ದೇಶವಿರೋಧಿ ಘೋಷಣೆ: ಕನ್ಹಯ್ಯಾಗೆ ಕ್ಲೀನ್‌ಚಿಟ್
Team Udayavani, Mar 2, 2017, 3:45 AM IST
ನವದೆಹಲಿ: ಜವಾಹರ್‌ಲಾಲ್ ನೆಹರೂ ವಿವಿಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿ ವಿದ್ಯಾರ್ಥಿ ಸಂಘದ ಮಾಜಿ ನಾಯಕ ಕನ್ಹಯ್ಯಾ ಕುಮಾರ್‌ಗೆ ದೆಹಲಿ ಪೊಲೀಸರು ಕ್ಲೀನ್‌ಚಿಟ್ ನೀಡಿದ್ದಾರೆ.
ಕನ್ಹಯ್ಯಾ ವಿರುದ್ಧ ಸಾಕ್ಷ್ಯಗಳು ದೊರೆಯದ ಹಿನ್ನೆಲೆಯಲ್ಲಿ ದೇಶದ್ರೋಹ ಪ್ರಕರಣ ಕೈಬಿಡುವ ಸಾಧ್ಯತೆಯಿದೆ. ಆದರೆ, ಜೆಎನ್‌ಯು ಇತರೆ ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ವಿರುದ್ಧ ದೋಷಾರೋಪ ಹೊರಿಸಿರುವ ಸಾಧ್ಯತೆ ದಟ್ಟವಾಗಿದೆ. ಆರೋಪಪಟ್ಟಿಯಲ್ಲಿ ಕರಡು ಪ್ರತಿಯನ್ನು ಉಲ್ಲೇಖೀಸಿ ಮಾಧ್ಯಮಗಳು ಈ ಕುರಿತು ವರದಿ ಮಾಡಿವೆ. 40 ವಿಡಿಯೋಗಳ ಪರೀಕ್ಷೆಗಳಿಂದ ದೇಶವಿರೋಧಿ ಘೋಷಣೆ ಕೂಗಿರುವುದು ಸಾಬೀತಾಗಿದ್ದು, ಉಗ್ರ ಅಫjಲ್ ಗುರು ಬೆಂಬಲಿಸಿದ ಪೋಸ್ಟರನ್ನು ಉಮರ್ ಸಿದ್ಧಪಡಿಸಿರುವುದೂ ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ. ಇನ್ನೊಂದೆಡೆ, ದೆಹಲಿ ವಿವಿಯ ರಾಮ್‌ಜಾಸ್ ಕಾಲೇಜಿನಲ್ಲಿ ಫೆ.22ರಂದು “ಕಾಶ್ಮೀರಕ್ಕೆ ಸ್ವಾತಂತ್ರ್ಯ ಬೇಕು, ಬಸ್ತಾರ್‌ಗೆ ಸ್ವಾತಂತ್ರ್ಯ ಬೇಕು’ ಎಂದು ಘೋಷಣೆ ಕೂಗಿರುವ ವಿಡಿಯೋವೊಂದು ಇದೀಗ ಬಹಿರಂಗವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…