ಕೆಲಸದಿಂದ ವಜಾ: ಅಂಗನವಾಡಿ ಕಾರ್ಯಕರ್ತೆಗೆ ಹೃದಯಾಘಾತ
Team Udayavani, Mar 3, 2017, 3:47 PM IST
ಕಲಬುರಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘಟನೆಗಳೊಂದಿಗೆ ಧರಣಿ ಸತ್ಯಾಗ್ರಹ ನಡೆಸಿದ್ದ 17 ಮಂದಿ ಅಂಗನವಾಡಿ ನೌಕರರನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ನ್ಯಾಯಾಲಯ ಮೆಟ್ಟಿಲೇರಿ ತಮ್ಮ ಪರ ತೀರ್ಪು ಬಂದಿದ್ದರಿಂದ ಮತ್ತೆ ಸೇವೆಗೆ ತೆಗೆದುಕೊಳ್ಳುವಂತೆ ಅಧಿಕಾರಿಗಳೊಂದಿಗೆ ಮನವಿ ಸಲ್ಲಿಸಲು ಹೋದ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು ಅಂಗನವಾಡಿ ಕಾರ್ಯಕರ್ತೆ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಮಹಾನಂದಾ ನಿರಗುಡಿ ಎನ್ನುವ ಅಂಗನವಾಡಿ ಕಾರ್ಯಕರ್ತೆಯೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದು, ವಜಾಗೊಳಿಸಿದ ಮಾನಸಿಕ ಕಿರುಕುಳ ಹಾಗೂ ಮತ್ತೆ ಸೇವೆಗೆ ತೆಗೆದುಕೊಳ್ಳಲು ಹಿಂದೇಟು ಹಿನ್ನೆಲೆಯಲ್ಲಿ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.
ನೋಟಿಸ್ ಕಳುಹಿಸಿದ್ದರು: ಮಹಾನಂದ ನಿರಗುಡಿ ಕಾವೇರಿ ಕಾಲೋನಿಯಲ್ಲಿ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ 2016 ಸೆಪ್ಟೆಂಬರ್ ತಿಂಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದರುಗಡೆ ನೌಕರರ ಜತೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕುಳಿತಿದ್ದರು.
ವಾರ ಕಾಲ ಧರಣಿ ನಡೆಸಿದ್ದರೂ ಯಾವೊಬ್ಬ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿರಲಿಲ್ಲ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎನ್ನುವಂತೆ ಕಾನೂನು ಬಾಹಿರವಾಗಿ ಧರಣಿ ಸತ್ಯಾಗ್ರಹ ಕುಳಿತಿದ್ದಿರಿ ನಿಮ್ಮನ್ನು ಅಮಾನತು ಮಾಡ್ತಿವಿ ಎಂಬುದಾಗಿ ಉಲ್ಲೇಖೀಸಿ ನೋಟಿಸ್ ಕಳುಹಿಸಿದ್ದರು.
ವಜಾ ಪ್ರಶ್ನಿಸಿ ಕಾನೂನು ಹೋರಾಟ: ಆದರೆ ಅಧಿಕಾರಿಗಳ ಎಚ್ಚರಿಕೆಗೆ ಕಿವಿಗೊಡದೆ ತಮ್ಮ ಹೋರಾಟವನ್ನು ಮುಂದುವರಿಸಿದ್ದರು. ಇದರಿಂದ ಸಿಟ್ಟಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಧರಣಿ ಸತ್ಯಾಗ್ರಹ ಕುಳಿತ್ತಿದ್ದ 17 ಜನರನ್ನು ಕೆಲಸದಿಂದ ವಜಾ ಮಾಡಿದ್ದರು.
ಇದಾದ ನಂತರ ಅಂಗನವಾಡಿ ನೌಕರರು ಕಲಬುರಗಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್, ಸಣ್ಣ ವಿಷಯಕ್ಕೆ ಯಾಕೆ ಅವರನ್ನು ಕೆಲಸದಿಂದ ವಜಾ ಮಾಡಿದ್ದಿರಿ. ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಿ ಎಂದು ನಿರ್ದೇಶನ ನೀಡಿತ್ತು. ಕೋರ್ಟ್ ಆದೇಶ ನೀಡಿದ್ದರೂ ಅಧಿಕಾರಿಗಳು ಕೆಲಸಕ್ಕೆ ಸೇರಿಸಿಕೊಳ್ಳದೆ ಮಾನಸಿಕ ಕಿರುಕುಳ ನೀಡುತ್ತಿದ್ದರು.
ಫೆ. 1ರಂದು ಬುಧವಾರ ಅಧಿಕಾರಿಗಳ ಬಳಿ ಹೋದಾಗ ಮಾತಿನ ಚಕಮಕಿ ನಡೆಯಿತು. ನಿರಗುಡಿಗೆ ವಾಂತಿ ಶುರುವಾಗಿ ತೀವ್ರ ಹೃದಯಾಘಾತವಾಯಿತು. ತಕ್ಷಣವೇ ಸ್ಥಳದಲ್ಲಿ ಮಾತ್ರೆ ನೀಡಿ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.