ದಿನೇಶ್‌ಅಮೀನ್‌ಮಟ್ಟು ಕೈ ಬಿಡಲು ಒತ್ತಡ
Team Udayavani, Mar 1, 2017, 12:23 PM IST
ಬೆಂಗಳೂರು: ದಿನೇಶ್ ಅಮೀನ್‌ಮಟ್ಟು ಅವರನ್ನು ಮಾಧ್ಯಮ ಸಲಹೆಗಾರ ಹುದ್ದೆಯಿಂದ ಕೈ ಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹಿರಿಯ ಸಚಿವರು ಸೇರಿ ಪಕ್ಷದ ಕೆಲವು ನಾಯಕರು ಒತ್ತಡ ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡೈರಿ ಕಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದ ಪ್ರತಿಕ್ರಿಯೆ ವಿವಾದದ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಇಂತಹ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಲಾಗಿದೆ.
ಈ ಮಧ್ಯೆ, ಕೆಪಿಸಿಸಿ ಕಾರ್ಯದರ್ಶಿ ಜಯಸಿಂಹ ಅವರು ಮುಖ್ಯಮಂತ್ರಿಗೆ ಪತ್ರ ಬರೆದು, ಡೈರಿ ಪ್ರಕರಣದಲ್ಲಿ ಅಮೀನ್‌ಮಟ್ಟು ಅವರು ರಾಜ್ಯ ಸರ್ಕಾರ ಹಾಗೂ ಸಚಿವರ ವರ್ಚಸ್ಸಿಗೆ ಧಕ್ಕೆಯಾಗುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ಹೊಗಳುವ ಮೂಲಕ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ್ದಾರೆ. ಅವರನ್ನು ತಕ್ಷಣ ಮಾಧ್ಯಮ ಸಲಹೆಗಾರರ ಹುದ್ದೆಯಿಂದ ಕೈ ಬಿಡಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.