ಬೇಸಿಗೆ ಆರಂಭದಲ್ಲೇ ನೀರಿಗೆ ಬರ!


Team Udayavani, Mar 3, 2017, 1:31 PM IST

dvg5.jpg

ಹರಪನಹಳ್ಳಿ: ಬೇಸಿಗೆ ಕಾಲಿಡುವ ಆರಂಭದಲ್ಲಿಯೇ ಕುಡಿಯುವ ನೀರಿಗೆ ತತ್ವಾರ ಆರಂಭಗೊಂಡಿದೆ. ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿಗೆ ಜನಸಾಮಾನ್ಯರು ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸೈಕಲ್‌ಗ‌ಳಲ್ಲಿ ಬಿಂದಿಗಳನ್ನು ಕಟ್ಟಿಕೊಂಡು ಮೈಲುಗಟ್ಟಲೇ ತಿರುಗಿ ಬೋರ್‌ವೆಲ್‌ಗ‌ಳಿಂದ ನೀರು ತರುವುದೇ ಜನರ ನಿತ್ಯದ ಕಾಯಕವಾಗಿದೆ.  

ತಾಲೂಕಿನ 30ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಬರ ಬಂದಿರುವುದು ನಾಗರಿಕರಲ್ಲಿ ಆತಂಕ ಸೃಷ್ಟಿಸಿದೆ. ನಲ್ಲಿಗಳಲ್ಲಿ ನೀರು ಬರುತ್ತಿಲ್ಲ. ಇನ್ನು ಕೊರೆದಿರುವ ಕೊಳವೆ ಬಾವಿಗಳಲ್ಲೂ ನೀರಿಲ್ಲ. ದಿನನಿತ್ಯದ ಕೆಲಸಗಳಿಗಷ್ಟೇ ಅಲ್ಲದೇ ಕನಿಷ್ಠ ಪಕ್ಷ ಕುಡಿಯುವುದಕ್ಕೂ ನೀರಿಲ್ಲದ ದುಸ್ಥಿತಿ ಬಂದೊದಗಿದೆ. ಕುಡಿಯುವ ನೀರಿಗೆ ಅಂತರ ಜಲವನ್ನೇ ನಂಬಿರುವ ಗ್ರಾಮೀಣ ಪ್ರದೇಶದಲ್ಲಿ ಅಂತರ ಜಲ ಬತ್ತಿರುವುದು ಸಮಸ್ಯೆಯ ತೀವ್ರತೆಯನ್ನು ಹೆಚ್ಚಿಸಿದೆ.

ಈ ಬಾರಿಯೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಜಲಕ್ಷಾಮ ಎದುರಾಗಿದೆ. ತಾಲೂಕಿನ ಅರಸನಾಳು, ಅರಸೀಕೆರೆ ಬಸಾಪುರ, ನಜೀರ್‌ ನಗರ, ಗುಂಡಗತ್ತಿ, ನಂದಿಬೇವೂರು ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರವಿದೆ. 

ತಾಲೂಕಿನ ಮೀನಹಳ್ಳಿ, ವ್ಯಾಸನತಾಂಡಾ, ಉಚ್ಚಂಗಿದುರ್ಗ ಕೋಟೆ ಕ್ಯಾಂಪ್‌, ಅರಸನಾಳು, ಚಿರಸ್ತಹಳ್ಳಿ, ಕಂಚೀಕೆರೆ, ನಜೀರನಗರ, ಯರಬಳ್ಳಿ, ಗುಂಡಗತ್ತಿ, ಕಂಭ್ರಹಳ್ಳಿ, ಬಳಿಗನೂರು, ನಂದಿಬೇವೂರು, ಕೆಂಗನಹೊಸೂರು, ಭೈರಾಪುರ, ಗುರುಶಾಂತನಹಳ್ಳಿ ಗ್ರಾಮಗಳಲ್ಲಿ ಸರ್ಕಾರ ಖಾಸಗಿ ಬೋರ್‌ವೆಲ್‌ ಮಾಲೀಕರಿಂದ ಹಣಕ್ಕೆ ನೀರು ಪಡೆದು ಜನರಿಗೆ ನೀಡುತ್ತಿದ್ದಾರೆ.

