ದೇವರ ಪೂಜೆಗೆಂದು ಕರೆದೊಯ್ದು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
Team Udayavani, Mar 5, 2017, 11:40 AM IST
ಬೆಂಗಳೂರು: ಮನೆಯಲ್ಲಿ ಒಬ್ಬಳೇ ಇದ್ದ 13 ವರ್ಷದ ಬಾಲಕಿಯನ್ನು ದೇವರ ಪೂಜೆ ಮತ್ತು ತಿಂಡಿ ಕೊಡಿಸುವ ನೆಪದಲ್ಲಿ ಕರೆದೊಯ್ದ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಫೆ. 22ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದಾರೆ. ಬಾಲಕಿಯ ಪೋಷಕರು ತಮಿಳುನಾಡು ಮೂಲದವರಾಗಿದ್ದು, ಕೆಲ ವರ್ಷಗಳಿಂದ ಸಂಜಯನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಆಕೆಯ ಪೋಷಕರಿಬ್ಬರೂ ಬೀದಿ ಬದಿ ತಳ್ಳುಗಾಡಿಯಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. ಸಂತ್ರಸ್ತ ಬಾಲಕಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ.
ಫೆ. 22ರಂದು ಶಾಲೆಯಿಂದ ಮನೆಗೆ ಬಂದಿದ್ದ ಬಾಲಕಿ ಸಂಜೆ ಮನೆಯಲ್ಲಿ ಒಬ್ಬಳೇ ಇದ್ದಳು. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ಬಂದು, ನಮ್ಮ ಮನೆಯಲ್ಲಿ ದೇವರ ಪೂಜೆ ಮಾಡಿದ್ದೇವೆ. ಹಣ್ಣ-ಹಂಪಲು ಹಾಗೂ ತಿಂಡಿ ಕೊಡುತ್ತೇನೆ ಎಂದು ಆಕೆಯನ್ನು ಪುಸಲಾಯಿಸಿದ್ದ. ಆತನ ಮಾತು ನಂಬಿದ ಬಾಲಕಿ ಆತನೊಂದಿಗೆ ತೆರಳಿದ್ದಳು.
ತನ್ನ ಮನೆಗೆ ಕರೆದುಕೊಂಡು ಹೋಗುವುದಾಗಿ ಹೇಳಿದ್ದ ದುಷ್ಕರ್ಮಿ ಆ ಬಾಲಕಿಯನ್ನು ರಾಜಾನುಕುಂಟೆ ಅರಣ್ಯಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆ. 22ರಂದು ರಾತ್ರಿ ಬಾಲಕಿಯ ಪೋಷಕರು ಹಣ್ಣಿನ ವ್ಯಾಪಾರ ಮುಗಿಸಿ ಮನೆಗೆ ಬಂದಾಗ ಮಗಳು ಕಾಣಲಿಲ್ಲ. ಇದರಿಂದ ರಾತ್ರಿಯಿಡೀ ಹುಡುಕಾಡಿ ಸಂಜಯನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಈ ಮಧ್ಯೆ ಫೆ.23 ರಂದು ಬೆಳಗಿನ ಜಾವ ಬಾಲಕಿ ಮನೆಗೆ ಬಂದಿದ್ದು, ಬಳಲಿದಂತೆ ಕಂಡು ಬಂದಿದ್ದಳು. ಆಕೆಯನ್ನು ಪ್ರಶ್ನಿಸಿದಾಗ ನಡೆದ ಘಟನೆ ವಿವರಿಸಿದ್ದಾಳೆ. ಕೂಡಲೇ ಬಾಲಕಿ ಪೋಷಕರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಆರೋಪಿ ವಿರುದ್ಧ ಪೋಕೊÕà ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಬಾಲಕಿಯನ್ನು ಪ್ರಶ್ನಿಸಲಾಗಿದ್ದು, ತನ್ನನ್ನು ಕರೆದೊಯ್ದ ವ್ಯಕ್ತಿ ಆಟೋದಲ್ಲಿ ವಾಪಸ್ ತಂದು ಮನೆ ಬಳಿ ಬಿಟ್ಟುಹೋಗಿರುವುದಾಗಿ ಹೇಳಿಕೆ ನೀಡಿದ್ದಾಳೆ. ಆಘಾತದಲ್ಲಿರುವ ಬಾಲಕಿ ಚೇತರಿಸಿಕೊಂಡ ಬಳಿಕ ಮಾಹಿತಿ ಪಡೆಯಲಾಗುವುದು. ಆರೋಪಿ ಬಂಧನಕ್ಕೆ ತಂಡ ರಚಿಸಲಾಗಿದ್ದು, ಸ್ಥಳೀಯ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
***
ಪ್ರೇಮದ ನಾಟಕ, ಬಳಿಕ ಅತ್ಯಾಚಾರ
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ 27 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಹನುಮಂತ ನಗರ ಪೊಲೀಸರು ಬಂಧಿಸಿದ್ದಾರೆ. ಜಯನಗರ ನಿವಾಸಿ ರವಿಕುಮಾರ್ (32) ಬಂಧಿತ.
