ಡೈರಿ ಕಪ್ಪ ಆಯ್ತು, ಈಗ ಸಿಎಂ, ಗುಂಡುರಾವ್ ವಿರುದ್ಧ ಗೋಮಾಳ ಬಾಂಬ್!
Team Udayavani, Mar 2, 2017, 6:34 PM IST
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆದರಿ ಸ್ಟೀಲ್ ಫ್ಲೈ ಓವರ್ ಯೋಜನೆಯನ್ನು ಕೈಬಿಟ್ಟಿದ್ದಾರೆ. ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ 65 ಕೋಟಿ ಕಪ್ಪ ಸಿದ್ದರಾಮಯ್ಯನವರಿಗೆ ನೇರವಾಗಿ ತಲುಪಿದೆ. ಈ ಹೇಳಿಕೆಗೆ ನಾನು ಈಗಲೂ ಬದ್ಧ. ಆದರೆ ಈ ಹೋರಾಟ ಇಲ್ಲಿಗೆ ನಿಲ್ಲಲ್ಲ, ಡೈರಿ ಪ್ರಕರಣ ಸಿಬಿಐ ತನಿಖೆಗೆ ವಹಿಸುವವರೆಗೂ ಮುಂದುವರಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ತೀವ್ರ ವಿವಾದಕ್ಕೆ ಒಳಗಾಗಿದ್ದ ಬಹುಕೋಟಿ ವೆಚ್ಚದ ಸ್ಟೀಲ್ ಫ್ಲೈ ಓವರ್ ಯೋಜನೆಯನ್ನು ಕೈಬಿಟ್ಟಿರುವುದಾಗಿ ರಾಜ್ಯ ಸರ್ಕಾರ ಗುರುವಾರ ಘೋಷಿಸಿತ್ತು.
ಗೋ ಮಾಳ ಬಾಂಬ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಗೋಮಾಳ ಒತ್ತುವರಿಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ದಾಖಲೆಗಳ ಜೊತೆಗೆ ನಿಮ್ಮ ಮುಂದೆ ಬರುತ್ತೇನೆ ಎಂದು ಬಿಎಸ್ ವೈ ಸುದ್ದಿಗಾರರ ಜೊತೆ ಮಾತನಾಡುತ್ತ ಹೇಳಿದರು.
ಸಿಎಂ ವಿರುದ್ಧದ ದಾಖಲೆ ಶೀಘ್ರವೇ ಬಿಡುಗಡೆ:
ಸಿಎಂ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಕುಟುಂಬ ಸರ್ಕಾರಿ ಗೋಮಾಳ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಶೀಘ್ರವೇ ದಾಖಲೆ ಬಿಡುಗಡೆ ಮಾಡುವುದಾಗಿ ಬಿಎಸ್ ಯಡಿಯೂರಪ್ಪ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್ಡಿಎಗೆ ಯಾವುದು? ಕಾಂಗ್ರೆಸ್ಗೆ ಎಷ್ಟು?
Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು
ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
MUST WATCH
ಹೊಸ ಸೇರ್ಪಡೆ
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್
Hockey: ವನಿತಾ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್ಡಿಎಗೆ ಯಾವುದು? ಕಾಂಗ್ರೆಸ್ಗೆ ಎಷ್ಟು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.