ಎಚ್‌ಎಎಲ್ ವಿಮಾನ ನಿಲ್ದಾಣ ಬಳಕೆಗೆ ದೇವೇಗೌಡರ ಆಗ್ರಹ
Team Udayavani, Mar 5, 2017, 11:59 AM IST
ಬೆಂಗಳೂರು: “ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸುವ ಕಾಮಗಾರಿಯಿಂದಾಗಿ ಹಗಲಿನ ವೇಳೆ ವಿಮಾನ ಹಾರಾಟ ಸ್ಥಗಿತಗೊಂಡಿದೆ. ಹೀಗಾಗಿ ಪ್ರಯಾಣಿಕರಿಗೆ ತೀರಾ ತೊಂದರೆಯಾಗಿದೆ. ಇದಕ್ಕೆ ಪರ್ಯಾಯವಾಗಿ ಎಚ್‌ಎಎಲ್ ವಿಮಾನ ನಿಲ್ದಾಣ ಬಳಕೆ ಮಾಡಬೇಕು,” ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿತ್ಯ 426 ದೇಶೀ ವಿಮಾನ, 26 ಅಂತಾರಾಷ್ಟ್ರೀಯ ವಿಮಾನಗಳು ಸಂಚರಿಸುತ್ತಿದ್ದವು. ಇದೀಗ ಬಹುತೇಕ ವಿಮಾನಗಳ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಬಹಳ ಸಮಸ್ಯೆಯಾಗಿದೆ,” ಎಂದು ಅವರು ಹೇಳಿದರು.
“ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ನಡೆಸಲು ಯಾವುದೇ ಅಡ್ಡಿಯಿಲ್ಲ. ಎಚ್‌ಎಎಲ್ ಅಧ್ಯಕ್ಷರೂ ಒಪ್ಪಿದ್ದಾರೆ. ನಾನೂ ಮಾತನಾಡಿದ್ದೇನೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವರು ಈ ಬಗ್ಗೆ ವಿಶೇಷ ಗಮನ ನೀಡಬೇಕು,” ಎಂದು ಆಗ್ರಹಿಸಿದರು. “ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 150 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತೂಂದು ವಿಮಾನ ನಿಲ್ದಾಣ ಬರುವಂತಿಲ್ಲ ಎಂಬುದು ಸರಿಯಲ್ಲ.
ಲಂಡನ್, ನ್ಯಾಯಾರ್ಕ್‌ನಲ್ಲಿ ಎಷ್ಟು ವಿಮಾನ ನಿಲ್ದಾಣಗಳಿವೆ. ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದಿರುವ ಬೆಂಗಳೂರಿಗೆ ಮತ್ತೂಂದು ವಿಮಾನ ನಿಲ್ದಾಣ ಅಗತ್ಯವಿದೆ. ಎಚ್‌ಎಎಲ್‌ಅನ್ನೂ ಸಹ ಬಳಕೆ ಮಾಡಬಹುದು, ಇಲ್ಲವೇ ಇನ್‌ಫೋಸಿಸ್ ನಾರಾಯಣಮೂರ್ತಿ ಅವರು ಹೇಳಿರುವಂತೆ ಹೊಸೂರು ರಸ್ತೆಯಲ್ಲೂ ವಿಮಾನ ನಿಲ್ದಾಣ ಮಾಡಬಹುದು,” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.