ದಿಗ್ವಿಜಯ ಸಿಂಗ್ ಪ್ರತಿಕೃತಿ ದಹನ
Team Udayavani, Mar 1, 2017, 3:44 PM IST
ಕಲಬುರ್ಗಿ: ಟ್ವಿಟರ್ನಲ್ಲಿ ಇಸ್ಲಾಂ ಧರ್ಮದ ಕುರಿತು ಹಗುರವಾಗಿ ಹೇಳಿಕೆ ಪ್ರಕಟಿಸಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಮುಸ್ಲಿಂ ಚೌಕ್ ಬಳಿಯಲ್ಲಿ ಜಾತ್ಯತೀತ ಜನತಾದಳ ದಿಗ್ವಿ ಪ್ರತಿಕೃತಿ ದಹನ ಮಾಡಿ ಪ್ರತಿಭಟಿಸಿತು.
ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಉಸ್ತಾದ್, ಇಸ್ಲಾಂ ಧರ್ಮವು ಶಾಂತಿ ಸೌಹಾರ್ಧತೆ ಧರ್ಮವಾಗಿದೆ. ಎಲ್ಲರೂ ಒಂದೇ ಎನ್ನುವ ಮನೋಭಾವ ಇಸ್ಲಾಂ ಧರ್ಮದಲ್ಲಿ ಇದೆ. ಆದರೆ ಇಸ್ಲಾಂ ಧರ್ಮ ಕುರಿತು ಟ್ವೀಟರ್ ನಲ್ಲಿ ಹೇಳಿಕೆ ನೀಡಿರುವ ದಿಗ್ವಿಜಯ ಸಿಂಗ್ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷವು ಓಟ್ ಬ್ಯಾಂಕ್ ರಾಜಕೀಯ ನಿಲ್ಲಿಸಿ ದೇಶದ ಅಖಂಡತೆ ಕುರಿತು ಚಿಂತಿಸಲಿ. ಮುಸ್ಲಿಂ ಜನರ ಮನಸ್ಸಿನಲ್ಲಿ ಇಲ್ಲದ ಸಂಶಯ ಹುಟ್ಟಿಸುವುದು ಸರಿಯಾದ ಧೋರಣೆ ಅಲ್ಲ. ಕೂಡಲೇ ಈ ನಿಟ್ಟಿನಲ್ಲಿ ದಿಗ್ವಿಜಯ ಕ್ಷಮೆ ಕೇಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪ್ರಕಾಶ ಖಡಕೆ, ರಾಜ್ಯ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷ ಜಾವೀದ್ ಬಾಗವಾನ, ಹಬಿದ್ ಸರಮಸ್ತ, ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಖಲೀಂ ಅಹ್ಮದ ವಕೀಲರು ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.