏರ್ಪಡಿಸಲಾದ ಪ್ರೊ| ಎಂ. ರಾಮಕೃಷ್ಣ ಭಟ್ ದತ್ತಿನಿಧಿ ಕಾರ್ಯಕ್ರಮದಲ್ಲಿ “ಕನ್ನಡ ಸಂಸ್ಕೃತ ಭಾಷಾ ಬಾಂಧವ್ಯ’ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.
ಕ.ಸಾ.ಪ. ಅಧ್ಯಕ್ಷ ಕೆ. ಮೋಹನ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಭಾಷೆಯನ್ನು ಬಳಸಿ ಬೆಳೆಸಬೇಕು. ಭಾಷೆಯ ಬಗ್ಗೆ ಕೀಳರಿಮೆ ಸಲ್ಲದು ಎಂದರು. ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿ ಪ್ರಸ್ತಾವನೆಗೈದರು. ಉಪನ್ಯಾಸಕ ಹರಿಪ್ರಸಾದ್ ಬಿ.ಕೆ. ಮುಖ್ಯ ಅತಿಥಿಯಾಗಿ ಮಾತನಾಡಿದರು. ಉದ್ಯಮಿ ಶ್ರೀಧರ ಪೈ ವಾಮದಪದವು, ಗೌರವ ಕಾರ್ಯದರ್ಶಿ ಬಿ.ತಮ್ಮಯ್ಯ, ಕೊಳಕೆ ಗಂಗಾಧರ ಭಟ್, ರಾಜಾರಾಮ ವರ್ಮ ವಿಟ್ಲ ಉಪಸ್ಥಿತರಿದ್ದರು.
ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಪದ್ಮಪ್ರಭ ಇಂದ್ರ ಸ್ವಾಗತಿಸಿ, ಸಂತೋಷ್ ನೆಲ್ಲಿಕಾರು ಕಾರ್ಯಕ್ರಮ ನಿರೂಪಿಸಿದರು. ಧನ್ಯಶ್ರೀ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.