ಕೆರೆ ಉಳಿಸದಿದ್ದರೆ ಆಪತ್ತು ತಪ್ಪಿದ್ದಲ್ಲ


Team Udayavani, Mar 6, 2017, 12:54 PM IST

dvg7.jpg

ಹರಿಹರ: ಜೀವಸೆಲೆಗಳಾಗಿರುವ ಕೆರೆಗಳ ಉಳಿಸದಿದ್ದರೆ ಸಕಲ ಜೀವಿಗಳಿಗೂ ಆಪತ್ತು ಎದುರಾಗಲಿದೆ ಎಂದು ನೀರಾವರಿ ತಜ್ಞ ನಿವೃತ್ತ ಇಂಜಿನಿಯರ್‌ ಬಸವರಾಜ್‌ ಕುಂಚೂರು ಹೇಳಿದರು. ನಗರದ ಗಿರಿಯಮ್ಮ ಕಾಂತಪ್ಪ ಶ್ರೇಷ್ಠಿಮಹಿಳಾ ಕಾಲೇಜಿನಲ್ಲಿ ಪರಸ್ಪರ ಬಳಗ ಏರ್ಪಡಿಸಿದ್ದ ನೀರಿನ ನಿರ್ವಹಣೆ ಕುರಿತ ಸಂವಾದದಲ್ಲಿ ಮಾತನಾಡಿದರು.

ಕೆರೆಗಳು ನಮ್ಮ ಜೀವಸೆಲೆಗಳಾಗಿವೆ. ನಮ್ಮ ಸ್ವಾರ್ಥದಿಂದ ಕೆರೆಗಳನ್ನು ನುಂಗಿ ನೀರು ಕುಡಿದಿದ್ದೇವೆ. ಈಗಲಾದರೂ ನಾವು ಎಚ್ಚೆತ್ತುಕೊಳ್ಳದಿದ್ದರೆ ನಮಗೆ ಉಳಿಗಾಲವಿಲ್ಲ ಎಂದರು. ಇಂದು ದೇಶದಲ್ಲಿ ನೀರಿಗಾಗಿಹೊಡೆದಾಟ, ಬಡಿದಾಟ, ಪ್ರಾಣಹಾನಿಯೂ ಆಗುತ್ತಿವೆ. ಹಿಂದೆಯೂ ಬರಗಾಲ ಬರುತ್ತಿದ್ದವು ಆದರೆ ಕೆರೆ ಕಟ್ಟೆಗಳಿದ್ದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿರಲಿಲ್ಲ.

ಆದರೆ ಇಂದುಮನುಷ್ಯನ ದುರಾಸೆಗೆ ಕೆರೆಗಳು ಕಣ್ಮರೆಯಾಗಿವೆ. ಕೆರೆಗಳಿರುವ ಜಾಗದಲ್ಲಿ ಬಹುಮಹಡಿ ಕಟ್ಟಡಗಳು ತಲೆ ಎತ್ತಿವೆ. ಅಂತರ್ಜಲ ಬತ್ತಿ ನೀರಿಗೆ ಬರ ಬಂದಿದೆ ಎಂದರು. ವಿಜ್ಞಾನ ತಂತ್ರಜ್ಞಾನ ಇರುವುದು ಮಾನವನ ಒಳಿತಿಗೆ. ಆದರೆ ಸ್ವಾರ್ಥಕ್ಕಾಗಿ ದುರ್ಬಳಕೆಯಾಗುತ್ತಿದೆ. ನೀರನ್ನು ಉತ್ಪತ್ತಿ ಮಾಡಲು ನಮಗೆ ಸಾಧ್ಯವಿಲ್ಲ, ಅದು ಪ್ರಕೃತಿಯ ಕೊಡುಗೆ.

