ಬಿಜೆಪಿಯಿಂದ ಐಟಿ ಇಲಾಖೆಯ ದುರುಪಯೋಗ: ಐವನ್
Team Udayavani, Mar 1, 2017, 12:40 PM IST
ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ಉರುಳಿಸಲು ಬಿಜೆಪಿಯವರು ಐಟಿ ಇಲಾಖೆ ಮತ್ತು ಜಾರಿ ನಿರ್ದೇಶನಾಲಯವನ್ನು ದುರುಪಯೋಗಿಸಿಕೊಂಡು ನಿರಂತರ ಪಿತೂರಿ ನಡೆಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ ಆರೋಪಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಯಡಿಯೂರಪ್ಪ ಮತ್ತು ಅವರ ತಂಡ ಕಾಂಗ್ರೆಸ್ ಸರಕಾರವನ್ನು ಉರುಳಿಸುವ ಉದ್ದೇಶದಿಂದಲೇ ಭ್ರಷ್ಟಾಚಾರದ ಆರೋಪ ಹೊರಿಸುತ್ತಿದ್ದಾರೆ. ಅದಕ್ಕಾಗಿ ಐಟಿ ದಾಳಿ, ಡೈರಿ ವಿಚಾರಗಳನ್ನು ಪ್ರಸ್ತಾವಿಸುತ್ತಿದ್ದಾರೆ. ಮುಖ್ಯಮಂತ್ರಿಯವರನ್ನು ಜೈಲಿಗೆ ಕಳುಹಿಸುವುದಾಗಿ ಹೇಳುತ್ತಿದ್ದಾರೆ. ಆದರೆ ಅವರ ಆರೋಪಗಳನ್ನು ಸಾಬೀತುಪಡಿಸುವ ದಾಖಲೆ ನೀಡಲಿ ಎಂದು ಸವಾಲು ಹಾಕಿದರು.
2013ರಲ್ಲಿ ಆಡ್ವಾಣಿ ಅವರಿಗೆ ಲೆಹರ್‌ಸಿಂಗ್ ಬರೆದಿರುವ ಭ್ರಷ್ಟಾಚಾರ ಬಗೆಗಿನ ಪತ್ರ ನಕಲಿಯಾ ಎಂದು ಪ್ರಶ್ನಿಸಿದ ಅವರು, ಎರಡೂ ಪಕ್ಷಗಳ ಬಗೆಗಿನ ಸಿಡಿ ಪ್ರಕರಣ, ಗೋವಿಂದ ರಾಜು ಡೈರಿ, ಸಹರಾ ಡೈರಿ, ಲೆಹರ್ ಸಿಂಗ್ ಡೈರಿ ಸಹಿತ ಎಲ್ಲ ಭ್ರಷ್ಟಾಚಾರಗಳ ಬಗ್ಗೆ ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮರ್ಪಕ ತನಿಖೆಯಾಗಲಿ. ಆಗ ಸತ್ಯ ಹೊರ ಬರುತ್ತದೆ ಎಂದು ಆಗ್ರಹಿಸಿದರು.
ಮಾಜಿ ಮೇಯರ್ ಅಶ್ರಫ್ ಕೆ., ಅಬ್ದುಲ್ ಅಝೀಜ್ ಕಾರ್ಪೊರೇಟರ್‌ಗಳಾದ ರಜನೀಶ್, ಅಬ್ದುಲ್ ಲತೀಫ್, ಪ್ರತಿಭಾ ಕುಳಾç, ನಝೀರ್ ಬಜಾಲ್, ನಾಗೇಂದ್ರಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.