ಅರಸೀಕೆರೆ ಬಸಾಪುರ ಮತ್ತು ಆಲದಹಳ್ಳಿ ಗ್ರಾಮದಲ್ಲಿ ಟ್ಯಾಂಕರ್‌ ಮೂಲಕ ಜನರಿಗೆ ನೀರು ಒದಗಿಸಲಾಗುತ್ತಿದೆ. ಒಂದು ಟ್ಯಾಂಕರ್‌ ನೀರಿಗೆ 800 ರೂ. ಹಾಗೂ ಖಾಸಗಿ ಬೋರ್‌ವೆಲ್‌ಗ‌ಳಿಗೆ ಮಾಸಿಕ 10ರಿಂದ 18 ಸಾವಿರ ರೂ.ವರೆಗೆ ನಿಗಧಿದಿ ಮಾಡಲಾಗಿದೆ. ಟ್ಯಾಂಕರ್‌ ಗಳಲ್ಲಿ ನೀರು ಪೂರೈಸಲಾಗುತ್ತಿದೆಯಾದರೂ ಅದಕ್ಕೂ ಯಾವುದಕ್ಕೂ ಸಾಲದಾಗಿದೆ. ಟ್ಯಾಂಕರ್‌ಗಳ ಮುಂದೆ ಬಿಂದಿಗೆಗಳ ಸಾಲು ಸಾಲು ಚಿತ್ರಣ ನೀರಿನ ಬರವನ್ನು ಎತ್ತಿ ತೋರಿಸುವಂತಿದೆ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದಿಂದ ಕಳೆದ ಏಪ್ರೀಲ್‌ 1ರಿಂದ ಇಲ್ಲಿಯವರೆಗೆ 211 ಬೋರ್‌ವೆಲ್‌ ಗಳನ್ನು ಕೊರೆಯಲಾಗಿದೆ. ಇದರಲ್ಲಿ 183 ಬೋರ್‌ವೆಲ್‌ಗ‌ಳಲ್ಲಿ ಅಲ್ಪ ಪ್ರಮಾಣದಲ್ಲಿ ನೀರು ಸಿಕ್ಕಿದೆ. ಆದರೆ ಒಂದೆರಡು ವಾರಗಳ ನಂತರ ನೀರಿನ ಪ್ರಮಾಣ ಗಣನೀಯವಾಗಿ ಇಳಿಮುಖ ಕಂಡಿದೆ.

ಸೈಟ್‌ಲೆಟ್‌ ಮೂಲಕ ನೀರಿನ ಮೂಲಕ ಗುರುತಿಸಿ ಬಳಿಗನೂರು-3, ಉಚ್ಚಂಗಿದುರ್ಗ-4, ಅರಸನಾಳು-2, ಚಿಗಟೇರಿ-2, ಆಲದಹಳ್ಳಿ-2, ಪುಣ್ಯನಗರ-2ರಂತೆ ನೀರಿನ ಕೊರತೆಯಿರುವ ಗ್ರಾಮಗಳಲ್ಲಿ ಎಡರೂ¾ರು ಬೋರವೆಲ್‌ ಕೊರೆಸಲಾಗಿದೆ. ಒಂದರೆಡರಲ್ಲಿ ಮಾತ್ರ ನೀರು ಸಿಕ್ಕಿದೆ. ಬೋರ್‌ವೆಲ್‌ ಕೊರೆದರೂ ನೀರು ಸಿಗದಿರುವುದು ಅಧಿಧಿಕಾರಿಗಳಿಗೆ ತಲೆ ನೋವು ತರಿಸಿದೆ. 

ಕೂಲಿನಾಲಿ ಮಾಡಿ ಆಯಾ ದಿನದ ಬದುಕು ಸವೆಸುವ ಜನರ ಪಾಡಂತೂ ಹೇಳತೀರದಂತಾಗಿದೆ. ವಿಧಿಧಿಯಿಲ್ಲದೇ ಜನರು ನೀರಿಗಾಗಿ ಹುಡುಕಾಟ ನಡೆಸಿ ಹೈರಾಣಾಗಿದ್ದಾರೆ. ಬೇಸಿಗೆ ಆರಂಭದಲ್ಲಿಯೇ ಈ ಗತಿಯಾದರೆ, ಇನ್ನೂ ಮುಂದಿನ ದಿನಗಳಲ್ಲಿ ಇನ್ನೇನು ಗಂಡಾಂತರ ಕಾದಿದೆಯೋ ಎನ್ನುವ ಆತಂಕ ಜನರನ್ನು ಕಾಡುತ್ತಿದೆ. 

* ಎಸ್‌.ಎನ್‌.ಕುಮಾರ್‌ ಪುಣಬಗಟ್ಟಿ  

ಟಾಪ್ ನ್ಯೂಸ್

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.