ರಾಜ್ಯದಲ್ಲಿ ಕಾಂಗ್ರೆಸ್‌ ಅಂತ್ಯಕಾಲ ಆರಂಭ


Team Udayavani, Mar 4, 2017, 12:55 PM IST

mys4.jpg

ಹುಣಸೂರು: ತಾಲೂಕಿನಲ್ಲಿ ಶಾಸಕ ಮಂಜುನಾಥರ ಹಾಗೂ ರಾಜ್ಯದಲ್ಲಿ ಸಿದ್ದು ಪರ್ವದ ಅಂತ್ಯ ಕಾಲ ಆರಂಭವಾಗಿದ್ದು, ಹುಣಸೂರು ಎಪಿಎಂಸಿ ಚುನಾವಣೆಯೇ ಮುಂದಿನ ಚುನಾವಣೆಯ ದಿಕ್ಸೂಚಿ ಎಂದು ಶಾಸಕ ಜಿ.ಟಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು. 

ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಇದ್ದರೂ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿ ಎಸ್‌.ಕುಮಾರ್‌ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದೇನಿದ್ದರೂ ಜೆಡಿಎಸ್ಸೇ ಅಧಿಕಾರ ಗದ್ದುಗೆ ಹಿಡಿಯಲಿದ್ದು, ಜನಪರ ಕಾರ್ಯಕ್ರಮಗಳು ಮುಂದುವರಿಯಲಿದೆ ಎಂದರು. 

ಕಳೆದ 9 ವರ್ಷಗಳಿಂದ ಶಾಸಕ ಮಂಜುನಾಥ್‌ ತಾಲೂಕಿನಲ್ಲಿ ದುರಾಡಳಿತ ನಡೆಸಿದ್ದಾರೆ. ಪೊಲೀಸರನ್ನು ಬಳಸಿಕೊಂಡು ಅಮಾಯಕರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಅವರು, ಮುಂದೆ ತಾಲೂಕಿನಲ್ಲಿ ನಿಮ್ಮ ಆಟ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಜಯಕ್ಕೆ ಸತ್ಯ ನಿಶ್ಚಿತ ಎಂಬುದಕ್ಕೆ ಎಪಿಎಂಸಿ ಚುನಾವಣೆಯ ಈ ಫ‌ಲಿತಾಂಶವೇ ಸಾಕ್ಷಿ ಎಂದರು. 

ಲಕ್ಷ ಮತಗಳಿಂದ ಮತ್ತೆ ಗೆಲುವು: ತಾಲೂಕಿನ ಬಹುತೇಕ ಸ್ಥಳಿಯ ಸಂಸ್ಥೆ ಹಾಗೂ ಸಂಘ ಸಂಸ್ಥೆಗಳಲ್ಲಿ ಜೆಡಿಎಸ್‌ ಪಕ್ಷವೇ ಅಧಿಕಾರದಲ್ಲಿದೆ. ನಿಮ್ಮ ಜನವಿರೋಧಿ ನೀತಿ, ನಿರ್ಧಾರಗಳು ನಮ್ಮ  ನಮ್ಮ ಪಕ್ಷಕ್ಕೆ ಬಳುವಳಿಯಾಗಿದೆ. ಅದಕ್ಕೆ ಜನರು ಉತ್ತರವನ್ನೂ ಈಗ ಕೊಡಲು ಪ್ರಾರಂಭಿಸಿದ್ದಾರೆ. ಮುಂದೆ ಪಕ್ಷದ ಅಭ್ಯರ್ಥಿ ಲಕ್ಷ ಮತಗಳ ಅಂತರದಿಂದ ನಿಮ್ಮನ್ನು ಸೋಲಿಸುತ್ತಾರೆಂದು ಬೀಗಿದರು.

ಬಡಜನರ ಹಣದಲ್ಲಿ ವರಿಷ್ಠರಿಗೆ ಕಪ್ಪ: ರಾಜ್ಯದ ಬಡಜನರ ಹಣವನ್ನು ಎರಡೂ ರಾಷ್ಟ್ರೀಯ ಪಕ್ಷಗಳು ದೆಹಲಿ ದೊರೆಗಳಿಗೆ ತಲುಪಿಸುವ ಮೂಲಕ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿವೆ. ಇದೀಗ ಪರಸ್ಪರ ಕೆಸರು ಎರಚಾಡಿಕೊಳ್ಳುತ್ತಿರುವುದನ್ನು ಗಮನಿಸಿದರೆ, ಎರಡೂ ಪಕ್ಷಗಳವರು ಲೂಟಿಯಲ್ಲಿ ತೊಡಗಿರುವುದು ಸ್ಪಷ್ಟವಾಗುತ್ತದೆ ಎಂದು ಕಾಂಗ್ರೆಸ್‌, ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು.

ಅಭ್ಯರ್ಥಿ ಬಗ್ಗೆ ಗೊಂದಲ ಬೇಡ: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಯಾರಾಗುತ್ತಾರೆ ಎಂಬ ಗೊಂದಲ ಬೇಡ. ಹೈಕಮಾಂಡ್‌ ಸೂಚಿಸುವ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸಲಾಗುವುದು ಎಂದರು. ಕಾರ್ಯಕರ್ತರು ಧೃತಿಗೆಡಬಾರದು. ಪಕ್ಷವನ್ನು ಬಲಪಡಿಸುವ ಕೆಲಸದಲ್ಲಿ ನಿರತರಾಗಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. ನಾವೆಲ್ಲ ಸೇರಿ ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿಸುವ ಪಣ ತೊಡೋಣ ಎಂದರು.

ಶಾಸಕ ಎಸ್‌.ಚಿಕ್ಕಮಾದು ಮಾತನಾಡಿ, ಬೇರುಮಟ್ಟದಲ್ಲಿರುವ ಪಕ್ಷವನ್ನು ಯಾರೂ ಅಲ್ಲಾಡಿಸಲಾಗದು. ನಾವೆಲ್ಲರೂ ಒಗ್ಗಟ್ಟಾಗಿ ದುಡಿದು ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರೋಣ ಎಂದರು. ಎಪಿಎಂಸಿ ಅಧ್ಯಕ್ಷ ನಾಗಮಂಗಲ ಕುಮಾರ್‌, ಜೆಡಿಎಸ್‌ ತಾಲೂಕು ಘಟಕದ ಅಧ್ಯಕ್ಷ ಎಚ್‌.ಮಹದೇವ್‌, ಜಿಪಂ ಮಾಜಿ ಸದಸ್ಯ ಫ‌ಜಲುಲ್ಲಾ, ನಗರಸಭೆ ಸದಸ್ಯರು, ಎಪಿಎಂಸಿ ಸದಸ್ಯರು ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.