ಬರ: ಅರಸೀಕೆರೆ ತಾಲೂಕಿಗೆ ಹೆಚ್ಚುವರಿ ಅನುದಾನ ನೀಡಿ


Team Udayavani, Mar 4, 2017, 4:09 PM IST

4_42.jpg

ಹಾಸನ: ಅರಸೀಕೆರೆ ತಾಲೂಕಿನಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಜಾನುವಾರುಗಳ ಮೇವು ಪೂರೈಕೆಗೆ  ಮೇವು ಬ್ಯಾಂಕ್‌ ತೆರೆಯಬೇಕು ಹಾಗೂ ಅರಸೀಕೆರೆ ತಾಲೂಕಿನ ಬರಪರಿಹಾರ ಕಾರ್ಯಗಳಿಗೆ  ಹೆಚ್ಚು ಅನುದಾನ ನೀಡಬೇಕು ಎಂದು ಆರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಆಗ್ರಹಪಡಿಸಿದರು.

ಜಿಲ್ಲಾ ಪಂಚಾಯ್ತಿ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ತ್ತೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರಸೀಕೆರೆ ತಾಲೂಕಿನ ಬರಪಸ್ಥಿತಿಯ ವಿವರ ನೀಡಿದ  ಶಿವಲಿಂಗೇಗೌಡ ಅವರು, ಗೋಶಾಲೆಗಳಲ್ಲಿ  ಜಾನುವಾರುಗಳಿಗೆ ಕಾಲು ಬಾಯಿ  ಜ್ವರ ಕಾಣಿಸಿಕೊಂಡಿದ್ದರಿಂದ  ತಾಲೂಕಿನಲ್ಲಿ ತೆರೆದಿದ್ದ ಗೋಶಾಲೆಗಳನ್ನು ಮುಚ್ಚಲಾಗಿದೆ.

ಮೇವು ಬ್ಯಾಂಕ್‌ಗಳನ್ನು ತೆರೆದು ಜಾನುವಾರುಗಳಿಗೆ  ಮೇವು ಪೂರೈಸುವ ಭರವಸೆ ನೀಡಲಾಗಿತ್ತು. ಆದರೆ ಈವರೆಗೆ ಮೇವು ಬ್ಯಾಂಕ್‌ ತೆರೆದಿಲ್ಲ. ಅರಸೀಕೆರೆ ತಾಲೂಕಿನಲ್ಲಿ ಬರ ಪರಿಸ್ಥಿತಿ ತೀವ್ರವಾಗಿರುವುದರಿಂದ  ಜಿಲ್ಲೆಯ  ಬರ ಪೀಡಿತ ತಾಲೂಕುಗಳಂತೆ ಅರಸೀಕೆರೆ ತಾಲೂಕಿಗೆ ಅನುದಾನ ನೀಡಿದರೆ ಬರ ನಿರ್ವಹಣೆ ಕಷ್ಟ ವಾಗುತ್ತದೆ. ಆದ್ದರಿಂದ ಅರಸೀಕೆರೆ ತಾಲೂಕಿಗೆ ಹೆಚ್ಚಿನ ಅನುದಾನ ನೀಡಬೇಕು.

ಕನಿಷ್ಟ 50 ಟನ್‌ ಮೇವನ್ನು ಶೀಘ್ರವಾಗಿ ಸಂಗ್ರಹಿಸಿ ಮೇವು  ಬ್ಯಾಂಕ್‌ ತೆರೆಯಬೇಕೆಂದು ಒತ್ತಾಯಿಸಿದರು. ಶಾಸಕರ ಆಗ್ರಹಕ್ಕೆ  ಸ್ಪಂದಿಸಿದ  ಸಚಿವ ಎ.ಮಂಜು ಅವರು,  ಈ ಬಗ್ಗೆ  ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ಅರಸೀಕೆರೆ ತಾಲೂಕಿಗೆ ಮೇವಿಗಾಗಿ ಹೆಚ್ಚುವರಿ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಶಾಸಕರುಗಳಾದ ಎಚ್‌.ಎಸ್‌.ಪ್ರಕಾಶ್‌, ಎಚ್‌.ಕೆ.ಕುಮಾರಸ್ವಾಮಿ ಮತ್ತು ಸಿ.ಎನ್‌.ಬಾಲಕೃಷ್ಣ ಅವರೂ  ತಮ್ಮ ಕ್ಷೇತ್ರಗಳಲ್ಲಿನ ಬರ ಪರಿಸ್ಥಿತಿ, ಕುಡಿವ ನೀರಿನ ಸಮಸ್ಯೆಗಳನ್ನು ಸಭೆಯ ಮುಂದಿಟ್ಟು ಹೆಚ್ಚಿನ ಅನುದಾನ ಒದಗಿಸಬೇಕು. ಇದೇ ವೇಳೆ ಈ ಹಿಂದೆ ರೈತರಿಗೆ ಬೆಳೆ ವಿಮೆ ಪರಿಹಾರ ಸರಿಯಾಗಿ ದೊರೆತಿಲ್ಲ.  ಜಿಲ್ಲೆಯಲ್ಲಿ  ಈ ವರ್ಷವೂ  ಹಿಂಗಾರು ಮತ್ತು ಮುಂಗಾರು ಮಳೆ ಸಂಪೂರ್ಣ ವಿಫ‌ಲವಾಗಿದೆ.

ಬೆಳೆ ಪರಿಹಾರವನ್ನು  ಸಕಾಲದಲ್ಲಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು  ಒಕ್ಕೊರಲು ಒತ್ತಾಯ ಮಂಡಿಸಿದರು. ಶಾಸಕರಾದ ಎಚ್‌.ಎಸ್‌.ಪ್ರಕಾಶ್‌ ಮಾತನಾಡಿ,  ಕೊಳವೆ ಬಾವಿಗಳನ್ನು ಕೊರೆಯಲು ಈ ಹಿಂದೆ  30 ರಿಂದ 40 ಸಾವಿರ ರೂ.ಅಂದಾಜಿಸಲಾಗಿತ್ತು. ಆದರೆ ಈಗ  300 ಅಡಿಗಳ ಬದಲು 800 ಅಡಿ ಕೊರೆದರೂ ನೀರು ಸಿಗದೆ ಬಿಲ್ಲಿನ ಮೊತ್ತ ಹೆಚ್ಚುತ್ತಿದೆ. ಕೊಳವೆ ಬಾವಿಗಳನ್ನು ಹೆಚ್ಚು ಆಳಕ್ಕೆ  ಕೊರೆದ  ವ್ಯತ್ಯಾಸದ ಮೊತ್ತವನ್ನು ಪಾವತಿ ಸಬೇಕು ಎಂದು  ಒತ್ತಾಯಿಸಿದರು.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-alur

Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.