ಕಾಳಗಿ ಬಂದ್‌ಗೆ ಬಜಾರ್ ಯೂನಿಯನ್ ಬೆಂಬಲ
Team Udayavani, Mar 4, 2017, 3:43 PM IST
ಕಾಳಗಿ: ಬರುವ ಬಜೆಟ್ ಅಧಿವೇಶನದಲ್ಲಿ ಘೋಷಿತ ತಾಲೂಕು ಕೇಂದ್ರವಾಗಿರುವ ಕಾಳಗಿಯನ್ನು ಅಧಿಕೃತ ತಾಲೂಕೆಂದು ಘೋಷಿಸುವಂತೆ ಮಾ. 7ರಂದು ಜೈ ಕನ್ನಡಿಗರ ರಕ್ಷಣಾ ವೇದಿಕೆ ಕರೆ ನೀಡಿರುವ ಬಂದ್ ಗೆ ಬೆಂಬಲ ನೀಡುವುದಾಗಿ ಶ್ರೀ ನೀಲಕಂಠ ಕಾಳೇಶ್ವರ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಚಂದ್ರಕಾಂತ ವನಮಾಲಿ ತಿಳಿಸಿದ್ದಾರೆ.
ಇಲ್ಲಿನ ನೀಲಕಂಠ ಕಾಳೇಶ್ವರ ವ್ಯಾಪಾರಸ್ಥರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಾಳಗಿ ಪಟ್ಟಣವು ಸುತ್ತಮುತ್ತಲಿನ ಸುಮಾರು 50ಕ್ಕೂ ಹೆಚ್ಚಿನ ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿದೆ. ದಿನನಿತ್ಯ ವ್ಯಾಪಾರ ವಹಿವಾಟು, ಕಚೇರಿ ಕೆಲಸಗಳಿಗೆ ಸಾವಿರಾರು ಜನರು ಪಟ್ಟಣಕ್ಕೆ ಆಗಮಿಸುತ್ತಾರೆ.
ಹೀಗಾಗಿ ರಾಜ್ಯ ಸರಕಾರ ಕಾಳಗಿಯನ್ನು ಅಧಿಕೃತವಾಗಿ ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕು. ಈ ಹಿನ್ನೆಲೆಯಲ್ಲಿ ನಡೆಯಲಿರುವ ಬಂದ್‌ಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದರು.
ವ್ಯಾಪಾರಸ್ಥರ ಸಂಘದ ಕಾರ್ಯದರ್ಶಿ ನಾಗಣ್ಣ ಟೆಂಗಳಿ, ಶಿವಶರಣಪ್ಪ ಕಮಲಾಪುರ, ವಿಶ್ವನಾಥ ವನಮಾಲಿ, ಸತ್ಯನಾರಾಯಣ ವನಮಾಲಿ, ವೀರೇಶ ಕಣ್ಣಿ, ರಾಜಶೇಖರಕುಡ್ಡಳ್ಳಿ, ಸಿದ್ಧರಾಜ ವನಮಾಲಿ, ಸಂತೋಷ ವನಮಾಲಿ, ಪರಮೇಶ್ವರ ವನಮಾಲಿ, ರಾಜು ಮಳಗಿ, ಶಂಕ್ರಯ್ಯಸ್ವಾಮಿ ದೇವಾಂಗಮಠ, ಕಾಂತಪ್ಪ ಅಲ್ಲಾಪುರ, ಮಹಾದೇವ ಅಷ್ಟಗಿ, ಮಾರುತಿ ಪತಂಗೆ, ಧರ್ಮೇಂದ್ರ ಪತಂಗೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.