ದಂಡಕ್ಕೆ ಹೆದರಿ ಹೆಲ್ಮೆಟ್‌ ಖರೀದಿಸಿದ ಜನ


Team Udayavani, Mar 3, 2017, 3:40 PM IST

gul1.jpg

ಕಲಬುರಗಿ: ನಗರದಲ್ಲಿ ಸುಪ್ರಿಂಕೋರ್ಟ್‌ ನಿರ್ದೇಶನದಂತೆ ಮಾರ್ಚ್‌ 1ರಿಂದ ದ್ವಿಚಕ್ರವಾಹನ ಸವಾರರಿಗೆ ಹೆಲ್ಮೆಟ್‌ ಕಡ್ಡಾಯ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲಿಯೇ ಕಳೆದ ಎರಡು ದಿನಗಳಿಂದ ಭಾರಿ ಪ್ರಮಾಣದಲ್ಲಿ ವಾಹನ ಸವಾರರಿಗೆ ದಂಡ ವಿಧಿಸುತ್ತಿರುವುದರಿಂದ ಅನಿವಾರ್ಯವಾಗಿ ಸವಾರರು ಹೆಲ್ಮೆಟ್‌ ಖರೀದಿಗೆ ಮುಗಿಬಿದ್ದಿದ್ದಾರೆ. 

ರಸ್ತೆ ಬದಿಯಲ್ಲಿ ಹೆಲ್ಮೆಟ್‌ ಖರೀದಿಯೂ ಜೋರಾಗಿದೆ. ಹೆಲ್ಮೆಟ್‌ ಕಡ್ಡಾಯದ ಹಿನ್ನೆಲೆಯಲ್ಲಿ ಅಲ್ಲಲ್ಲಿ ರಸ್ತೆಗಳಲ್ಲಿ ಮಾರಾಟಗಾರರು ಪ್ರತ್ಯಕ್ಷವಾಗಿದ್ದಾರೆ. ಮೊದಲ ದಿ. ಮಾ.1ರಂದು ಭಾರಿ ಪ್ರಮಾಣದಲ್ಲಿ ಸಂಚಾರಿ ಪೊಲೀಸರು ದಂಡ ವಸೂಲಿ ಮಾಡಿದ್ದಾರೆ. ಮಾ.2ರಂದು ದಂಡ ವಿಧಿಸುವ ಪ್ರಕ್ರಿಯೆಯಲ್ಲಿ ತುಸು ಹಿನ್ನಡೆ ಉಂಟಾಗಿದ್ದು, ಹಲವು ಸಂಘಟನೆಗಳು ಹೆಲ್ಮೆಟ್‌ ಕಡ್ಡಾಯ ವಾಪಸ್ಸು ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಆರಂಭದ ದಿನದಂದು ಸರ್ದಾರ್‌ ವಲ್ಲಭಬಾಯಿ ಪಟೇಲ್‌ ವೃತ್ತ, ಜಗತ್‌ ವೃತ್ತ, ಸೂಪರ್‌ ಮಾರ್ಕೆಟ್‌ ಚೌಕ್‌ ವೃತ್ತ ಮುಂತಾದೆಡೆ ನೂರಾರು ದ್ವಿಚಕ್ರವಾಹನಗಳನ್ನು ತಡೆದು, ಸವಾರರಿಗೆ ದಂಡ ವಿಧಿಸಿದ್ದರು. ಈ ಎಲ್ಲ ವೃತ್ತಗಳಲ್ಲಿ ಎರಡನೇ ದಿನದಂದು ದಂಡ ವಿಧಿಧಿಸುವ ಕ್ರಮಗಳು ಕಂಡು ಬರಲಿಲ್ಲ. ಬಹುತೇಕ ಶೇ. 70ರಷ್ಟು ಜನ ದ್ವಿಚಕ್ರವಾಹನ ಸವಾರರು ಹೆಲ್ಮೆಟ್‌ ಇಲ್ಲದೇ ಸವಾರಿ ಮಾಡಿದರು.

