“ಬ್ರಾಹ್ಮಣರು ಆತ್ಮಗೌರವ ಹೊಂದಬೇಕು’
Team Udayavani, Feb 28, 2017, 4:59 PM IST
ಕುಂದಾಪುರ: ಬ್ರಾಹ್ಮಣರಿಗೆ ತಾನು ಬ್ರಾಹ್ಮಣ ಎಂದು ಹೇಳಿಕೊಳ್ಳಲು ಹಿಂಜರಿಕೆ ಬೇಡ. ಆದರೆ ಹುಟ್ಟಿನಿಂದ ಮಾತ್ರ ಬ್ರಾಹ್ಮಣನಾಗದೆ ಆಚರಣೆ, ಅನುಷ್ಠಾನಗಳಿಂದಲೂ ಬ್ರಾಹ್ಮಣನಾಗಬೇಕು. ಇಂದಿಗೂ ಬ್ರಾಹ್ಮಣರ ಬಗ್ಗೆ ಇತರರಿಗೆ ಗೌರವ ಇದೆ. ಆದರೆ ನಮಗೇ ಹೆಮ್ಮೆ ಇಲ್ಲ. ಈ ಕಾರಣದಿಂದಲೇ ಇಂದು ಬ್ರಾಹ್ಮಣರು ಅವಹೇಳನಕ್ಕೆ ಗುರಿಯಾಗಿರುವುದು. ಬ್ರಾಹ್ಮಣ ಸಂಘಟನೆ ಸ್ವಾವಲಂಬನೆ ಮತ್ತು ಸಂಸ್ಕೃತಿ ರಕ್ಷಣೆಗಾಗಿಯೇ ಹೊರತು ಪರಪೀಡೆಗಲ್ಲ ಎಂದು ಸಂಸ್ಕೃತ ಪ್ರಾಧ್ಯಾಪಕ ವಿದ್ವಾನ್ ಮಾಧವ ಅಡಿಗ ಹೇಳಿದರು.
ಅವರು ಕೋಟೇಶ್ವರದ ಶ್ರೀ ಕೋದಂಡರಾಮ ಮಂದಿರದಲ್ಲಿ ಜರಗಿದ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್‌ನ ಕೋಟೇಶ್ವರ ವಲಯದ ವಾರ್ಷಿಕ ಅಧಿಧಿವೇಶನದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ತಾಲೂಕು ಪರಿಷತ್‌ನ ಅಧ್ಯಕ್ಷ ಟಿ.ಕೆ. ಮಹಾಬಲೇಶ್ವರ ಭಾಟ ಮಾತನಾಡಿ, ಪರಿಷತ್‌ನ ಪ್ರತಿವಲಯದಲ್ಲೂ ಸಂಸ್ಕೃತ ಕಲಿಕೆಗೆ ವ್ಯವಸ್ಥೆ ಮಾಡಲಾಗುವುದು ಎಂದರು.
ಉಡುಪಿ ಜಿಲ್ಲಾ ಬ್ರಾಹ್ಮಣ ಮಾಹಾಸಭಾದ ಕಾರ್ಯದರ್ಶಿ ಕೆ. ಗಣೇಶ ರಾವ್ ಮಾತನಾಡಿ, ವಿಪ್ರ ಮಹಿಳೆಯರು, ಪುರುಷರು ಒಳಗೊಂಡ ನೂತನ ಚೆಂಡೆ ವಾದನ ಬಳಗ ಅಸ್ತಿತ್ವಕ್ಕೆ ಬಂದಿರುವುದಾಗಿ ಘೋಷಿಸಿದರು.
ಸಮಾಜದಲ್ಲಿ ಗಣನೀಯ ಸೇವೆ ಸಲ್ಲಿಸಿದ ರಾಮಚಂದ್ರ ಹತ್ವಾರ್ ಬೀಜಾಡಿ ಮತ್ತು ಅರ್ಚಕ ನಾಗರಾಜ ಅಡಿಗ ಅವರನ್ನು ಸಮ್ಮಾನಿಸಲಾಯಿತು. ಸಮ್ಮಾನಿತರ ಪರವಾಗಿ ರಾಮಚಂದ್ರ ಹತ್ವಾರ್ ಮಾತನಾಡಿದರು ಶ್ರೀ ಕೋದಂಡರಾಮ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ದೊಡ್ಮನೆ ನಾಗೇಂದ್ರ ಭಟ್, ಉದ್ಯಮಿಗಳಾದ ಎನ್.ರಾಘವೇಂದ್ರ ರಾವ್, ಜಿ. ಶ್ರೀನಿವಾಸ ರಾವ್, ಪರಿಷತ್ ಪೂರ್ವಾಧ್ಯಕ್ಷ ಕೆ. ಶ್ರೀನಿವಾಸ ಹೆಬ್ಟಾರ್, ಕೃಷ್ಣದೇವ ಕಾರಂತ ಕೋಣಿ, ವಿವಿಧ ವಲಯ ಪದಾಧಿಧಿಕಾರಿಗಳು ಉಪಸ್ಥಿತರಿದ್ದರು.
ವಲಯ ಗೌರವಾಧ್ಯಕ್ಷ ಬಿ. ವಾದಿರಾಜ ಅಡಿಗ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಲಯ ಅಧ್ಯಕ್ಷ ಎಚ್. ಶ್ರೀನಿವಾಸ ಮೂರ್ತಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ನಾಗರಾಜ ಅಡಿಗ ವರದಿ ವಾಚಿಸಿದರು. ಖಜಾಂಚಿ ವಾಸುದೇವ ರಾವ್ ಆಯ-ವ್ಯಯ ವಿವರ ನೀಡಿದರು. ನೂತನ ಸದಸ್ಯರನ್ನು ಗೌರವಿಸಲಾಯಿತು. ಗೌರವ ಸಲಹೆಗಾರ ವೈ.ಎನ್. ವೆಂಕಟೇಶ ಮೂರ್ತಿ ಭಟ್ ಮತ್ತು ವಿಮಲ ಭಟ್ ಕಾರ್ಯಕ್ರಮ ನಿರೂಪಿಸಿ, ಮಹಿಳಾ ವೇದಿಕೆ ಕಾರ್ಯದರ್ಶಿ ವಸಂತಿ ಮಿತ್ಯಾಂತ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.