ಡಬ್ಬಿಂಗ್ ಸಿನಿಮಾ ಬಿಡುಗಡೆ ಮಾಡಿದ್ರೆ ಟಾಕೀಸ್ ಗೆ ಬೆಂಕಿ ಹಚ್ತೇವೆ!
Team Udayavani, Mar 1, 2017, 7:05 PM IST
ಬೆಂಗಳೂರು: ಅನುಷ್ಕಾ ಶೆಟ್ಟಿ, ತ್ರಿಶಾ, ಅಜಿತ್ ಅಭಿನಯದ ಯೆನ್ನೈ ಅರಿಂದಾಲ್ ತಮಿಳು ಚಿತ್ರದ ಕನ್ನಡ ಡಬ್ಬಿಂಗ್ ಸತ್ಯದೇವ್ ಐಪಿಎಸ್ ಬಿಡುಗಡೆಗೆ ಸಿದ್ದವಾಗಿದ್ದರೆ, ಮತ್ತೊಂದೆಡೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಡಬ್ಬಿಂಗ್ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಲ್ಲ, ಒಂದು ವೇಳೆ ಡಬ್ಬಿಂಗ್ ಸಿನಿಮಾ ಸತ್ಯದೇವ್ ಐಪಿಎಸ್ ಅನ್ನು ಬಿಡುಗಡೆ ಮಾಡಿದ್ರೆ ಆ ಸಿನಿಮಾ ಮಂದಿರಕ್ಕೆ ಬೆಂಕಿ ಹಚ್ಚುವುದಾಗಿ ನಟ ಜಗ್ಗೇಶ್ ಎಚ್ಚರಿಕೆ ನೀಡಿದ್ದಾರೆ.
ಡಬ್ಬಿಂಗ್ ಸಿನಿಮಾ ಬಿಡುಗಡೆ ವಿರೋಧಿಸಿ ಬುಧವಾರ ಪ್ರೆಸ್ ಕ್ಲಬ್ ನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ನಟ ಜಗ್ಗೇಶ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸತ್ಯದೇವ್ ಐಪಿಎಸ್ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಲ್ಲ, ಜೈಲಿಗೆ ಹೋದರೂ ಸರಿಯೇ ಡಬ್ಬಿಂಗ್ ಸಿನಿಮಾ ಬಿಡುಗಡೆ ಮಾಡಲು ಬಿಡಲ್ಲ ಎಂದು ಜಗ್ಗೇಶ್ ಹೇಳಿದರು. ಮಾರ್ಚ್ 3ರಂದು ರಾಜ್ಯದ 60 ಚಿತ್ರಮಂದಿರಗಳಲ್ಲಿ ಡಬ್ಬಿಂಗ್ ಸಿನಿಮಾ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ.
ಹಾಗೇನಾದರೂ ಆದರೆ ಡಬ್ಬಿಂಗ್ ಸಿನಿಮಾ ಬಿಡುಗಡೆ ಮಾಡಿದ ಚಿತ್ರಮಂದಿರಕ್ಕೆ ಬೆಂಕಿ ಹಚ್ಚುವುದಾಗಿ ಚಿತ್ರಮಂದಿರದ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.
ದರ್ಶನ್ ಎಂಟರ್ ಪ್ರೈಸಸ್ ಎಂಬ ಸಂಸ್ಥೆ ಎನ್ನೈ ಅರಿಂದಾಲ್ ಸಿನಿಮಾವನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡಿ, ಬಿಡುಗಡೆಗೆ ಸಿದ್ಧವಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ನಟ ಶಿವರಾಂ, ನಿರ್ದೇಶಕ ಎಎಂಆರ್ ರಮೇಶ್, ರಂಗಾಯಣ ರಘು ಸೇರಿದಂತೆ ಹಲವು ಕನ್ನಡ ಪರ ಮುಖಂಡರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
New Delhi: ಹಬ್ಬದ ಋತು; ದೇಶದಲ್ಲಿ 4.5 ಲಕ್ಷ ವಾಹನಗಳ ದಾಖಲೆ ಮಾರಾಟ!
Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!
Ranchi: ಹೇಮಂತ್ ಸೊರೇನ್ ವಯಸ್ಸು 5 ವರ್ಷದಲ್ಲಿ 7 ವರ್ಷ ಹೆಚ್ಚಳ!; ಬಿಜೆಪಿ
Dhananjay: ಮದುವೆಗೆ ಸಿದ್ದವಾದ್ರು ಡಾಲಿ; ದುರ್ಗದ ಹುಡುಗಿಯ ಕೈ ಹಿಡಿಯಲಿದ್ದಾರೆ ಧನಂಜಯ
Goddess Lakshmi: ಲಕ್ಷ್ಮೀ ಆರಾಧನೆಯ ಪರ್ವ ಸಮಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.