ಪಡಿತರ ದಲ್ಲಾಳಿ ಪಾಲು – ಆಡಳಿತ ವೈಫಲ್ಯ: ಕೋಟ ಶ್ರೀನಿವಾಸ ಪೂಜಾರಿ
Team Udayavani, Feb 28, 2017, 12:46 PM IST
ಸುಳ್ಯ: ಬಡವರ ಪಡಿತರ ದುರ್ಬಳಕೆ ಆಗುತ್ತಿದೆ.ಇದನ್ನು ಕಂಡೂ ಸರಕಾರ ಸುಮ್ಮನಿದೆ. ಸರಕಾರ ರಾಜೀನಾಮೆ ಕೊಡಲಿ ಎಂದು ನಾನು ಕೇಳುತ್ತಿಲ್ಲ. ಯಾಕೆಂದರೆ ದುರಾಡಳಿತದಿಂದ ಸರಕಾರ ಬಹುದಿನಗಳ ಕಾಲ ಉಳಿಯಲಿಕ್ಕಿಲ್ಲ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಿಂದೂ ಕಾರ್ಯಕರ್ತರನ್ನು ಹುಡುಕಿ ಹುಡುಕಿ ಕೊಚ್ಚಿ ಕೊಲೆ ಮಾಡಲಾಗುತ್ತಿದೆ. ಪ್ರಜಾಪ್ರಭುತ್ವ ರೀತಿಯಲ್ಲಿ ಪ್ರಶ್ನಿಸಲು ಹರತಾಳ ಮಾಡಲು ಹೊರಟರೆ ಅವರಿಗೆ ಚಪ್ಪಲಿಯಲ್ಲಿ ಹೊಡೆಯಬೇಕು ಎಂದು ಸಚಿವ ಖಾದರ್ ಹೇಳಿರುವುದು ಈ ಜಿಲ್ಲೆಯ ದುರಂತ ಎಂದು ಟೀಕಿಸಿ ಜಿಲ್ಲೆಯಲ್ಲಿ ಈಗಾಗಲೇ ಹತ್ಯೆಗೀಡಾದವರನ್ನು ಉಲ್ಲೇಖೀಸಿದರು.
ಕರಾವಳಿಯ 7 ಶಾಸಕರು ಹಿಂದೂಗಳ ಓಟಿನಿಂದಲೇ ಗೆದ್ದು ಬಂದಿದ್ದೇವೆ ಎಂಬುದನ್ನು ಮರೆತಿದ್ದಾರೆ. ಆಹಾರ ಸಚಿವ ಯು.ಟಿ. ಖಾದರ್ ಅವರು ತಮ್ಮ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದರು.
ರಾಜ್ಯದಲ್ಲಿ 12 ಲಕ್ಷ ಮಂದಿ ಬಿಪಿಎಲ್ ಕಾರ್ಡ್‌ನಿಂದ ವಂಚಿತರಾಗಿದ್ದಾರೆ. ದ.ಕ. ಜಿಲ್ಲೆಯಲ್ಲಿ 13,200 ಮಂದಿಯ ಕಾರ್ಡು ಬ್ಲಾಕ್ ಆಗಿದೆ. 8,160 ಕಾರ್ಡುಗಳು ಆಧಾರ್ ಲಿಂಕ್ ಇಲ್ಲದೆ ತಡೆಹಿಡಿಯಲ್ಪಟ್ಟಿವೆ ಎಂದು ಕೋಟ ಅವರು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.