ಮಂಗಳೂರಿನಲ್ಲಿ ಆರ್ ಎಸ್ಎಸ್ ಆಡಳಿತ ಇದೆಯೇ? ದೇವೇಗೌಡ ಆಕ್ರೋಶ
Team Udayavani, Mar 4, 2017, 2:53 PM IST
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವೈಫಲ್ಯಗೊಂಡಿದೆ. ಮಂಗಳೂರಿನಲ್ಲಿ ರಾಜ್ಯ ಸರ್ಕಾರದ ಆಡಳಿತವಿದೆಯೋ, ಆರ್ ಎಸ್ಎಸ್ ಆಡಳಿತವಿದೆಯೋ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳೂರಿಗೆ ಭೇಟಿ ನೀಡಲು ಸಂಘ ಪರಿವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಆಡಳಿತ ಚುಕ್ಕಾಣಿ ಸಿದ್ದರಾಮಯ್ಯ ಕೈಯಿಂದ ತಪ್ಪಿ ಹೋಗಿದೆ ಎಂದರು.
ಬೇರೆ ರಾಜ್ಯದ ಮುಖ್ಯಮಂತ್ರಿಗಳು ರಾಜ್ಯಕ್ಕೆ ಆಗಮಿಸುತ್ತಾರೆ ಎಂದಾಗ ಈ ರೀತಿಯ ವರ್ತನೆ ಸರಿಯಲ್ಲ ಎಂದು ಸಂಘಪರಿವಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳೇ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ ಎಂದ ಮೇಲೆ ಆಡಳಿತ ವೈಫಲ್ಯವಲ್ಲದೇ ಇನ್ನೇನು ಎಂದು ಗೌಡರು ರಾಜ್ಯ ಸರ್ಕಾರದ ವಿರುದ್ಧ ಕಟು ಟೀಕಾಪ್ರಹಾರ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
MUST WATCH
ಹೊಸ ಸೇರ್ಪಡೆ
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.