ಇ-ಸ್ಟಾಂಪಿಂಗ್ ಅವಧಿ ವಿಸ್ತರಣೆ
Team Udayavani, Mar 6, 2017, 3:45 AM IST
ಬೆಂಗಳೂರು:ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಈಗಾಗಲೇ ರಾಜ್ಯಾದ್ಯಂತ ಅಸ್ತಿತ್ವದಲ್ಲಿರುವ “ಇ-ಸ್ಟಾಂಪಿಂಗ್’ ಪದ್ದತಿಯ ಒಂದು ವರ್ಷದ ಅವಧಿಗೆ ವಿಸ್ತರಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ “ಇ-ಸ್ಟಾಂಪಿಂಗ್’ ಪದ್ದತಿ ಜಾರಿಗೆ ತರಲು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹಾಗೂ ಸ್ಟಾಕ್ ಹೋಲ್ಡಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ ನಡುವೆ ಮಾಡಿಕೊಂಡಿದ್ದ ಒಪ್ಪಂದದ ಅವಧಿ 2017ರ ಜ.24ಕ್ಕೆ ಮುಗಿದಿದ್ದು, ಅದನ್ನು ಇನ್ನೊಂದು ವರ್ಷಕ್ಕೆ ಅಂದರೆ, 2018ರ ಜ.24ರವರೆಗೆ ಅನ್ವಯ ಆಗುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
“ಇ-ಸ್ಟಾಂಪಿಂಗ್’ ವ್ಯವಸ್ಥೆಯನ್ನು 2009ರಲ್ಲಿ ಮೊದಲು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ನಂತರ 2010ರಲ್ಲಿ ಐದು ವರ್ಷದ ಕರಾರು ಅವಧಿಯೊಂದಿಗೆ ಸ್ಟಾಕ್ ಹೋಲ್ಡಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ ಜೊತೆಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಇ-ಸ್ಟಾಂಪಿಂಗ್ ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೆ ತಂದಿತ್ತು. ಬಳಿಕ ಪ್ರತಿ ಒಂದು ವರ್ಷಕ್ಕೆ ಕರಾರು ಮಾಡಿಕೊಳ್ಳಲಾಗುತ್ತಿದೆ.
ಇ-ಸ್ಟಾಂಪಿಂಗ್ ಪದ್ದತಿ ಅನುಷ್ಠಾನಗೊಳಿಸಲು ನೇಮಿಸಿಕೊಳ್ಳಲು ಉದ್ದೇಶಿಸಿರುವ ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು, ಅಂಚೆ ಕಚೇರಿಗಳು ಮಾರಾಟ ಮಾಡುವ ಪ್ರತಿ ಇ-ಸ್ಟಾಂಪಿಂಗ್ ಸರ್ಟಿಫಿಕೇಟ್ಗೆ, ಅಂದರೆ 100 ರೂ. ಮುಖ ಬೆಲೆಯವರೆಗೂ 10 ರೂ. ಹಾಗೂ 101 ರೂ. ಯಿಂದ 5 ಸಾವಿರ ಮುಖ ಬೆಲೆಯುಳ್ಳ ಸರ್ಟಿಫಿಕೇಟ್ಗೆ 15 ರೂ.ಗಳಂತೆ ಸೇವಾ ಶುಲ್ಕವನ್ನು ಸಾರ್ವಜನಿಕರಿಂದ ಪಡೆಯಲು ಅನುಮೋದನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.