ಪರಮೇಶ್ವರ್ ಪರ ತುಮಕೂರು ಕಾಂಗ್ರೆಸ್ ನಾಯಕರ ಬ್ಯಾಟಿಂಗ್
Team Udayavani, Mar 3, 2017, 11:13 AM IST
ಬೆಂಗಳೂರು:ಮುಂದಿನ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಡಾ. ಜಿ. ಪರಮೇಶ್ವರ್ ಅವರನ್ನೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಸುವಂತೆ ತುಮಕೂರು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ಗುರುವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ತುಮಕೂರು ಸಂಸದ ಮುದ್ದುಹನುಮೆಗೌಡ, ಮಧುಗಿರಿ ಶಾಸಕ ಕೆ.ಎನ್ ರಾಜಣ್ಣ , ತುಮಕೂರು ಶಾಸಕ ರಫಿಕ್ ಅಹಮದ್ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ, ಪರಮೇಶ್ವರ್ ಕಳೆದ ಆರು ವರ್ಷದಿಂದ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ.
2018 ರ ವಿಧಾನಸಭಾ ಚುನಾವಣೆಯನ್ನು ಪರಮೇಶ್ವರ್ ನೇತೃತ್ವದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೊತೆಗೂಡಿ ಚುನಾವಣೆ ಎದುರಿಸಬೇಕು ಎಂದು ಒತ್ತಾಯಿಸಿದರು.ಸಂಸದ ಮುದ್ದಹನುಮೆಗೌಡ ಮಾತನಾಡಿ, ಪರಮೇಶ್ವರ್ ಸುಶಿಕ್ಷಿತರಾಗಿದ್ದು, ಸರ್ಕಾರದ ಸಾಧನೆಗಳನ್ನು ಬಳಸಿಕೊಂಡು ಪಕ್ಷವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಿದ್ದಾರೆ.
ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಜೋಡಿ ಉತ್ತಮ ಕೆಲಸ ಮಾಡುತ್ತಿದ್ದು, ಮುಂದಿನ ಚುನಾವಣೆಯೂ ಇವರ ನಾಯಕತ್ವದಲ್ಲಿಯೇ ನಡೆಯಲಿ. ಹೈಕಮಾಂಡ್‌ಗೂ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಮುಂದಿನ ಬಾರಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಶಾಸಕರು ನಿರ್ಧರಿಸುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
MUST WATCH
ಹೊಸ ಸೇರ್ಪಡೆ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Lokayukta police: ಮುಡಾ ಮಾಜಿ ಆಯುಕ್ತ ನಟೇಶ್ ವಿಚಾರಣೆ
ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್, ಫಿನ್ ಲ್ಯಾಂಡ್ ಎಚ್ಚರಿಕೆ!
BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ
BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.