ಹೋಳಿ ಹುಣ್ಣಿಮೆ ಹಲಿಗೆ ಸಂಚಲನ ಮೇಳಕ್ಕೆ ಚಾಲನೆ
Team Udayavani, Mar 6, 2017, 1:01 PM IST
ಧಾರವಾಡ: “ಜಾನಪದ ಸೊಗಡು ಹೋಳಿ ಹುಣ್ಣಿಮೆ ಆಚರಿಸಿ ಹಿಂದೂ ಸಂಪ್ರದಾಯ ಉಳಿಸಿ’ ಎಂಬ ಘೋಷವಾಕ್ಯದಡಿ ಹೋಳಿ ಹುಣ್ಣಿಮೆ ಆಚರಣಾ ಸಮಿತಿಯಿಂದ ನಗರದಲ್ಲಿ ರವಿವಾರ ಹಲಿಗೆ ಸಂಚಲನ (ಬಾರಿಸುವ) ಕಾರ್ಯಕ್ರಮ ನಡೆಯಿತು. ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಕಾಮನಕಟ್ಟಿ ರಸ್ತೆಯ ಶ್ರೀಪ್ಯಾಟಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಹಲಿಗೆ ಸಂಚಲನಕ್ಕೆ ಚಾಲನೆ ನೀಡಿದರು.
ಅಲ್ಲಿಂದ ಹೊರಟ ಹಲಿಗೆ ಬಾರಿಸುವ ಮೇಳನಗರದ ಭೂಸಪ್ಪ ಚೌಕ್, ಲೈನ್ ಬಜಾರ್, ಟಿಕಾರೆ ರಸ್ತೆ, ವಿವೇಕಾಂನ ವೃತ್ತ, ಗಾಂಧಿ ಚೌಕ್ ಮಾರ್ಗವಾಗಿ ಚರಂತಿಮಠ ಗಾರ್ಡನ್ನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ತೆರಳಿತು. ಸಾವಿರಾರು ಜನರು ಭಾಗವಹಿಸಿದ್ದರು.
ಹಲಿಗೆ ಬಾರಿಸುವ ತಂಡದೊಂದಿಗೆ, ಕೆಸರಿ ಧ್ವಜ, ಪೇಟ, ಶಾಲುಗಳನ್ನು ಧರಿಸಿ ಯುವಕರು ಮೆರವಣಿಗೆಗೆ ಮೇರಗು ತಂದರು. ಈ ವೇಳೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿತ್ತು. ಈ ವೇಳೆ ಹೋಳಿ ಹುಣ್ಣಿಮೆ ಆಚರಣಾ ಸಮಿತಿ ಅಧ್ಯಕ್ಷ ಶಂಕರ ಶಳಕೆ, ಶಾಸಕ ಅರವಿಂದ ಬೆಲ್ಲದ, ಅಮೃತ ದೇಸಾಯಿ,
ನಿರ್ಮಲಾ ಜವಳಿ, ಸಮಿತಿಯ ಉಪಾಧ್ಯಕ್ಷ ಶ್ರೀನಿವಾಸ ಪಾಟೀಲ, ರಾಮಚಂದ್ರ ಜಿಗಾಂವಕರ, ಸಂಜಯ ಕಪಟಕರ, ಶಿವು ಹಿರೇಮಠ, ಪೂರ್ಣಾ ಪಾಟೀಲ, ಶಕ್ತಿಕುಮಾರ ಹಿರೇಮಠ, ಪ್ರೀತೇಶ ಜಾಧವ, ಕಿರಣ ತೊಗ್ಗಿ, ಮಹೇಶ ಸೋಲಾಕೆ, ರಾಕೇಶ ನಾಝರೆ, ಗಣೇಶ ಪಾಟೀಲ, ವಿನೋದ ಜಾಧವ ಹಾಗೂ ಕಾಮನಕಟ್ಟಿಯ ಹಿರಿಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.