ಮುಸ್ಲಿಮರು ಶವ ದಹನ ಮಾಡಲಿ; 20 ಕೋಟಿ ಜನರಿಗೆ ಜಾಗ ಇಲ್ಲ: ಸಾಕ್ಷಿ
Team Udayavani, Mar 1, 2017, 11:26 AM IST
ಹೊಸದಿಲ್ಲಿ : ಕಬರಿಸ್ಥಾನ ನಿರ್ಮಾಣಕ್ಕೆ ಸಾಕಷ್ಟು ಪ್ರಮಾಣದಲ್ಲಿ ಭೂಮಿ ಅಲಭ್ಯವಿರುವುದರಿಂದ ಮುಸ್ಲಿಮರು ಶವ ದಫನದ ಬದಲು ಶವ ದಹನಕ್ಕೆ ಮುಂದಾಗಬೇಕು; ಅಂತೆಯೇ ಕಬರಿಸ್ಥಾನ ನಿರ್ಮಾಣದ ತಡೆಗೆ ಸೂಕ್ತಕಾನೂನನ್ನು ರೂಪಿಸಬೇಕು ಎಂದು, ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುವಲ್ಲಿ ಅಗ್ರಗಣ್ಯರಾಗಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.
“ನೀವದನ್ನು ಕಬರಿಸ್ಥಾನ ಎನ್ನಿ; ಶ್ಮಶಾನ ಎನ್ನಿ. ಯಾರಿಗೂ ಶವ ದಫನ ಸಮ್ಮತವಲ್ಲ. ಈ ದೇಶದಲ್ಲಿ ಎರಡೂವರೆ ಕೋಟಿ ಹಿಂದೂ ಸಂತರಿದ್ದಾರೆ. ಅವರ ದೇಹಾಂತ್ಯದ ಬಳಿಕ ಅವರಿಗೆ ಸ್ಮಾರಕ ರೂಪಿಸಬೇಕಾಗುತ್ತದೆ. ದೇಶದಲ್ಲಿ 20 ಕೋಟಿ ಮುಸ್ಲಿಮರಿದ್ದಾರೆ. ಅವರಿಗೂ ಶವ ದಫನಕ್ಕೆ ಕಬರಿಸ್ಥಾನ ನಿರ್ಮಿಸಲು ಭೂಮಿ ಬೇಕು. ಆದರೆ ಅಷ್ಟೊಂದು ಪ್ರಮಾಣದ ಭೂಮಿ ಹಿಂದುಸ್ಥಾನದಲ್ಲಿ ಎಲ್ಲಿದೆ ? ಆದುದರಿಂದ ಶವ ದಫನದ ಕಬರಿಸ್ಥಾನ ನಿರ್ಮಾಣವನ್ನು ತಡೆಯುವ ಕಾನೂನನ್ನು ರೂಪಿಸುವುದು ಅಗತ್ಯ ಎಂದು ಸಾಕ್ಷಿ ಮಹಾರಾಜ್ ಅವರು ಉನ್ನಾವೋದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಹೇಳಿದರು.
ಸಾಕ್ಷಿ ಮಹಾರಾಜ್ ಅವರ ಈ ವಿವಾದಾತ್ಮಕ ಹೇಳಿಕೆಯನ್ನು ಬಲವಾಗಿ ಖಂಡಿಸಿರುವ ಕಾಂಗ್ರೆಸ್ ಪಕ್ಷ, “ಉತ್ತರ ಪ್ರದೇಶದಲ್ಲಿ ನಿರ್ಣಾಯಕ ವಿಧಾನಸಭಾ ಚುನಾವಣೆಗಳು ನಡೆಯುತ್ತಿರುವಾಗಲೇ ಕೇಸರಿ ಪಕ್ಷವು ರಾಜ್ಯದಲ್ಲಿ ಕೋಮು ವಾತಾವಾರಣವನ್ನು ಸೃಷ್ಟಿಸಲು ಯತ್ನಿಸುತ್ತಿದೆ’ ಎಂದು ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.