ಸಂಚಾರಿ ಠಾಣೆಯ ಪೊಲೀಸರು ಕಂಡು ಕಾಣದಂತೆ ಸುಮ್ಮನಿದ್ದರು. ಇದರಿಂದಾಗಿ ಹೆಲ್ಮೆಟ್‌ ಹಾಕಿಕೊಂಡು ಸವಾರಿ ಮಾಡುವವರೂ ಮತ್ತೆ ಸವಾರಿ ಮಾಡುವಾಗ ತಮ್ಮ ಹೆಲ್ಮೆಟ್‌ ಬಿಟ್ಟು ಸವಾರಿ ಮಾಡಿದ್ದೂ ಕಂಡುಬಂತು. ಆರಂಭದ ದಿನದಂದು ದಂಡ ಹಾಕಿಸಿಕೊಂಡ ಅಮಾಯಕರು ಮತ್ತೆ ದಂಡನೆಗೆ ಒಳಗಾಗದಿರಲು ಹೆಲ್ಮೆಟ್‌ ಖರೀದಿಯಲ್ಲಿ ತೊಡಗಿದ್ದರು.

ನಗರದ ಮುಖ್ಯ ರಸ್ತೆಗಳ ಬದಿಗಳಲ್ಲಿನ ಹೆಲ್ಮೆಟ್‌ಗಳನ್ನು ಖರೀದಿಸಲು ಸವಾರರು ಮುಂದಾದ ದೃಶ್ಯಗಳು ಕಂಡುಬಂದವು. ಈ ಎಲ್ಲದರ ಮಧ್ಯೆ, ಬೇಸಿಗೆಯ ಬಿಸಿಲಿನ ಆರಂಭವು ಆಗಿದ್ದು, 39 ಡಿಗ್ರಿ ಸೆಲ್ಸಿಯಸ್‌ ಬಿಸಿಲಿನ ತಾಪದಿಂದ ಸವಾರರು ಬಸವಳಿಯುತ್ತಿದ್ದಾರೆ. ಹೀಗಾಗಿ ಹೆಲ್ಮೆಟ್‌ ಕಡ್ಡಾಯಕ್ಕೆ ವಿನಾಯಿತಿ ನೀಡಬೇಕೆಂಬ ಒತ್ತಾಯಗಳು ಎಲ್ಲೆಡೆ ಕೇಳಿಬಂದಿದ್ದು, ಹೆಲ್ಮೆಟ್‌ ಕಡ್ಡಾಯದ ವಿರುದ್ಧ ಹೋರಾಟಗಳೂ ಆರಂಭಗೊಂಡಿವೆ.

ಇದರ ಮಧ್ಯೆ ಜಿಲ್ಲಾಡಳಿತ ಈ ಕ್ರಮವನ್ನು ಕೆಲವು ಸಂಘಟನೆಗಳ ಮುಖಂಡರು, ಇದೊಂದು ಸರಕಾರಕ್ಕೆ ಸುಂಕ ಸಂಗ್ರಹ ಮಾಡುವ ಕ್ರಮವಾಗಿದೆ. ಈ ಹಿಂದೆ ಎರಡು ಬಾರಿ ಇಂತಹ ಪ್ರಹಸನ ನಡೆಯಿತು. ಆಗಲೂ ಹೆಲ್ಮೆಟ್‌ ಖರೀದಿ ಜೋರಾಯಿತು. ಬಳಿಕ ಎಂದಿನಂತೆ ಬಿಸಿಲೂರಿನಲ್ಲಿ ಹೆಲ್ಮೆಟ್‌ ಇಲ್ಲದೆಯೇ ವಾಹನ ನಡೆಸುವ ಕ್ರಮ ಜಾರಿಯಲ್ಲಿತ್ತು. ಈಗ ಪುನಃ ಅಂತಹದೇ ಮತ್ತೂಂದು ಪ್ರಹಸನ ನಡೆಯಲಿದೆ. ಸರಕಾರಕ್ಕೆ ಸುಂಕ ಸಂಗ್ರಹಿಸುವ ಕ್ರಮ ನಡೆದಿದೆ ಎಂದು ಕಟುಕಿದ್ದಾರೆ.  

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.