ಮಾಹಿತಿ ತಂತ್ರಜ್ಞಾನದಲ್ಲಿ ಕರ್ನಾಟಕ ಮುಂದೆ
Team Udayavani, Mar 1, 2017, 3:55 PM IST
ಕಲಬುರಗಿ: ಕೇಂದ್ರ ಸರ್ಕಾರ ಈಗ ಮೇಕ್ ಇಂಡಿಯಾ, ಇನ್ವೆಸ್ಟ್ ಇಂಡಿಯಾ ಮಾಡಲಾರಂಭಿಸಿದೆ. ಆದರೆ ಕರ್ನಾಟಕ ಸರ್ಕಾರ ಈ ಹಿಂದೆಯೇ ಮಾಹಿತಿ ತಂತ್ರಜ್ಞಾನಕ್ಕೆ ಒತ್ತು ನೀಡಿದ್ದರಿಂದ ದೇಶದಲ್ಲಿಯೇ ಉತ್ತಮ ಸ್ಥಾನ ಹೊಂದಲು ಸಾಧ್ಯವಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಹೈಕ ಭಾಗದ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಪ್ಪಾ ಇಂಜಿನಿಯರಿಂಗ್ ಕಾಲೇಜು ಹಾಗೂ ಸಂಸ್ಥೆಯ ಇತರ ಕಾಲೇಜುಗಳ ಸಹಯೋಗದಲ್ಲಿ ಮಂಗಳವಾರ ಸಂಸ್ಥೆಯ ಶರಣಬಸವೇಶ್ವರ ಶತಮಾನೋತ್ಸವ ಸಭಾಂಗಣದಲ್ಲಿ ಆರಂಭಗೊಂಡ ಅಂತರ್ಜಾಲ ವಸ್ತು (ಇಂಟರ್ನೆಟ್ ಆಫ್ ಥಿಂಗ್ಸ್) ಕುರಿತ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೃಷಿ, ಜೈವಿಕ ತಂತ್ರಜ್ಞಾನ ಬೆಳವಣಿಗೆಗೆ ರಾಜ್ಯ ಸರ್ಕಾರ ಮಹತ್ವ ನೀಡಿದೆಯಲ್ಲದೇ ಇದಕ್ಕಾಗಿ ಕೋಟ್ಯಂತರ ರೂ. ಸರ್ಕಾರ ಖರ್ಚು ಮಾಡುತ್ತಿದೆ. ಹೀಗಾಗಿ ಮಾಹಿತಿ ತಂತ್ರಜ್ಞಾನದಲ್ಲಿ ಮೇಲ್ ಸ್ತರ ಸ್ಥಾನಕ್ಕೆ ಬರಲು ಸಾಧ್ಯವಾಗಿದೆ. ಗ್ರಾಮೀಣ ಭಾಗದ ಇಂಜಿನಿಯರಿಂಗ್ ಕಾಲೇಜುಗಳಿಗೂ ತಂತ್ರಜ್ಞಾನ ಬಲ ಹೆಚ್ಚಿಸಲು ಸರ್ಕಾರ ಸಹಾಯ ಮಾಡುತ್ತಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಶರಣಬಸವಪ್ಪ ಅಪ್ಪ ಮಾತನಾಡಿ, ರಾಜ್ಯದ ರಾಜಧಾನಿ ಬೆಂಗಳೂರು ಹೊರತುಪಡಿಸಿದರೆ ಹಾಗೂ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ ಇಂತಹ ರಾಷ್ಟ್ರೀಯ ಸಮ್ಮೇಳನವನ್ನು ತಮ್ಮ ಸಂಸ್ಥೆಯವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದರು.
