ಮಡಿಕೇರಿ: ಫೆ.28ರಂದು ದಸಂಸ ಪ್ರತಿಭಟನೆ
Team Udayavani, Feb 27, 2017, 4:23 PM IST
ಮಡಿಕೇರಿ: ನ್ಯಾಯಮೂರ್ತಿ ಎ.ಜಿ. ಸದಾಶಿವ ಆಯೋಗದ ವರದಿ ಯಂತೆ ಒಳ ಮೀಸಲಾತಿ ಹಾಗೂ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಯನ್ನು ಸಾರ್ವಜನಿಕವಾಗಿ ಘೋಷಿಸ ಬೇಕೆಂದು ಒತ್ತಾಯಿಸಿ ಫೆ.28ರಂದು ಮಡಿಕೇರಿಯಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಲು ಪೊ›| ಬಿ. ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ ನಿರ್ಧರಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಮೋಹನ್ ಮೂಗನಾಡು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕಾಂತರಾಜು ಅವರು ನೀಡಿದ ವರದಿಯನ್ನು ಮತ್ತು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ತತ್‌ಕ್ಷಣ ಘೋಷಿಸಬೇಕೆಂದು ಒತ್ತಾಯಿಸಿ ರಾಜ್ಯವ್ಯಾಪಿ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದರು.
ಒಳಮೀಸಲಾತಿಗಾಗಿ ರಾಜ್ಯದ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ಅಧಿವೇಶನದಲ್ಲಿ ಸಂವಿಧಾನದ ತಿದ್ದುಪಡಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದರು.
ರಾಜ್ಯದ ಸುಮಾರು 6 ಕೋಟಿ ಜನಸಂಖ್ಯೆಯ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ಈಗಾಗಲೆ ನಡೆಸಲಾಗಿದ್ದು, ತಕ್ಷಣ ಇದನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ ಮೋಹನ್ ಮೂಗನಾಡು, ಮಡಿಕೇರಿ ನಗರದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಮಂಗಳವಾರ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿರಾಜಪೇಟೆ ಸಂಚಾಲಕರಾದ ಎಚ್.ಎಂ. ಮಹದೇವು, ಜಿಲ್ಲಾ ಖಜಾಂಚಿ ಗಿರೀಶ್ ಪಗಡಿಗತ್ತಲ ಹಾಗೂ ಪ್ರಮುಖರಾದ ಗಾಯತ್ರಿ ನರಸಿಂಹ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.