ಕೂಲಿ ಕಾರ್ಮಿಕರಿಂದ ಮೆರವಣಿಗೆ
Team Udayavani, Feb 28, 2017, 1:25 PM IST
ದಾವಣಗೆರೆ: ಉದ್ಯೋಗ ಖಾತ್ರಿ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಮೆರವಣಿಗೆ, ಧರಣಿ ನಡೆಯಿತು. ಹೈಸ್ಕೂಲ್ ಮೈದಾನದಿಂದ ಮೆರವಣಿಗೆ ಆರಂಭಿಸಿದ ಕೂಲಿ ಕಾರ್ಮಿಕರು, ಅಂಬೇಡ್ಕರ್ ವೃತ್ತ, ಹದಡಿ ರಸ್ತೆ ಮೂಲಕ ಜಿಲ್ಲಾ ಪಂಚಾಯತ್ ಕಚೇರಿ ಆವರಣ ತಲುಪಿ, ಅಲ್ಲಿ ಕೆಲ ಹೊತ್ತು ಸಾಂಕೇತಿಕ ಧರಣಿ ನಡೆಸಿದರು.
ರ್ಯಾಲಿಗೆ ಚಾಲನೆ ನೀಡಿ, ಮಾತನಾಡಿದ ಕಾರ್ಮಿಕ ಮುಖಂಡ ಎಚ್.ಕೆ. ರಾಮಚಂದ್ರಪ್ಪ, ಕೂಲಿ ಕಾರ್ಮಿಕರ ಇಂದಿನ ಸ್ಥಿತಿ ತೀರ ಶೋಚನೀಯವಾಗಿದೆ. ರಾಜ್ಯ, ಕೇಂದ್ರ ಸರ್ಕಾರಗಳು ದೊಡ್ಡವರ ಪರ ನಿಲ್ಲುತ್ತಿವೆ. ಸಣ್ಣವರ ಕೂಗು ಕೇಳುತ್ತಿಲ್ಲ. ಬರದ ಈ ದಿನಗಳಲ್ಲಿ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ ಎಂದರು.
ಕೇಂದ್ರ ಸರ್ಕಾರ ಕಾರ್ಪೋರೇಟ್ ವಲಯಕ್ಕೆ ಕೋಟ್ಯಂತರ ರೂಪಾಯಿ ಸಹಾಯ ಮಾಡುತ್ತದೆ. ಈ ವರ್ಷ 5 ಲಕ್ಷ ಕೋಟಿ ರೂ.ನಷ್ಟು ರಿಯಾಯಿತಿ ನೀಡಿದೆ. ಆದರೆ, ಕೂಲಿ ಕಾರ್ಮಿಕರ, ರೈತರ ಸಮಸ್ಯೆ ಆಲಿಸಲು ಸಮಯವಿಲ್ಲ. ಲಕ್ಷ ಕೋಟಿ ರೂ.ಗಿಂತ ಕಡಮೆ ಇರುವ ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ ಎಂದು ದೂರಿದರು.
ಕೂಡಲೇ ಕೇಂದ್ರ-ರಾಜ್ಯ ಸರ್ಕಾರಗಳು ಕೂಲಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಕ್ರಮ ವಹಿಸಬೇಕು. ದಿನಕ್ಕೆ 300 ರೂ.ನಂತೆ ಕನಿಷ್ಠ ವೇತನ ನೀಡಲು ಕ್ರಮ ವಹಿಸಬೇಕು. ಸದ್ಯಉದ್ಯೋಗ ಖಾತರಿ ಯೋಜನೆಅಡಿ ಕೊಡಲಾಗುವ ಕೆಲಸವನ್ನು ವರ್ಷದಲ್ಲಿ 200ರಿಂದ 250 ದಿನ ಕೊಡಬೇಕು. ಬೋಗಸ್ ಜಾಬ್ ಕಾರ್ಡ್ ಹೊಂದಿರುವವರನ್ನು ಪತ್ತೆ ಮಾಡಿ, ರದ್ದುಮಾಡಬೇಕು.
ನಿಜವಾಗಿಯೂ ಕೆಲಸದ ಅಗತ್ಯ ಇರುವ ಕಾರ್ಮಿಕರಿಗೆ ಜಾಬ್ ಕಾರ್ಡ್ ನೀಡಬೇಕು ಎಂದು ಅವರು ಆಗ್ರಹಿಸಿದರು. ಹಾಲಿ ಎನ್‌ಆರ್‌ಇಜಿ ಅಡಿ ನೀಡಲಾಗುವ ಕೂಲಿ ಹಣವನ್ನು ಮನಸ್ಸಿಗೆ ಬಂದಾಗ ನೀಡಲಾಗುತ್ತಿದೆ. ಇದು ಬದಲಾಗಬೇಕು. ಇತರೆಯವರಿಗೆ ಕೊಡುವ ಮಾದರಿಯಲ್ಲಿಯೇ ವಾರಕ್ಕೆ ನೀಡಲು ಕ್ರಮ ಕೈಗೊಳ್ಳಬೇಕು.
ಮಧ್ಯವರ್ತಿಗಳ ಹಾವಳಿಯಿಂದ ಕೂಲಿ ಕಾರ್ಮಿಕರನ್ನು ಮುಕ್ತಗೊಳಿಸಬೇಕು ಎಂದು ಅವರು ಒತ್ತಾಯಿಸಿದರು. ಸಂಘಟನೆ ಉಪಾಧ್ಯಕ್ಷೆ ನೇತ್ರಾವತಿ, ವೀರಮ್ಮ, ತಿಪ್ಪೇಸ್ವಾಮಿ, ಶ್ರೀಮತಿ ಹುಚ್ಚೆಂಗಮ್ಮ, ಶ್ರೀಮತಿ ಶಶಿಕಲಾ, ಕೆಂಚಪ್ಪ, ಕೆ. ಗುಡದಯ್ಯ, ತಿಪ್ಪೇಸ್ವಾಮಿ, ಶಶಿಕಲಾ, ಜಗದೀಶ್ ರ್ಯಾಲಿ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.