ಆದ್ದರಿಂದ ನಾವು ನೀರನ್ನು ಅತಿ ಜಾಗರೂಕತೆಯಿಂದ ಉಪಯೋಗಿಸಬೇಕೆಂದರು. ಈಗ ಭೂಮಿಯ ಅಂತರಾಳದಲ್ಲಿರುವ ಜಲರಾಶಿ ಬರಿದಾಗಿದೆ. ನಮಗೆ ನೀರಿನ ಬಗ್ಗೆ ಕಾಳಜಿವಹಿಸುವುದು ಅಗತ್ಯವಾಗಿದೆ ಎಂದರು. ಹಿಂದೆ ಕೆರೆಗಳು ಶ್ರಮ ಸಂಸ್ಕೃತಿಯ ಪ್ರತೀಕವಾಗಿದ್ದವು. ಚಾಲುಕ್ಯ, ವಿಜಯನಗರ ಅರಸರ ಕಾಲದಲ್ಲಿ ಅತಿ ಹೆಚ್ಚು ಕೆರೆಗಳು ನಿರ್ಮಾಣಗೊಂಡವು.

ವಿಜಯನಗರ ಸಾಮ್ರಾಜ್ಯದ ಸಮಯದಲ್ಲಿ 72 ಕೆರೆಗಳು, 12 ಅಣೆಕಟ್ಟೆಗಳು ನಿರ್ಮಾಣಗೊಂಡಿದ್ದವು. ಹಿಂದೆ ಗೌಡ, ಪಟೇಲ, ತಳವಾರರ ಅಧೀನದಲ್ಲಿ ಸುರಕ್ಷಿತವಾಗಿದ್ದ ಕೆರೆಗಳು ಸರಕಾರದ ಅಧಿಧೀನಕ್ಕೊಳಪಟ್ಟ ನಂತರ ಒತ್ತುವರಿಯಾಗಿ ನಾಪತ್ತೆಯಾಗಿರುವುದು ದುರಂತ ಎಂದರು. 

ಬೃಹತ್‌ ಅಣೆಕಟ್ಟೆಗಳ ನಿರ್ಮಾಣಕ್ಕಿಂತ ಸಣ್ಣ, ಪುಟ್ಟ ಬ್ಯಾರೇಜ್‌ ನಿರ್ಮಾಣ ತುಂಬಾ ಒಳ್ಳೆಯದು. ಕೆರೆಗಳಲ್ಲಿ ಸ್ವಾಭಾವಿಕವಾಗಿ ನೀರು ತುಂಬಿಕೊಳ್ಳಬೇಕು, ಕೃತಕವಾಗಿ ನದಿಗಳಿಂದ ನೀರು ತುಂಬಿಸುವುದು ಸೂಕ್ತವಲ್ಲ, ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಈ ರೀತಿ ನೀರು ತುಂಬಿಸಬಹುದಾಗಿದೆ ಎಂದರು.

ನಗರದ ನೀರಿನ ಅಭಾವ ನಿವಾರಿಸಲು ಅಗಸನಕಟ್ಟೆ ಕೆರೆ ಅಭಿವೃದ್ಧಿಪಡಿಸಲು ಮತ್ತು ತುಂಗಭದ್ರಾ ನದಿಗೆ ಬ್ಯಾರೇಜ್‌ ನಿರ್ಮಿಸಲು ಸರಕಾರದ ಮೇಲೆ ಒತ್ತಡ ತರಲು ಸಭೆಯಲ್ಲಿ ನಿರ್ಣಯಿಸಲಾಯಿತು. ನಗರದ ಎಲ್ಲಾ ಸಂಘ-ಸಂಸ್ಥೆಗಳ ಸದಸ್ಯರ ಸಭೆ ಸೇರಿಸಿ ಚರ್ಚಿಸಿ ಹಂತ ಹಂತವಾಗಿ ಹೋರಾಟ ಕೈಗೊಳ್ಳಲು ನಿರ್ಧರಿಸಲಾಯಿತು. ಜೆ.ಕಲೀಂಭಾಷಾ, ದಿನೇಶ್‌, ಸುಬ್ರಹ್ಮಣ್ಯ ನಾಡಿಗೇರ್‌ ಮತ್ತಿತರರಿದ್ದರು.  

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.