ಗುಜರಾತ್ ಮೂಲದ ಈತ ಕೆ.ಆರ್.ಪುರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಅದೇ ಕಂಪನಿಯಲ್ಲೇ ಯುವತಿ ಕೂಡ ಕೆಲಸ ಮಾಡುತ್ತಿದ್ದರು. ಕಚೇರಿಯಲ್ಲಿಯೇ ಇಬ್ಬರಿಗೂ ಸ್ನೇಹವಾಗಿ ಸ್ನೇಹ ಪ್ರೀತಿಗೆ ತಿರುಗಿತ್ತು. ಮದುವೆಯಾಗುವುದಾಗಿ ನಂಬಿಸಿದ ಆರೋಪಿ ಒಂದೂವರೆ ವರ್ಷದಲ್ಲಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿ ಮದುವೆಗೆ ನಿರಾಕರಿಸಿದ್ದರಿಂದ ಯುವತಿ ರವಿಕುಮಾರ್‌ನ ಪೋಷಕರ ಬಳಿ ಮೊದಲು ದೂರಿದ್ದರು. ಆದರೆ ರವಿಕುಮಾರ್‌ನ ಪೋಷಕರೂ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಯುವತಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ.
***
ಮದುವೆ ಆಗೋದಾಗಿ ನಂಬಿಸಿ ನಿರಂತರ ಅತ್ಯಾಚಾರ
ಬೆಂಗಳೂರು: ವಿವಾಹ ಆಗುವುದಾಗಿ ನಂಬಿಸಿ ವ್ಯಾಪಾರಿಯೊಬ್ಬರು ನಿರಂತರವಾಗಿ ಅತ್ಯಾಚಾರ ನಡೆಸಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ 39 ವರ್ಷದ ಮಹಿಳೆಯೊಬ್ಬರು ಸಂಜಯನಗರ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 40 ವರ್ಷದ ವ್ಯಾಪಾರಿಗೆ ವಿವಾಹವಾಗಿದ್ದು, ಕಳೆದ 16 ವರ್ಷಗಳಿಂದ ಮಹಿಳೆ ಜತೆ ಸ್ನೇಹವೊಂದಿದ್ದರು. ಸ್ನೇಹ ಪ್ರೀತಿಗೆ ತಿರುಗಿತ್ತು ಎಂದು ಹೇಳಲಾಗಿದೆ.
“ಮೊದಲ ಪತ್ನಿಗೆ ವಿಚ್ಚೇದನ ನೀಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿ ನನ್ನನ್ನು ಪ್ರೀತಿಸುತ್ತಿರುವುದಾಗಿ ಹೇಳಿದ್ದರು. ಇಬ್ಬರು ಒಟ್ಟಿಗೆ ಒಂದೆ ಮನೆಯಲ್ಲಿ ಜೀವನ ನಡೆಸುತ್ತಿದ್ದೆವು. ವಿವಾಹವಾಗುವುದಾಗಿ ನಂಬಿಸಿ ಹಲವು ಬಾರಿ ನನ್ನ ಜತೆ ದೈಹಿಕ ಸಂಪರ್ಕ ಸಾಧಿಸಿದ್ದರು. ಇದೀಗ ವಿವಾಹವಾಗದೆ ವಂಚನೆ ಮಾಡಿದ್ದಾರೆ,” ಎಂದು ಮಹಿಳೆ ದೂರಿನಲ್ಲಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್’
Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ
Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ
Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ
Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್
MUST WATCH
ಹೊಸ ಸೇರ್ಪಡೆ
Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!
Udupi: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
25 ಬಿಲಿಯನ್ ಕಿ.ಮೀ ದೂರದ ಅಂತರತಾರಾ ಬಾಹ್ಯಾಕಾಶದಲ್ಲಿ ಸಮಸ್ಯೆಗೆ ಸಿಲುಕಿದ ವೊಯೇಜರ್ 1
Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್’
Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.