ತಂತ್ರಜ್ಞಾನ ಯುಗದಲ್ಲಿ ಅಂತರ್ಜಾಲ ಬಳಕೆ ಯಾವ ನಿಟ್ಟಿನಲ್ಲಿ ವ್ಯಾಪಿಸಿಕೊಂಡಿದೆ ಎಂಬುದರ ಕುರಿತು ಅಂತಾರಾಷ್ಟ್ರೀಯ ತಂತ್ರಜ್ಞರು, ಸಂಶೋಧಕರು, ಪ್ರಾಧ್ಯಾಪಕರನ್ನು ಒಳಗೊಂಡು ಸುದೀರ್ಘವಾಗಿ ಚರ್ಚಿಸಲು ಸಮ್ಮೇಳನ ಪೂರಕವಾಗಲಿದೆ ಎಂದು ಹೇಳಿದರು. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಕುಲಪತಿ ಪ್ರೊ| ಎಚ್.ಎಂ. ಮಹೇಶ್ವರಯ್ಯ ಮುಖ್ಯ ಅತಿಥಿಯಾಗಿದ್ದರು.
ಅಪ್ಪ ಇಂಜಿನಿಯರಿಂಗ್ ಕಾಲೇಜಿನ ಡೀನ್ ಡಾ| ಅನೀಲಕುಮಾರ ಬಿಡವೆ ಮಾತನಾಡಿ, ಮುಂದುವರಿದ ರಾಷ್ಟ್ರಗಳಲ್ಲಿ ಇಂಟರನೆಟ್ ಆಫ್ ಥಿಂಗ್ಸ್ ವ್ಯಾಪಕವಾಗಿ ಬೆಳೆದಿದೆ. ಜೀವನದ ಅವಿಭಾಜ್ಯ ಅಂಗವಾಗುತ್ತಿರುವ ಅಂತರಜಾಲ ಬಳಕೆ ನಮಗೂ ಸರಳಗೊಳ್ಳಲಿ ಎನ್ನುವ ಸದಾಶಯದೊಂದಿಗೆ ಡಾ| ಶರಣಬಸವಪ್ಪ ಅಪ್ಪ ಇಂತಹ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಮುಂದಾಗಿದ್ದಾರೆ ಎಂದು ಹೇಳಿದರು.
ಸಂಸ್ಥೆಯ ಎಂಟಿಎ ವಿಭಾಗ ವತಿಯಿಂದ ಹೊರ ತರಲಾದ ಜಿಲ್ಲೆಯ ಐತಿಹಾಸಿಕ ತಾಣಗಳ ಸಾಕ್ಷéಚಿತ್ರವನ್ನು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದರು. ಸಂಸ್ಥೆ ಕಾರ್ಯದರ್ಶಿ ಬಸವರಾಜ ದೇಶಮುಖ, ಎಚ್ಕೆಇ ಸಂಸ್ಥೆಯ ಆಡಳಿತ ಮಂಡಳಿ ಮಾಜಿ ಸದಸ್ಯ ರಾಜು ಭೀಮಳ್ಳಿ, ದೊಡ್ಡಪ್ಪ ನಿಷ್ಠಿ, ಅಪ್ಪ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ವಿ. ಡಿ. ಮೈತ್ರಿ ಅಮೆರಿಕಾದ ಕ್ಯಾಲಿಪೋರ್ನಿಯಾದಿಂದ ಡಾ| ಶಿವಕುಮಾರ ಮಠಪತಿ,
ಐರ್ಲ್ಯಾಂಡಿನ್ ನ್ಯಾಷನಲ್ ವಿಶ್ವವಿದ್ಯಾಲಯದ ಡಾ| ಮಾರ್ಟಿನ್ ಸೆರಿನ್ನಾ, ಆಸ್ಟ್ರೇಲಿಯಾದ ಸ್ಪಿನ್ ಬರ್ನ್ ವಿಶ್ವವಿದ್ಯಾಲಯದ ಡಾ| ಪ್ರೇಮಪ್ರಕಾಶ ಜಯರಾಮನ್ ಹಾಜರಿದ್ದರು. ಸಮ್ಮೇಳನದಲ್ಲಿ ದೇಶ-ವಿದೇಶಗಳ ವಿಶ್ವವಿದ್ಯಾಲಯ ಪ್ರಾಧ್ಯಾಪಕರು, ಬೃಹತ್ ಉದ್ದಿಮೆದಾರರು ಹಾಗೂ ಇತರರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು. ತಾಂತ್ರಿಕ ಗೋಷ್ಠಿ, ಸಂವಾದಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.