ಹೈ-ಕ ಅಭಿವೃದ್ಧಿಗೆ 1500 ಕೋಟಿ ನೀಡಲು ಮನವಿ
Team Udayavani, Mar 3, 2017, 10:35 AM IST
ಬೆಂಗಳೂರು: ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 2017-18 ನೇ ಸಾಲಿನ ಬಜೆಟ್ ನಲ್ಲಿ 1500 ಕೋಟಿ ರೂಪಾಯಿ ಅನುದಾನ ನೀಡುವಂತೆ ಹೈದ್ರಾಬಾದ್ ಕರ್ನಾಟಕ ಭಾಗದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದಾರೆ.
ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, 371 ಜೆ ಅನ್ವಯ ಹೈದ್ರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ರಾಜ್ಯ ಸರ್ಕಾರ ಈಗ ಪ್ರತಿ ವರ್ಷ 1 ಸಾವಿರ ರೂಪಾಯಿ ನೀಡುತ್ತಿದೆ. ಅದನ್ನು 1500 ರೂ.ಗೆ ಹೆಚ್ಚಿಸಬೇಕು ಎಂದು ಮನವಿ ಸಲ್ಲಿಸಿದರು.
ನಂತರ ಸುದ್ದಿಗಾರರ ಜತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಹೈದರಾಬಾದ್ ಕರ್ನಾಟಕ ಭಾಗದ ಕೆರೆ ಹೂಳೆತ್ತುವ ಹಾಗೂ ಕೆರೆ ತುಂಬುವ ಕಾರ್ಯ ಕೈಗೊಳ್ಳಬೇಕು. ರಾಯಚೂರಿನಲ್ಲಿ ವಿಶ್ವ ವಿದ್ಯಾಲಯ ತೆರೆಯುವುದು ಹಾಗೂ ಆ ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ
ಕಂಡುಕೊಳ್ಳಬೇಕು. ಹೀಗಾಗಿ, ಆ ಭಾಗಕ್ಕೆ ಹೆಚ್ಚು ಅನುದಾನ ಮೀಸಲಿಡಲು ಮನವಿ ಮಾಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ತೀವ್ರ ಬರ ಇರುವುದರಿಂದ ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ಕನಿಷ್ಠ 2 ಸಾವಿರ ಕೋಟಿ ರೂಪಾಯಿ ನೀಡಬೇಕು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟಿÉ ಅವರಿಗೆ ಮನವಿ ಮಾಡಿದ್ದೇವೆ. ಅಧಿವೇಶನದಲ್ಲಿಯೂ ಪ್ರಸ್ತಾಪಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
Debt Reduction: ನಬಾರ್ಡ್ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
MUST WATCH
ಹೊಸ ಸೇರ್ಪಡೆ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
UV Fusion: ಹೃದಯದಲ್ಲಿ ಬಾಲ್ಯದ ಮಿಡಿತ
Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.